ಪ್ರಧಾನಿ ಮೋದಿಯನ್ನು ತುಘಲಕ್ ಗೆ ಹೋಲಿಸಿದ ಕಾಂಗ್ರೆಸ್
ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರದ 11 ಶಾಸಕರು ರಾಜಿನಾಮೆ ಸಲ್ಲಿಸಿದ ಬೆನ್ನಲ್ಲೇ ಈಗ ಕಾಂಗ್ರೆಸ್ ಈಗ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ.
ಬೆಂಗಳೂರು: ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರದ 11 ಶಾಸಕರು ರಾಜಿನಾಮೆ ಸಲ್ಲಿಸಿದ ಬೆನ್ನಲ್ಲೇ ಈಗ ಕಾಂಗ್ರೆಸ್ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ.
ಈ ಕುರಿತು ತನ್ನ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ 'ಮೊಹಮ್ಮದ್ ಬಿನ್ ತೊಘಲಕ್ ನಂತರ... ಈ ಭಾರತವನ್ನು ಆಳುತ್ತಿರುವ...ಅದೇ ಗುಣಗಳುಳ್ಳ ವ್ಯಕ್ತಿ, ನರೇಂದ್ರ ಮೋದಿ! ನೈತಿಕತೆ ಮತ್ತು ಮೌಲ್ಯ ಹೀನ ರಾಜಕಾರಣಿ.ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ತಿಲಾಂಜಲಿ ಇಟ್ಟು 10 ರಾಜ್ಯಗಳಲ್ಲಿ ಆಪರೇಷನ್ ಕಮಲ ಮಾಡಿದ್ದಾರೆ. ಕರ್ನಾಟಕವು ಮೋದಿಯ ಸಂಚಿಗೆ ಬಲಿಯಾಗಬಾರದು." ಎಂದು ಟ್ವೀಟ್ ಮಾಡಿದೆ.
ಕಾಂಗ್ರೆಸ್, ಜೆಡಿಎಸ್ ನ ಶಾಸಕರುಗಳಾದ ಎಚ್. ವಿಶ್ವನಾಥ್, ರಮೇಶ್ ಜಾರಕಿಹೋಳಿ, ಸೋಮಶೇಖರ್, ಪ್ರತಾಪ್ ಗೌಡ ಪಾಟೀಲ್, ಗೋಪಾಲಯ್ಯ, ಬಿ.ಸಿ. ಪಾಟೀಲ್, ಮಹೇಶ್ ಕುಮತಹಳ್ಳಿ, ನಾರಾಯಣ ಗೌಡ, ಬೈರತಿ ಬಸವರಾಜ್, ಶಿವರಾಮ್ ಹೆಬ್ಬಾರ್ ಮತ್ತು ರಾಮಲಿಂಗ ರೆಡ್ಡಿ, ಅವರು ಶನಿವಾರದಂದು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜೀನಾಮೆ ಸಲ್ಲಿಸಿ ನಂತರ ವಿಶೇಷ ವಿಮಾನದಲ್ಲಿ ಮುಂಬೈಗೆ ಹಾರಿದ್ದರು. ಈ ಹಿನ್ನಲೆಯಲ್ಲಿ ಈಗ ಕಾಂಗ್ರೆಸ್ ಪಕ್ಷದ ಟ್ವೀಟ್ ಬಂದಿದೆ.