ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರು ಗನ್ ಇಟ್ಟುಕೊಂಡು ಓಡಾಡುವ ಮೂಲಕ ತಮ್ಮದು ಗೂಂಡಾ ರಾಜ್ಯ ಎಂದು ತೋರಿಸಿಕೊಂಡಿದ್ದಾರೆ. ಇಂತಹ ಘಟನೆಯಿಂದ ಪೊಲೀಸ್ ಇಲಾಖೆ ಬದುಕಿದ್ದೂ ಸತ್ತಂತಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ವಿರಾಟ್, ರೋಹಿತ್ ಅಲ್ಲ, ಈತನೇ ಅತ್ಯಂತ ಯಶಸ್ವಿ ನಾಯಕ: ಗೌತಮ್ ಗಂಭೀರ್ ಕೊಂಡಾಡಿದ್ದು ಯಾರನ್ನು?
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯ ಸಂದರ್ಭದಲ್ಲಿ ಒಂದು ತಿಂಗಳು ಮುಂಚಿತವಾಗಿ ಗನ್ ವಾಪಸ್ ಕೊಡಬೇಕಾಗಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ಮೇಲೆ ಒತ್ತಡ ಹಾಕಿ ಗನ್ ಅನ್ನು ಜೇಬಿನಲ್ಲಿ ಇಟ್ಟುಕೊಂಡು ಓಡಾಡುತ್ತಿದ್ದಾರೆ. ಇದು ಕಾಂಗ್ರೆಸ್ ಕಾರ್ಯಕರ್ತರೇ ಮಾಡುತ್ತಿರುವ ರೌಡಿಸಂ. ಅಂತಹವರು ಮುಖ್ಯಮಂತ್ರಿಗಳಿಗೆ ಹಾರ ಹಾಕುವ ಮೂಲಕ ನಾವು ಕಾನೂನು ಪಾಲನೆ ಮಾಡಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಇದೇ ಕಾಂಗ್ರೆಸ್ಸಿನ ಗೂಂಡಾ ರಾಜ್ಯ ಎಂದರು.
ಇದು ಅತಿ ದೊಡ್ಡ ಭದ್ರತಾ ವೈಫಲ್ಯವಾಗಿದೆ. ಇನ್ನು ನಾಳೆಯ ದಿನಗಳಲ್ಲಿ ಯಾರಾದರೂ ಬಾಂಬ್ ಇಟ್ಟುಕೊಂಡು ಓಡಾಡಬಹುದು. ಇಂತಹ ಘಟನೆಯಿಂದ ಪೊಲೀಸ್ ಇಲಾಖೆ ಬದುಕಿದ್ದೂ ಸತ್ತಂತಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ನಾನು ಸದನದಲ್ಲೇ ಹೇಳಿದ್ದೆ. ಇದು ಕೂಡ ಒಂದು ನಿದರ್ಶನ. ಇದಕ್ಕೆ ಸರ್ಕಾರ ಏನು ಉತ್ತರ ಕೊಡಲಿದೆ ಎಂದು ಜನರು ನಿರೀಕ್ಷಿಸುತ್ತಿದ್ದಾರೆ. ಈ ಕುರಿತು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಈ ಸೊಪ್ಪು ನೆನೆಹಾಕಿದ ನೀರಷ್ಟೇ ಸಾಕು: ಹಳಸಿದ ಬಾಯಿಗೆ ಕುಡಿದರೆ ಸೊಂಟದ ಹಠಮಾರಿ ಬೊಜ್ಜು 5 ದಿನದಲ್ಲಿ ಸರಾಗವಾಗಿ ಇಳಿಯುತ್ತೆ!
ಕೇರಳ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿತ್ತು. ಕರ್ನಾಟಕ ಸರ್ಕಾರ ಈಗಾಗಲೇ ಬರ ಪರಿಹಾರ ಬಿಡುಗಡೆ ಮಾಡಬೇಕಿದ್ದರೂ, ಚುನಾವಣೆಯ ಸಮಯದಲ್ಲಿ ಕೇಂದ್ರದ ಮೇಲೆ ಆರೋಪ ಮಾಡಲಾಗಿದೆ. ರಾಜ್ಯ ಸರ್ಕಾರ ಉಚಿತಗಳನ್ನು ನೀಡಿ ಹಣ ಖಾಲಿ ಮಾಡಿಕೊಂಡಿರುವುದರಿಂದ ಪರಿಹಾರ ನೀಡಲು ಹಣವಿಲ್ಲ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.