ಬೆಂಗಳೂರು: ಕಾಂಗ್ರೆಸ್ ಪಕ್ಷದ 17 ಶಾಸಕರನ್ನು ಸ್ಪೀಕರ್ ಅನರ್ಹಗೊಳಿಸಿದ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಉಪಚುನಾವಣೆ ಚಟುವಟಿಕೆಗಳು ಗರಿಗೆದರಿದ್ದು, ಆ ಎಲ್ಲಾ 17 ವಿಧಾನಸಭಾ ಕ್ಷೇತ್ರಗಳಲ್ಲಿ ವೀಕ್ಷಕರನ್ನು ನೇಮಿಸಿದೆ. 


COMMERCIAL BREAK
SCROLL TO CONTINUE READING

ಎಲ್ಲಾ 17 ಕ್ಷೇತ್ರಗಳಲ್ಲಿ ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರನ್ನೇ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದ್ದು, ಈಗಿನಿಂದಲೇ ಉಪಚುನಾವಣೆಯಲ್ಲಿ ಗೆಲ್ಲಲು ರಣತಂತ್ರ ರೂಪಿಸಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಆದೇಶದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.


ಕ್ಷೇತ್ರಾವಾರು ವೀಕ್ಷಕರ ಪಟ್ಟಿ ಹೀಗಿದೆ..


ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಎಂ.ಬಿ.ಕೃಷ್ಣಪ್ಪ, ಟಿ.ಬಿ.ಜಯಚಂದ್ರ, ಎಂಎಲ್ಸಿಗಳಾದ ಎಂ.ಸಿ.ವೇಣುಗೋಪಾಲ್, ಯುಬಿ ವೆಂಕಟೇಶ್ ನಾಯ್ಡು
ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ- ಕೆ.ಜೆ.ಜಾರ್ಜ್, ಭೈರತಿ ಸುರೇಶ
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ- ಡಿ.ಕೆ. ಸುರೇಶ, ಹೆಚ್.ಎಂ.ರೇವಣ್ಣ
ಗೊಸಕೋಟೆ ವಿಧಾನಸಭಾ ಕ್ಷೇತ್ರ- ಕೃಷ್ಣ ಬೈರೇಗೌಡ, ವಿ.ಆರ್.ಸುದರ್ಶನ್
ಶಿವಾಜಿನಗರ ವಿಧಾನಸಭಾ ಕ್ಷೇತ್ರ- ಯು.ಟಿ.ಖಾದರ್, ಎನ್.ಎಚ್.ಹ್ಯಾರಿಸ್, ಕೆ.ಗೋವಿಂದರಾಜು 
ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರ- ಚೆಲುವರಾಯಸ್ವಾಮಿ, ನರೇಂದ್ರ ಸ್ವಾಮಿ, ಬಂಡಿಸಿದ್ದೇಗೌಡ
ಹುಣಸೂರು ವಿಧಾನಸಭಾ ಕ್ಷೇತ್ರ-  ಎಚ್‌.ಸಿ.ಮಹದೇವಪ್ಪ, ಯತೀಂದ್ರ ಸಿದ್ದರಾಮಯ್ಯ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಕೆ.ವೆಂಕಟೇಶ್ ಸೇರಿದಂತೆ ಅನೇಕರನ್ನು ಇತರ ಎಲ್ಲಾ 17 ವಿಧಾನಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನು ಕಾಂಗ್ರೆಸ್ ನೇಮಿಸಿದೆ.