ಕೋಲಾರ: ಸಂವಿಧಾನಶಿಲ್ಪಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಕುರಿತು ಈಗ ಕಾಂಗ್ರೆಸ್‌ ನಾಯಕರು ಮಾತಾಡುತ್ತಾರೆ. ಆದರೆ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದೇ ಕಾಂಗ್ರೆಸ್‌ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.


COMMERCIAL BREAK
SCROLL TO CONTINUE READING

ದಲಿತ ಸಂಘಟನೆಗಳ ಸ್ವಾಭಿಮಾನಿ ಸಮಾವೇಶ ಮತ್ತು ಚುನಾವಣಾ ಸಂಬಂಧದ ಸಭೆ ಹಾಗೂ ಬಂಗಾರಪೇಟೆ ಕ್ಷೇತ್ರದ ಅಂಚಾಳ ಗ್ರಾಮದಲ್ಲಿ ನಡೆದ ಪ್ರಚಾರಸಭೆಯಲ್ಲಿ ಅವರು ಮಾತನಾಡಿದರು.


ಇದನ್ನೂ ಓದಿ: ನಟಿ ಪ್ರಿಯಾ ಮಣಿ ವೇಷ ನೋಡಿ.. ಜೈ ಶ್ರೀ ರಾಮ್, ಜೈ ಹಿಂದೂ ಎಂದ ನೆಟ್ಟಿಗರು...!


ನರೇಂದ್ರ ಮೋದಿ ಪ್ರಧಾನಿಯಾದ ನಂತರ ಡಾ.ಬಿ.ಆರ್‌.ಅಂಬೇಡ್ಕರ್‌ ಬರೆದ ಸಂವಿಧಾನಕ್ಕೆ ಹೆಚ್ಚು ಮಹತ್ವ ನೀಡಿದ್ದಾರೆ. ಅಂಬೇಡ್ಕರ್‌ ಅವರು ತುಳಿತಕ್ಕೊಳಗಾದ ಜನರ ಪರವಾಗಿ ದನಿ ಎತ್ತಿದ್ದರು. ಅಂತಹ ಮಹಾನ್‌ ವ್ಯಕ್ತಿ ಬಾಬಾ ಸಾಹೇಬ್‌ ಅಂಬೇಡ್ಕರರು ಲೋಕಸಭೆಗೆ ಹೋಗಲು ಚುನಾವಣೆಗೆ ನಿಂತಾಗ ಅವರನ್ನು ಕಾಂಗ್ರೆಸ್‌ ಹೀನಾಯವಾಗಿ ಸೋಲಿಸಿತ್ತು. ಅಂದಿನ ಪ್ರಧಾನಿ ನೆಹರೂ ಅಂಬೇಡ್ಕರರನ್ನು ಸೋಲಿಸುವ ಕರೆ ನೀಡಿದ್ದರು. ಈ ಇತಿಹಾಸವನ್ನು ಎಲ್ಲರೂ ತಿಳಿದಿರಬೇಕು. ಇಷ್ಟೇ ಅಲ್ಲದೆ ಸೋಲಿಸಿದವರಿಗೆ ಕಾಂಗ್ರೆಸ್‌ ಪ್ರಶಸ್ತಿ ನೀಡಿ ಗೌರವಿಸಿತು. ಅಂಬೇಡ್ಕರರಿಗೆ ಭಾರತರತ್ನ ನೀಡಬೇಕೆಂದು ಕಾಂಗ್ರೆಸ್‌ನ ಒಬ್ಬ ನಾಯಕ ಆಗ್ರಹ ಮಾಡಲಿಲ್ಲ. ಆದರೆ ಆ ಕೆಲಸವನ್ನು ಅಟಲ್‌ ಬಿಹಾರಿ ವಾಜಪೇಯಿ ಮಾಡಿದ್ದರು ಎಂದರು.


ಅಂಬೇಡ್ಕರರು ತೀರಿಕೊಂಡಾಗ ಸ್ಮಾರಕ ನಿರ್ಮಿಸಲು ಕೂಡ ಕಾಂಗ್ರೆಸ್‌ ಜಾಗ ಕೊಡಲಿಲ್ಲ. ಇಷ್ಟೆಲ್ಲ ಅನ್ಯಾಯ ಮಾಡಿದ ಕಾಂಗ್ರೆಸ್‌ಗೆ ದಲಿತರು ಮತ ನೀಡಬೇಕೆ ಎಂದು ಆಲೋಚಿಸಬೇಕು. ಪ್ರಧಾನಿ ಮೋದಿ ಅಂಬೇಡ್ಕರರ ಐದು ಸ್ಥಳಗಳನ್ನು ಅಭಿವೃದ್ಧಿಪಡಿಸಿದ್ದಾರೆ. ಹಾಗಾಗಿ ಅವರಿಗೆ ದಲಿತರು ಮತ ನೀಡಬೇಕು ಎಂದರು.


ದೇಶ ಸುಭದ್ರತೆಯಿಂದ ಇದ್ದರೆ ಮಾತ್ರ ಜನರು ನೆಮ್ಮದಿಯಿಂದ ಬದುಕಲು ಸಾಧ್ಯ. ಪಾಕಿಸ್ತಾನ ಅನೇಕ ಬಾರಿ ದೇಶದ ಮೇಲೆ ದಾಳಿ ಮಾಡಿದೆ. ಇತ್ತೀಚೆಗೆ ವಿಧಾನಸೌಧದಲ್ಲಿ ಕಾಂಗ್ರೆಸ್‌ನವರೇ ಕರೆದುಕೊಂಡು ಬಂದವರು ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ದರು. ಇಂತಹವರಿಗೆ ಶಿಕ್ಷೆ ನೀಡದೆ ಕಾಂಗ್ರೆಸ್‌ ಸರ್ಕಾರ ಸುಮ್ಮನಿದೆ. ಸಿಎಂ ಸಿದ್ದರಾಮಯ್ಯನವರು ಆಗಾಗ್ಗೆ ಅನ್ನಭಾಗ್ಯ ಎಂದು ಹೇಳುತ್ತಾರೆ. ಆದರೆ ಅದು ನಿಜವಾಗಿಯೂ ಮೋದಿ ಭಾಗ್ಯವಾಗಿದೆ. ಇವರದ್ದು ಕನ್ನ ಭಾಗ್ಯವಾಗಿದೆ. ಇವರು ಗೋಣಿಚೀಲವನ್ನೂ ನೀಡುವುದಿಲ್ಲ ಎಂದರು.


ಬರ ಪರಿಹಾರವನ್ನು ಕೇಳಿದರೆ ಕೇಂದ್ರ ಸರ್ಕಾರದ ಮೇಲೆ ಸಿಎಂ ಸಿದ್ದರಾಮಯ್ಯ ಕೈ ತೋರಿಸುತ್ತಾರೆ. ಈ ಚುನಾವಣೆ ಮುಗಿದ ನಂತರ ನೌಕರರಿಗೆ ಸಂಬಳ ಕೊಡಲು ಕೂಡ ಸರ್ಕಾರದ ಬಳಿ ಹಣವಿರುವುದಿಲ್ಲ ಎಂದರು.


ಮೈತ್ರಿ ಅಭ್ಯರ್ಥಿ ಮಲ್ಲೇಶ್‌ ಬಾಬು ಅವರ ತಂದೆ ಐಎಎಸ್‌ ಅಧಿಕಾರಿಯಾಗಿ ದಲಿತರಿಗೆ ಸಹಾಯ ಮಾಡಿದ್ದಾರೆ. ವಿದ್ಯಾವಂತ ಯುವಕ ಮಲ್ಲೇಶ್‌ ಅವರಿಗೆ ಎಲ್ಲರೂ ಬೆಂಬಲಿಸಬೇಕು. ಹಿಂದಿನ ಸಂಸದ ಮುನಿಸ್ವಾಮಿ ಅವರ ಹೆಸರನ್ನು ಹಿಂದೆ ನಾನೇ ಶಿಫಾರಸು ಮಾಡಿದ್ದೆ. ಆಗಲೂ ಎಲ್ಲರೂ ಅಪಾರ ಬೆಂಬಲ ನೀಡಿದ್ದರು. ಈಗಲೂ ಅದೇ ರೀತಿ ಬೆಂಬಲ ನೀಡಬೇಕು ಎಂದು ಕೋರಿದರು.


ಈ ಬಾರಿ ಮೋದಿ, ಎಚ್.ಡಿ.ದೇವೇಗೌಡರು, ಜೆಡಿಎಸ್ ಹಾಗೂ ಬಿಜೆಪಿ ಮತಗಳು ಸೇರಿ ಮೈತ್ರಿ ಅಭ್ಯರ್ಥಿಗೆ ಒಟ್ಟು 6 ಲಕ್ಷ ಮತಗಳ ಲೀಡ್ ದೊರೆಯಬೇಕು‌‌ ಎಂದರು.


ಇದನ್ನೂ ಓದಿ: ಸಂಜು ಸ್ಯಾಮ್ಸನ್ ಪತ್ನಿ ಯಾರು ಗೊತ್ತಾ? ಈಕೆಯ ಅಂದದ ಮುಂದೆ ಅನುಷ್ಕಾ, ಸಾಕ್ಷಿ ಯಾವ ಲೆಕ್ಕಾ! ಅಂಥಾ ಸೌಂದರ್ಯದ ಗಣಿ


ಕಾಂಗ್ರೆಸ್ ಅಭ್ಯರ್ಥಿ ನೆಂಟರು 


ಕಾಂಗ್ರೆಸ್ ಅಭ್ಯರ್ಥಿ ಕೇವಲ ನೆಂಟರಂತಿದ್ದು, ಅವರು ಮತ್ತೆ ಈ ಕಡೆ ಬರುವುದಿಲ್ಲ. ಇಂಥವರನ್ನು ಆಯ್ಕೆ ಮಾಡಬೇಕಾ ಎಂದು ಜನರು ಚಿಂತಿಸಬೇಕು ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ