ಚಾಮರಾಜನಗರದಲ್ಲಿ ಕಾಂಗ್ರೆಸ್- ಬಿಜೆಪಿ ಜಿದ್ದಾಜಿದ್ದಿ: ಯಾರೇ ಗೆದ್ದರೂ ಮೊದಲ ಬಾರಿ ಸಂಸತ್ ಗೆ ಪ್ರವೇಶ

ಚಾಮರಾಜನಗರ ಲೋಕಸಭಾ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾದ ಕ್ಷೇತ್ರವಾಗಿದೆ. ಕ್ಷೇತ್ರದಲ್ಲಿ ಬಿಜೆಪಿ ಓರ್ವ ಶಾಸಕನೂ ಇಲ್ಲದಿರುವುದು, ಸಿದ್ದರಾಮಯ್ಯ ವರುಣ ಕೂಡ ಕ್ಷೇತ್ರಕ್ಕೆ ಒಳಪಡುವುದು ಹಾಗೂ ಗ್ಯಾರಂಟಿಗಳ ಮಹಿಮೆಯಿಂದ ಕಾಂಗ್ರೆಸ್ ಗೆಲ್ಲಲ್ಲಿದೆ ಎಂಬುದು ಕೈ ಪಕ್ಷದ ವಿಶ್ವಾಸವಾದರೇ, ಮೋದಿ ನಾಮಬಲ ಹಾಗೂ ಬಾಲರಾಜು ಸಜ್ಜನ ರಾಜಕಾರಣಿ ಎಂಬ ದಿಸೆಯಲ್ಲಿ ಮತಗಳು ಸಿಕ್ಕು ಕಮಲ ಅರಳುವ ಲೆಕ್ಕಾಚಾರದಲ್ಲಿ ಬಿಜೆಪಿ  ತೊಡಗಿದೆ.

Written by - Yashaswini V | Last Updated : Jun 3, 2024, 03:12 PM IST
  • ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಒಟ್ಟು 14 ಮಂದಿ ಕಣದಲ್ಲಿದ್ದು ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರಾ ಹಣಾಹಣಿ ಇದೆ.
  • ಕಳೆದ ಚುನಾವಣೆಯಲ್ಲಿ ಬಿಎಸ್ಪಿ ಉತ್ತಮ ಸ್ಪರ್ಧೆ ಒಡ್ಡಿದ್ದರಿಂದ ಈ ಬಾರಿ ಆನೆಯ ಮತ ಗಳಿಕೆಯೂ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಚಾಮರಾಜನಗರದಲ್ಲಿ ಕಾಂಗ್ರೆಸ್- ಬಿಜೆಪಿ ಜಿದ್ದಾಜಿದ್ದಿ: ಯಾರೇ ಗೆದ್ದರೂ ಮೊದಲ ಬಾರಿ ಸಂಸತ್ ಗೆ ಪ್ರವೇಶ title=

Chamrajnagar Loksabha Constituency Result: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರ ಒಳಗೊಂಡಿರುವ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರಾ ಹಣಾಹಣಿ ಏರ್ಪಟ್ಟಿದೆ. ಹಾಲಿ ಬಿಜೆಪಿ ವಶದಲ್ಲಿದ್ದ ಕ್ಷೇತ್ರವನ್ನು ಮತ್ತೇ ತನ್ನ ವಶ ಆಗಲಿದೆ ಎಂಬುದು ಕೈ ಪಾಳೇಯದ ವಿಶ್ವಾಸವಾದರೇ ಕ್ಷೇತ್ರದಲ್ಲಿ ಎರಡನೇ ಬಾರಿ ಕಮಲ ಅರಳಲಿದೆ ಎಂಬುದು ಬಿಜೆಪಿಗರ ಮಾತಾಗಿದೆ.

ಮೋದಿ ಅಲೆ- ಸಿದ್ದರಾಮಯ್ಯ (Siddaramaiah) ಹವಾ ಎರಡರ ನಡುವೆ ಜಂಗಿಕುಸ್ತಿ ನಡೆದಿರುವುದರಿಂದ ರಾಜ್ಯದ ಹೈವೊಲ್ಟೆಜ್ ಕ್ಷೇತ್ರಗಳಲ್ಲಿ ಚಾಮರಾಜನಗರ ಕೂಡ  ಒಂದಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಎಸ್.ಬಾಲರಾಜು ಬಿಜೆಪಿ ಹಾಗೂ ಜಾತ್ಯತೀತ ಜನತಾದಳ ಮೈತ್ರಿ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್​ನಿಂದ ಸಚಿವ ಎಚ್.ಸಿ.ಮಹಾದೇವಪ್ಪ ಪುತ್ರ ಸುನಿಲ್ ಬೋಸ್ ಕಣಕ್ಕಿಳಿದಿದ್ದಾರೆ. 

ಚಾಮರಾಜನಗರ ಲೋಕಸಭಾ ಕ್ಷೇತ್ರ (Chamrajnagar Loksabha Constituency) ಪರಿಶಿಷ್ಟ ಜಾತಿಗೆ ಮೀಸಲಾದ ಕ್ಷೇತ್ರವಾಗಿದೆ. ಕ್ಷೇತ್ರದಲ್ಲಿ ಬಿಜೆಪಿ ಓರ್ವ ಶಾಸಕನೂ ಇಲ್ಲದಿರುವುದು, ಸಿದ್ದರಾಮಯ್ಯ ವರುಣ ಕೂಡ ಕ್ಷೇತ್ರಕ್ಕೆ ಒಳಪಡುವುದು ಹಾಗೂ ಗ್ಯಾರಂಟಿಗಳ ಮಹಿಮೆಯಿಂದ ಕಾಂಗ್ರೆಸ್ ಗೆಲ್ಲಲ್ಲಿದೆ ಎಂಬುದು ಕೈ ಪಕ್ಷದ ವಿಶ್ವಾಸವಾದರೇ, ಮೋದಿ ನಾಮಬಲ ಹಾಗೂ ಬಾಲರಾಜು ಸಜ್ಜನ ರಾಜಕಾರಣಿ ಎಂಬ ದಿಸೆಯಲ್ಲಿ ಮತಗಳು ಸಿಕ್ಕು ಕಮಲ ಅರಳುವ ಲೆಕ್ಕಾಚಾರದಲ್ಲಿ ಬಿಜೆಪಿ  ತೊಡಗಿದೆ.

ಇದನ್ನೂ ಓದಿ- Zee AI Exit Poll: ಕೇಂದ್ರದಲ್ಲಿ ಮೋದಿ ಜಯಭೇರಿ, ರಾಜ್ಯದಲ್ಲಿ ಯಾರಿಗೆ ಹೆಚ್ಚು ಸ್ಥಾನ ಗೊತ್ತಾ?

ಚಾಮರಾಜನಗರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳು (Assembly Constituencies) ಹಾಗೂ ಮೈಸೂರು ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳು ಸೇರಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳು ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡಲಿದೆ. ಕಾಂಗ್ರೆಸ್ ನ 7 ಹಾಗೂ ಜೆಡಿಎಸ್ ನ ಓರ್ವ ಶಾಸಕರು ಕ್ಷೇತ್ರದಲ್ಲಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ (Chamrajnagar Loksabha Constituency) ಚುನಾವಣೆಯಲ್ಲಿ ಒಟ್ಟು 14 ಮಂದಿ ಕಣದಲ್ಲಿದ್ದು ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರಾ ಹಣಾಹಣಿ ಇದೆ. ಕಳೆದ ಚುನಾವಣೆಯಲ್ಲಿ  ಬಿಎಸ್ಪಿ ಉತ್ತಮ ಸ್ಪರ್ಧೆ ಒಡ್ಡಿದ್ದರಿಂದ ಈ ಬಾರಿ ಆನೆಯ ಮತ ಗಳಿಕೆಯೂ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಬಿಜೆಪಿ ಅಭ್ಯರ್ಥಿಯಾಗಿರುವ ಬಾಲರಾಜು (BJP Candidate Balaraj) ಅವರು ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆದಿದ್ದು 1991 ರಲ್ಲಿ ಮುತ್ಸದಿ ರಾಜಕಾರಣಿ ಎಂ.ರಾಜಶೇಖರಮೂರ್ತಿ ಅವರ ಗರಡಿಯಿಂದ ಬಂದ ರಾಜಕಾರಣಿಯಾಗಿದ್ದಾರೆ.  ರಾಜಶೇಖರಮೂರ್ತಿ ಶಿಷ್ಯನಾಗಿ ಕಾಂಗ್ರೆಸ್ ಮೂಲಕ ರಾಜಕೀಯಕ್ಕೆ ಬಂದು ವಿವಿಧ ಘಟಕಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅದಾದ ಬಳಿಕ, 1993 ರಲ್ಲಿ ಟಿಎಪಿಎಂಎಸ್ ನಿರ್ದೇಶಕರಾಗಿ ಆಯ್ಕೆಯಾಗಿ 1997 ರಲ್ಲಿ ಯುವ ಕಾಂಗ್ರೆಸ್ ಚಾಮರಾಜನಗರ ವಿಭಾಗದ ಅಧ್ಯಕ್ಷರಾದರು. 1999 ರಲ್ಲಿ ರಾಜಶೇಖರಮೂರ್ತಿ ಅವರೊಟ್ಟಿಗೆ ಬಿಜೆಪಿಗೆ ಸೇರ್ಪಡೆಗೊಂಡು ಕೊಳ್ಳೇಗಾಲ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ 5421 ಮತಗಳಿಂದ ಸೋಲು ಕಂಡರು.

ಇದನ್ನೂ ಓದಿ- Hassan Pen Drive Case: SIT ಅಧಿಕಾರಿಗಳನ್ನೇ ತಬ್ಬಿಬ್ಬು ಮಾಡಿದ ಪ್ರಜ್ವಲ್‌ ರೇವಣ್ಣ..!

ಅದೇ ವರ್ಷ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ-ಜೆಡಿಯು ಹೊಂದಾಣಿಕೆ ನಡುವೆ ಟಿಕೆಟ್ ಕೈ ತಪ್ಪಿದ್ದರಿಂದ 2004 ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಮೊದಲ ಬಾರಿಗೆ ಶಾಸಕರಾದರು.

2013 ರಲ್ಲಿ ಯಡಿಯೂರಪ್ಪ ಅವರನ್ನು ಹಿಂಬಾಲಿಸಿ ಕೆಜೆಪಿ ಸೇರಿದ ಬಾಲರಾಜು ಮತ್ತೇ ಚುನಾವಣೆಗೆ ನಿಂತು ಮೂರನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. 2013 ರಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 2023 ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಹೊರಬಂದು ಬಿಜೆಪಿ ಸೇರ್ಪಡೆಗೊಂಡು ಎನ್.ಮಹೇಶ್ ಪರ ಪ್ರಚಾರ ನಡೆಸಿದ್ದರು. ವಿಧಾನಸಭಾ ಚುನಾವಣೆಯಾದ ಬಳಿಕ ಲೋಕಸಭಾ ಟಿಕೆಟ್ ನ ಪ್ರಬಲ ಆಕಾಂಕ್ಷಿಯಾಗಿ ಗುರುತಿಸಿಕೊಂಡಿದ್ದ ಬಾಲರಾಜು ಅವರಿಗೆ ಹೈಕಮಾಂಡ್ ಒಲವು ತೋರಿ ಟಿಕೆಟ್ ಕೊಟ್ಟಿದೆ.
 
ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ (Sunil Bose) ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಅವರ ಪುತ್ರರಾಗಿದ್ದು ತಂದೆಯ ಗರಡಿಯಲ್ಲಿ ರಾಜಕೀಯದಲ್ಲಿ ಪಳಗಿದ್ದಾರೆ. ಉಪ ಚುನಾವಣೆಗಳಲ್ಲಿ ಪಕ್ಷದ ಜವಾಬ್ದಾರಿ ನಿರ್ವಹಿಸಿ ಮೊದಲ ಬಾರಿ ಲೋಕ ಅಖಾಡದಿಂದ ಚುನಾವಣಾ ರಾಜಕೀಯಕ್ಕೆ ಎಂಟ್ರಿ‌ ಕೊಟ್ಟಿದ್ದು ಬಿಜಿಪಿ ಅಭ್ಯರ್ಥಿಗೆ ಪ್ರಬಲ ಪೈಪೋಟಿ ಕೊಟ್ಟಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News