Congress: ಬೆಳಗಾವಿ, ಬಸವಕಲ್ಯಾಣ, ಮಸ್ಕಿ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರೆಡಿ..!
ಬೆಳಗಾವಿ ಲೋಕಸಭಾ ಕ್ಷೇತ್ರದ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ
ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದ್ದು, ಈ ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳನ್ನ ಪಟ್ಟಿ ಮಾಡಿದೆ.
ಬೆಳಗಾವಿ ಲೋಕಸಭಾ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್(D.K.Shivakumar) ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೆಪಿಸಿಸಿ ಕಚೇರಿಯಲ್ಲಿ ಮುಖಂಡರೊಂದಿಗೆ ಸಮಾಲೋಚನಾ ಸಭೆ ನಡೆಸಿದರು.
ಜ.21 ರಿಂದ ಹುಬ್ಬಳ್ಳಿಯಿಂದ ಗೋವಾ ಮತ್ತು ಕೊಚ್ಚಿಗೆ ನೇರ ವಿಮಾನ ಸಂಚಾರ
ಈ ವೇಳೆ ಯಾವ ಕ್ಷೇತ್ರಕ್ಕೆ ಯಾರನ್ನ ಕಣಕ್ಕಿಳಿಸಬೇಕು ಎನ್ಜುವ ಬಗ್ಗೆ ಚರ್ಚೆ ನಡೆಸಿದರು. ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮಾಜಿ ಶಾಸಕ ದಿವಂಗತ ನಾರಾಯಣ ರಾವ್ ಪತ್ನಿ ಮಲ್ಲಮ್ಮ ಹಾಗೂ ವಿಧಾನ ಪರಿಷತ್ ಸದಸ್ಯ ವಿಜಯ್ ಸಿಂಗ್ ಹೆಸರು ಅಂತಿಮಗೊಳಿಸಲಾಗಿದೆ.
H.D.Kumaraswamy: 'ಸಿಎಂ ಬಿಎಸ್ ವೈಗೆ ಅಭಿನಂದನೆಗಳು ಹೇಳಿದ ಮಾಜಿ ಸಿಎಂ'
ಮಸ್ಕಿ ಕ್ಷೇತ್ರಕ್ಕೆ ಆರ್. ಬಸನಗೌಡ ತುರ್ವಿಹಾಳ್ ಅವರ ಒಬ್ಬರೇ ಹೆಸರು ಇರುವುದರಿಂದ ಅವರೇ ಅಭ್ಯರ್ಥಿಯಾಗುವುದು ಪಕ್ಕಾ ಆಗಿದೆ. ಇನ್ನು ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮೂರು ಹೆಸರು ಪಟ್ಟಿ ಮಾಡಲಾಗಿದೆ.
ನಾಳೆಯಿಂದ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆಯಿಂದ 'ಕಲಿಯುತ್ತಾ ನಲಿಯೋಣ'
ಶಾಸಕ ಸತೀಶ್ ಜಾರಕಿಹೋಳಿ, ಪ್ರಕಾಶ್ ಹುಕ್ಕೇರಿ ಹಾಗೂ ಚನ್ನರಾಜು ಹೆಸರು ಫೈನಲ್ ಮಾಡಲಾಗಿದೆ. ಸತೀಶ್ ಜಾರಕಿಹೋಳಿ ಅವರನ್ನೇ ಅಭ್ಯರ್ಥಿಯನ್ನಾಗಿಸಲು ರಾಜ್ಯದ ಹೆಚ್ಚಿನ ನಾಯಕರು ಒಲವು ತೋರಿದ್ದಾರೆ.
S.Suresh Kumar: '10 ಸಾವಿರ ಶಿಕ್ಷಕರ' ನೇಮಕಕ್ಕೆ ಶಿಕ್ಷಣ ಇಲಾಖೆ ಪ್ರಸ್ತಾವ..!
ಈ ಸಂಭಾವ್ಯ ಹೆಸರುಗಳ ಪಟ್ಟಿಯನ್ನು ಹೈಕಮಾಂಡ್ ಕಳುಹಿಸಲು ಕೆಪಿಸಿಸಿ ತೀರ್ಮಾನಿಸಿದ್ದು, ಇದಕ್ಕೆ ಮೊದಲ ಇನ್ನೊಂದು ಸಭೆ ಮಾಡಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಬಳಿಕ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿ ಅಭ್ಯರ್ಥಿಗಳನ್ನ ಅಂತಿಮಗೊಳಿಸಲಾಗುತ್ತದೆ.
ಮತ್ತೆರಡು ದಿನ ರಾಜ್ಯದಲ್ಲಿ ಭಾರೀ ಮಳೆ, ಹಲವೆಡೆ Yellow Alert
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ