ಬೆಂಗಳೂರು: ಕಾಂಗ್ರೆಸ್ ಪಕ್ಷದ ಎರಡನೇ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ಶನಿವಾರ ಬೆಳಿಗ್ಗೆ 11 ಗಂಟೆಗೆ ದೆಹಲಿಯಲ್ಲಿ ನಡೆಯಲಿದೆ. ನಾಳಿನ ಸಭೆಯಲ್ಲಿ ಲೋಕಸಭಾ ಚುನಾವಣಾ ಸಿದ್ಧತೆ ಹಾಗೂ ಇತರ ಪಕ್ಷಗಳ ಮೈತ್ರಿ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ.


COMMERCIAL BREAK
SCROLL TO CONTINUE READING

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ‌ಭಾಗವಹಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಇಂದು ರಾತ್ರಿ 9 ಗಂಟೆಗೆ ಪ್ರಯಾಣ ಬೆಳೆಸಲಿರುವ ಸಿದ್ದರಾಮಯ್ಯ ನಾಳೆ ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿ ನಡೆಯಲಿರುವ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ದೆಹಲಿಯಲ್ಲಿದ್ದಾರೆ.


ಲೋಕಸಭೆಯಲ್ಲಿ ಕೇಂದ್ರ ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಎರಡು ದಿನಗಳ ಬಳಿಕ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಬಳಿಕ ರಾಹುಲ್ ಗಾಂಧಿ ಮೊದಲ ಬಾರಿಗೆ ಅಧ್ಯಕ್ಷತೆ ವಹಿಸಿದ್ದರು.