ಜನವರಿ 21ರಂದು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧಾರ- ಡಿಸಿಎಂ ಡಿ.ಕೆ.ಶಿವಕುಮಾರ್
ಜನವರಿ 21ರಂದು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರು: ಜನವರಿ 21ರಂದು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಅವರು ಕೆಪಿಸಿಸಿ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಜಂಟಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದರು.
ಮಾಜಿ ಪ್ರಧಾನಿ ಶ್ರೀ ಮನಮೋಹನ ಸಿಂಗ್ ಅವರ ನಿಧನದ ಹಿನ್ನೆಲೆ ಮುಂದೂಡಲಾಗಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಜನವರಿ 21ರಂದು ನಡೆಸಲು ನಿರ್ಧರಿಸಲಾಗಿದೆ.ಎಐಸಿಸಿ ವತಿಯಿಂದ ನಡೆಯಲಿರುವ ಈ ಸಮಾವೇಶಕ್ಕೆ ರಾಜ್ಯದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಬೇಕೆಂದು ಮನವಿ ಮಾಡುತ್ತಿದ್ದೇವೆ.ಈ ಸಮಾವೇಶದ ಮೂಲಕ "ಗಾಂಧಿ ಭಾರತ" ಕಾರ್ಯಕ್ರಮವನ್ನು ಮುಂದುವರೆಸುವಂತಹ ಕೆಲಸವನ್ನು ನಾವು ಮಾಡುತ್ತಿದ್ದೇವೆ.ಈ ಸಮಾವೇಶಕ್ಕೆ ರಾಷ್ಟ್ರೀಯ ನಾಯಕರು ಬರುವ ಬಗ್ಗೆ ನಾವು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ ಎಂದು ಅವರು ಹೇಳಿದರು.
ಜನವರಿ 13 ರಂದು ಈ ಕುರಿತು ಸಿಎಂ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಲಿದ್ದು, ಕೆಪಿಸಿಸಿ ಸದಸ್ಯರು, ಶಾಸಕರು, ಸಚಿವರು, ಬ್ಲಾಕ್ ಕಾಂಗ್ರೆಸ್ ಸದಸ್ಯರು ಸೇರಿದಂತೆ ಎಲ್ಲರೂ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.ಇದರ ಜೊತೆಗೆ ಪದಾಧಿಕಾರಿಗಳ ಸಭೆ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕೂಡ ನಡೆಯಲಿದೆ.ಇದಲ್ಲದೆ ಜನವರಿ 15 ಹಾಗೂ 16 ರಂದು ಸಚಿವರು,ಶಾಸಕರು,ಮುಖಂಡರು,ಮಾಜಿ ಶಾಸಕರು,ಮಾಜಿ ಸಚಿವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆಗಾಗಿ ಪೂರ್ವಭಾವಿ ಸಭೆ ನಡೆಸಬೇಕು ಎಂದು ಸೂಚನೆ ನೀಡಲಾಗಿದೆ.
ಇದನ್ನೂ ಓದಿ- ಇಸ್ರೋ ಯೋಜನೆಗೆ ಪೇಲೋಡ್ ಒದಗಿಸಿದ ಆದಿಚುಂಚನಗಿರಿ ಇಂಜಿನಿಯರಿಂಗ್ ಕಾಲೇಜುಗಳು
ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮದಡಿ ನಡೆಯುವ ಸಮಾವೇಶದಲ್ಲಿ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಚಾರಿತ್ರಿಕ ಹಿನ್ನೆಲೆಯುಳ್ಳ ಪುಸ್ತಕವನ್ನು ಕೆಪಿಸಿಸಿ ವತಿಯಿಂದ ಬಿಡುಗಡೆ ಮಾಡಲಾಗುತ್ತದೆ.ಈ ಸಮಾವೇಶಕ್ಕೆ ಪಕ್ಷದ ಎಲ್ಲರೂ ಭಾಗಿಯಾಗಲಿದ್ದು, ಗಾಂಧೀಜಿ ಅವರ ತತ್ವಗಳನ್ನು ಉಳಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದು ತಿಳಿಸಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.