ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಸ್ಥಾನ ದೊರೆಯದೆ ಶಾಸಕರು ಅಸಮಾಧಾನಗೊಂಡಿರುವ ಬೆನ್ನಲ್ಲೇ ಕಾಂಗ್ರೆಸ್ ಅತೃಪ್ತ ಶಾಸಕರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯುರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. 


COMMERCIAL BREAK
SCROLL TO CONTINUE READING

ಇಂದಿಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸಭೆಯಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, ಈಗಾಗಲೇ ಖಾತೆ ಹಂಚಿಕೆ, ಸಚಿವ ಸ್ಥಾನ ಹಂಚಿಕೆ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಶಾಸಕರಲ್ಲಿ ಭಿನ್ನಮತ ಸೃಷ್ಟಿಯಾಗಿದ್ದು, ಅತೃಪ್ತ ಶಾಸಕರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಆದರೆ, ಮುಂದಿನ ದಿನಗಳಲ್ಲಿ ಪ್ರಬಲ ವಿರೋಧ ಪಕ್ಷವಾಗಿ ಬಿಜೆಪಿ ಕೆಲಸ ಮಾಡಲಿದೆ ಎಂದು ಯಡಿಯೂರಪ್ಪ ಹೇಳಿದರು. 


ಮುಂದಿನ ದಿನಗಳಲ್ಲಿ ಪಕ್ಷವನ್ನು ಗ್ರಾಮಿನಮಟ್ಟದಿಂದ ಮತ್ತಷ್ಟು ಬಲಗೊಳಿಸಲು ಉದ್ದೇಶಿಸಲಾಗಿದೆ. ಪಕ್ಷದಲ್ಲಿ ಯುವ ಮತ್ತು ಪ್ರಬಲ ಕಾರ್ಯಕರ್ತರಿದ್ದಾರೆ. ಅವರೆಲ್ಲರನ್ನೂ ಒಗ್ಗೂಡಿಸಿ ಪಕ್ಷ ಬಲವರ್ಧನೆಗೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.