ಅನರ್ಹರ ವಿರುದ್ಧ ಇಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿರುವ ಕಾಂಗ್ರೆಸ್

ಯಡಿಯೂರಪ್ಪ ಅವರ ವಿಡಿಯೋ 'ಆಪರೇಷನ್ ಕಮಲ’ಕ್ಕೆ ಇದು ಸಾಕ್ಷಿ ಎಂಬ ವಾದ ಮುಂದಿಟ್ಟುಕೊಂಡು ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೊರೆಹೂಗಲಿದೆ.

Last Updated : Nov 4, 2019, 09:42 AM IST
ಅನರ್ಹರ ವಿರುದ್ಧ ಇಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿರುವ ಕಾಂಗ್ರೆಸ್ title=

ನವದೆಹಲಿ: ಕರ್ನಾಟಕದ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಬರಲೆಂದೇ ರಾಜೀನಾಮೆ ನೀಡಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ 17ರನ್ನು ಅನರ್ಹ ಶಾಸಕರ ಭವಿಷ್ಯ ನಿರ್ಧರಿಸುವ ಸುಪ್ರೀಂಕೋರ್ಟ್ ತೀರ್ಪು ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿರುವ ನಡುವೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಅನರ್ಹ ಶಾಸಕರ ರಾಜೀನಾಮೆ ನೀಡಿದ್ದ ಆಡಿದ್ದಾರೆನ್ನಲಾದ ಮಾತುಗಳಿರುವ ವಿಡಿಯೋ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಇನ್ನೊಂದೆಡೆ ಯಡಿಯೂರಪ್ಪ ಅವರ ವಿಡಿಯೋ 'ಆಪರೇಷನ್ ಕಮಲ’ಕ್ಕೆ ಇದು ಸಾಕ್ಷಿ ಎಂಬ ವಾದ ಮುಂದಿಟ್ಟುಕೊಂಡು ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೊರೆಹೂಗಲಿದೆ. ಇದರಿಂದಾಗಿ ಇನ್ನೇನೂ ತೀರ್ಪು ಬಂದೇ ಬಿಟ್ಟಿತು ಎಂದುಕೊಂಡಿದ್ದ ಅನರ್ಹರಿಗೆ ಮತ್ತು ತಮ್ಮ ಪಕ್ಷದ ಪಾತ್ರವಿಲ್ಲ ಎಂದು ಬೀಗುತ್ತಿದ್ದ ಬಿಜೆಪಿ ನಾಯಕರಿಗೆ ಹೊಸ ಆತಂಕ ಶುರುವಾಗಿದೆ.

ಯಡಿಯೂರಪ್ಪ ಅವರ ಮಾತುಗಳನ್ನು ಒಳಗೊಂಡ ವಿಡಿಯೋ ದಾಖಲೆಯನ್ನು ಸುಪ್ರೀಂಕೋರ್ಟ್ ಗಮನಕ್ಕೆ ತರುವ ಮೂಲಕ ಅನರ್ಹರ ಪ್ರಕರಣದ ದಿಕ್ಕುದೆಸೆಯನ್ನೇ ಬದಲಿಸಲು ಕಾಂಗ್ರೆಸ್ ಸಜ್ಜಾಗುತ್ತಿದೆ. ಇಂದು ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಸುಪ್ರೀಂ ಕೋರ್ಟಿಗೆ ಯಡಿಯೂರಪ್ಪ ಅವರ  ವಿಡಿಯೋ ಸಲ್ಲಿಸಿ ತೀರ್ಪು ಪ್ರಕಟಿಸುವ ಮುನ್ನ ಯಡಿಯೂರಪ್ಪ ಮಾತುಗಳನ್ನು ಪರಿಶೀಲಿಸಿ, ಪರಿಗಣಿಸಿ ಎಂದು ಮನವಿ ಮಾಡಿಕೊಳ್ಳಲಿದ್ದಾರೆ. ಒಂದೊಮ್ಮೆ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸುವ ಮುನ್ನ ಕಾಂಗ್ರೆಸ್​ನ ಮನವಿಯನ್ನು ಪರಿಗಣಿಸಿದಲ್ಲಿ ಪ್ರಕರಣ ಮತ್ತೊಂದು ತಿರುವು ಪಡೆದುಕೊಳ್ಳಲಿದೆ. ಇದು ಸಹಜವಾಗಿ ಈ ಬೆಳವಣಿಗೆ ಬಿಜೆಪಿ ಹಾಗೂ ಅನರ್ಹ ಶಾಸಕರಿಗೆ ಕಹಿ ಸುದ್ದಿಯಾಗಿ ಪರಿಣಮಿಸಲಿದೆ.

ಈ ವಿಡಿಯೋದಲ್ಲಿ ಯಡಿಯೂರಪ್ಪ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಹೆಸರು ಹೇಳಿರುವುದರಿಂದ ರಾಜ್ಯ ಕಾಂಗ್ರೆಸ್ ಒಂದೆಡೆ ಅಮಿತ್ ಷಾ ರಾಜೀನಾಮೆಗೆ ಒತ್ತಾಯಿಸಿ ಇಂದು ರಾಜ್ಯಾದ್ಯಂತ ಹೋರಾಟಕ್ಕೆ ಕರೆಕೊಟ್ಟಿದೆ. ಇನ್ನೊಂದೆಡೆ ಸುಪ್ರೀಂ ಕೋರ್ಟಿನಲ್ಲಿ ಕಾನೂನು ಹೋರಾಟಕ್ಕೆ ಮುಂದಾಗಿದೆ. ಈಗಾಗಲೇ ರಾಜ್ಯ ನಾಯಕರು ಯಡಿಯೂರಪ್ಪ ಅವರ ವಿಡಿಯೋ ಮತ್ತು ವಿವರಗಳನ್ನು ತಮ್ಮ ವಕೀಲ ಕಪಿಲ್ ಸಿಬಲ್ ಅವರಿಗೆ ತಲುಪಿಸಿದ್ದಾರೆ.

Trending News