Congress complaint: ಆರ್ ಆರ್ ನಗರದಲ್ಲಿ ಮತದಾರರ ಪಟ್ಟಿ ಅಕ್ರಮದ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

Congress complaint: ಬೆಂಗಳೂರಿನ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಬುಧವಾರ ಭೇಟಿ ನೀಡಿ ಚುನಾವಣಾ ಆಯುಕ್ತರಾದ ಮನೋಜ್ ಕುಮಾರ್ ಮೀನಾ ಅವರಿಗೆ ಈ ದೂರು ನೀಡಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಕಾಂಗ್ರೆಸ್ ನಾಯಕಿ ಕುಸುಮ ಹೆಚ್, ಹನುಮಂತರಾಯಪ್ಪ, ಲಗ್ಗೆರೆ ಬ್ಲಾಕ್ ಅಧ್ಯಕ್ಷ ಅಮರನಾಥ್, ರಾಜರಾಜೇಶ್ವರಿ ನಗರ ಬ್ಲಾಕ್ ಅಧ್ಯಕ್ಷ ರಾಂಪುರ ನಾಗೇಶ್, ಯಶವಂತಪುರ ಬ್ಲಾಕ್ ಅಧ್ಯಕ್ಷ ಗೋಪಾಲ ಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Written by - Prashobh Devanahalli | Edited by - Bhavishya Shetty | Last Updated : Dec 7, 2022, 03:20 PM IST
    • ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ವ್ಯಾಪಕ ಅಕ್ರಮ ಆರೋಪ
    • 75 ಸಾವಿರ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ
    • ಡಿ.ಕೆ. ಸುರೇಶ್ ಸೇರಿ ಅನೇಕರಿಂದ ಚುನಾವಣಾ ಆಯೋಗಕ್ಕೆ ದೂರು
Congress complaint: ಆರ್ ಆರ್ ನಗರದಲ್ಲಿ ಮತದಾರರ ಪಟ್ಟಿ ಅಕ್ರಮದ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು title=
Voter list illegal

Congress complaint: ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ವ್ಯಾಪಕ ಅಕ್ರಮ ನಡೆದಿದೆ. ಕಳೆದ ವಿಧಾನಸಭಾ ಚುನಾವಣೆಯಿಂದ ಕಳೆದ ತಿಂಗಳು 9ರವರೆಗೆ ಅನಧಿಕೃತವಾಗಿ ಸುಮಾರು 1.30 ಲಕ್ಷ ಮತಗಳ ಸೇರ್ಪಡೆಯಾಗಿದ್ದು, 75 ಸಾವಿರ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಮತ್ತಿತರ ಸ್ಥಳೀಯ ಮುಖಂಡರು  ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಬೆಂಗಳೂರಿನ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಬುಧವಾರ ಭೇಟಿ ನೀಡಿ ಚುನಾವಣಾ ಆಯುಕ್ತರಾದ ಮನೋಜ್ ಕುಮಾರ್ ಮೀನಾ ಅವರಿಗೆ ಈ ದೂರು ನೀಡಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಕಾಂಗ್ರೆಸ್ ನಾಯಕಿ ಕುಸುಮ ಹೆಚ್, ಹನುಮಂತರಾಯಪ್ಪ, ಲಗ್ಗೆರೆ ಬ್ಲಾಕ್ ಅಧ್ಯಕ್ಷ ಅಮರನಾಥ್, ರಾಜರಾಜೇಶ್ವರಿ ನಗರ ಬ್ಲಾಕ್ ಅಧ್ಯಕ್ಷ ರಾಂಪುರ ನಾಗೇಶ್, ಯಶವಂತಪುರ ಬ್ಲಾಕ್ ಅಧ್ಯಕ್ಷ ಗೋಪಾಲ ಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ: Viral Video: ಇದು ತೋಳವೋ? ನರಿಯೋ? ಜಗತ್ತನ್ನೇ ಗೊಂದಲಕ್ಕೀಡು ಮಾಡಿದ ಪ್ರಾಣಿ ಯಾವುದಯ್ಯಾ ಇದು?

ದೂರಿನ ಬಗ್ಗೆ ಮಾಧ್ಯಮಗಳಿಗೆ ವಿವರಣೆ ನೀಡಿದ ಸಂಸದ ಡಿ.ಕೆ. ಸುರೇಶ್, ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಹಳಷ್ಟು ನಕಲಿ ಮತಗಳ ಸೇರ್ಪಡೆಯಾಗಿದ್ದು, ನಾವು ಸ್ಥಳ ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಖಾಲಿ ನಿವೇಶನ ಹಾಗೂ ಖಾಲಿ ಮನೆಗಳಲ್ಲಿ ಸಾವಿರಾರು ಮತದಾರರ ಹೆಸರು ಸೇರ್ಪಡೆಯಾಗಿವೆ. ಈ ವಿಧಾನಸಭಾ ಕ್ಷೇತ್ರದಲ್ಲಿನ ಕಾಂಗ್ರೆಸ್ ಬೆಂಬಲಿತರು ಹಾಗೂ ಒಕ್ಕಲಿಗ ಮತದಾರರ ಹೆಸರನ್ನು ಪಟ್ಟಿಯಿಂದ ಬೇಕೆಂದೇ ಕೈಬಿಡಲಾಗಿದೆ ಎಂದರು.

ಚಿಲುಮೆ ಎಂಬ ಸಂಸ್ಥೆ ಮೂಲಕ ಬೆಂಗಳೂರಿನಲ್ಲಿ ಬಿಜೆಪಿ ನಾಯಕರು, ಮಂತ್ರಿಗಳು, ಶಾಸಕರು ಮತಪಟ್ಟಿ ಪರಿಷ್ಕರಣೆ ಹೆಸರಲ್ಲಿ ಭಾರಿ ಅಕ್ರಮ ಮಾಡಿದ್ದಾರೆ. ರಾಜರಾಜೇಶ್ವರಿನಗರ ವಿಧಾನಸಭೆ ಕ್ಷೇತ್ರದಲ್ಲಿ 2018 ರಿಂದ 2022 ಜನವರಿವರೆಗೆ ಸುಮಾರು 90 ಸಾವಿರ ಮತಗಳ ಸೇರ್ಪಡೆ ಮಾಡಲಾಗಿದೆ. 2022 ರ ಜನವರಿ 22 ರಿಂದ ನವೆಂಬರ್ 9 ರವರೆಗೆ ಸುಮಾರು 40 ಸಾವಿರ ಮತಗಳ ಸೇರ್ಪಡೆ ಮಾಡಲಾಗಿದೆ. 1.30 ಲಕ್ಷ ಮತಗಳನ್ನು ಕಳೆದ ವಿಧಾನಸಭಾ ಚುನಾವಣೆ ನಂತರ ಸೇರಿಸಲಾಗಿದೆ. ಈ ಬಗ್ಗೆ ರಾಜ್ಯ ಚುನಾವಣಾ ಆಯೋಗದ ಆಯುಕ್ತರ ಗಮನಕ್ಕೆ ತಂದಿದ್ದೇವೆ ಎಂದರು.

2018 ಮೇ ನಿಂದ 2022 ರ ಜನವರಿ ವೇಳೆಗೆ ಸುಮಾರು 40 ಸಾವಿರ ಮತಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದ್ದು, ಜನವರಿ 22 ರಿಂದ ನವೆಂಬರ್ 9 ರವರೆಗೆ 26 ಸಾವಿರ ಮತದಾರರ ಹೆಸರು ಕೈಬಿಡಲಾಗಿದೆ ಎಂಬ ಮಾಹಿತಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಆ ಮೂಲಕ 75 ಸಾವಿರ ಮತಗಳನ್ನು ತೆಗೆದುಹಾಕಲಾಗಿದೆ. ಯಾವುದೇ ಮತದಾರ ತನ್ನ ಹೆಸರನ್ನು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅಥವಾ ತೆಗೆಸಬೇಕಾದರೆ ಅವರು ಫಾರಂ 6 ಮತ್ತು 7 ಅನ್ನು ಕಡ್ಡಾಯವಾಗಿ ನೀಡಬೇಕು. ನಂತರ ಅದು ಪರಿಶೀಲನೆ ಆಗುತ್ತದೆ ಎಂದರು.

ಆದರೆ ಈ ಕ್ಷೇತ್ರದ ಶಾಸಕರು ಹಾಗೂ ಮಂತ್ರಿಗಳ ನಿರ್ದೇಶನದ ಮೇರೆಗೆ ಫಾರಂ 6 ಮತ್ತು 7 ಇಲ್ಲದೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗಿದೆ. ಕಳೆದ 10 ದಿನಗಳಿಂದ ಬೂತ್ ಮಟ್ಟದಲ್ಲಿ ಮತಗಳ ಸಮೀಕ್ಷೆ ಮಾಡಿದ ಸಮಯದಲ್ಲಿ ಖಾಲಿ ನಿವೇಶನಗಳ ವಿಳಾಸದಲ್ಲಿ 45 ಮತಗಳ ಸೇರ್ಪಡೆ ಆಗಿದೆ. ಪ್ರತಿ ಬೂತ್ ನಲ್ಲಿ 20-25 ಮತಗಳನ್ನು ಸೇರಿಸಲಾಗುತ್ತಿದೆ. ಬೇರೆ ರಾಜ್ಯಗಳಿಂದ ಬೋಗಸ್ ಮತದಾರರನ್ನು ಕರೆಸಲಾಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: Viral Video: ಕೋತಿ ಬಾಲಕನ ಮಧ್ಯೆ ಭಾರಿ ಗುದ್ದಾಟ, ಗೆದ್ದಿದ್ದು ಯಾರು?

ಆರ್ ಆರ್ ನಗರದಲ್ಲಿ ಚುನಾವಣಾ ಅಕ್ರಮಗಳ ಬಗ್ಗೆ ಈ ಹಿಂದೆ ಸಾಕಷ್ಟು ಉದಾಹರಣೆಗಳಿದ್ದರೂ ಚುನಾವಣಾ ಆಯೋಗ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಯಾಕೆ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂಬುದು ಗೊತ್ತಾಗುತ್ತಿಲ್ಲ. ಈಗಲಾದರೂ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿರಿಕೆ ಮಾಡಿಕೊಡಲಾಗಿದೆ ಎಂದು ಹೇಳಿದ್ದಾರೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News