ತೈಲ ಬೆಲೆ ಏರಿಸಿ ಕರ್ನಾಟದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟಿತು ಕಾಂಗ್ರೆಸ್: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ

ಹುಬ್ಬಳ್ಳಿ: ಬೆಲೆ ಏರಿಕೆ ಬಗ್ಗೆ ಉದ್ದುದ್ದ ಭಾಷಣ ಬಿಗಿದು, ಕೇಂದ್ರ ಸರ್ಕಾರದತ್ತ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುತ್ತ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ರಾಜ್ಯದ ಜನಸಾಮಾನ್ಯರಿಗೆ ತಾನೇ ಬೆಲೆ ಏರಿಕೆ ಬಿಸಿ ತಟ್ಟಿಸಿದೆ ಎಂದು ಜೋಶಿ ಕಿಡಿ ಕಾರಿದರು.

Written by - Prashobh Devanahalli | Last Updated : Jun 15, 2024, 06:51 PM IST
    • ತೈಲ ಬೆಲೆ ಏರಿಸುವ ಮೂಲಕ ಜನರ ಕೈಗೆ ಅಕ್ಷರಶಃ ಚೊಂಬು ಕೊಟ್ಟಿದೆ
    • ಕೇಂದ್ರ ಸರ್ಕಾರದತ್ತ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುತ್ತ ಬಂದಿರುವ ರಾಜ್ಯ ಸರ್ಕಾರ
    • ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ
ತೈಲ ಬೆಲೆ ಏರಿಸಿ ಕರ್ನಾಟದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟಿತು ಕಾಂಗ್ರೆಸ್: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ title=
File Photo

ಹುಬ್ಬಳ್ಳಿ: ರಾಜ್ಯದಲ್ಲಿ ಗ್ಯಾರಂಟಿ, ಗ್ಯಾರಂಟಿ ಎಂದು ಬಾಯಿ ಬಡಿದುಕೊಳ್ಳೋ ಕಾಂಗ್ರೆಸ್ ಸರ್ಕಾರ ಈಗ ತೈಲ ಬೆಲೆ ಏರಿಸುವ ಮೂಲಕ ಜನರ ಕೈಗೆ ಅಕ್ಷರಶಃ ಚೊಂಬು ಕೊಟ್ಟಿದೆ ಎಂದು ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ.

'ರಾಜ್ಯದಲ್ಲಿ ಅಭಿವೃದ್ಧಿ ಮಾತ್ರ ಕೇಳ್ಬೇಡಿ, ತಗೊಳ್ರಪ್ಪ ಕೊಟ್ರು ಚೊಂಬು..." ಎಂದು ತಮ್ಮ ನೈಜ ವರಸೆಯಲ್ಲೇ ರಾಜ್ಯ ಸರ್ಕಾರದ ವಿರುದ್ಧ ಹರಿ ಹಾಯ್ದಿದ್ದಾರೆ.

ಇದನ್ನೂ ಓದಿ: ಆ ಸೀನ್‌ಗಳನ್ನು ಮಾಡೋವಾಗ ತುಂಬಾ ನೋವಾಗುತ್ತೆ" ಇಂಟಿಮೇಟ್ ದೃಶ್ಯಗಳ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ ಖ್ಯಾತ ನಟಿ!!

ಬೆಲೆ ಏರಿಕೆ ಬಗ್ಗೆ ಉದ್ದುದ್ದ ಭಾಷಣ ಬಿಗಿದು, ಕೇಂದ್ರ ಸರ್ಕಾರದತ್ತ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುತ್ತ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ರಾಜ್ಯದ ಜನಸಾಮಾನ್ಯರಿಗೆ ತಾನೇ ಬೆಲೆ ಏರಿಕೆ ಬಿಸಿ ತಟ್ಟಿಸಿದೆ ಎಂದು ಜೋಶಿ ಕಿಡಿ ಕಾರಿದರು.

ಕೇಂದ್ರ ಸರ್ಕಾರ ಇಂಧನ  ಬೆಲೆ ಕಡಿಮೆ ಮಾಡಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿ ಜನರಿಗೆ ಹೊರೆ ಮಾಡಿದೆ. ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಭ್ರಷ್ಟಾಚಾರ, ದುರಾಡಳಿತ, ರೈತರ ಆತ್ಮಹತ್ಯೆ, ಹಗರಣಗಳ ಭಾಗ್ಯಗಳನ್ನು ನೀಡಿದೆಯೇ ಹೊರತು ಜನರ ಪಾಲಿಗೆ ಭಾಗ್ಯಶಾಲಿಯಾಗಿ ಉಳಿದಿಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ: ತನಗಿಂತ 10 ವರ್ಷ ಕಿರಿಯ ಯುವತಿ ಜತೆ ಇರ್ಫಾನ್ ಪಠಾಣ್ ಮದ್ವೆ! ಸೌಂದರ್ಯದಲ್ಲಿ ನಟಿಯರನ್ನೂ ಮೀರಿಸ್ತಾಳೆ ಈ ಬ್ಯೂಟಿ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ವಹಿಸಿಕೊಂಡ 1.5 ವರ್ಷಗಳಿಂದ ಅಭಿವೃದ್ಧಿ ಕಾರ್ಯಗಳನ್ನೇ ಕೈಗೊಂಡಿಲ್ಲ. ಈಗ ನೇರವಾಗಿ ಜನರ ಜೇಬಿಗೇ ಕತ್ತರಿ ಹಾಕುವ ಕೆಲಸಕ್ಕೆ ಕೈ ಹಾಕಿದೆ ಎಂದು ಆರೋಪಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 

Trending News