ಲೋಕಸಭಾ ಚುನಾವಣೆಯ ಬಳಿಕ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ: ಎಚ್ಡಿಡಿ ಭವಿಷ್ಯ
ಶಿಡ್ಲಘಟ್ಟ ಹಾಗೂ ಚಿಂತಾಮಣಿ ಕ್ಷೇತ್ರದ ಮಧ್ಯಭಾಗದಲ್ಲಿರುವ ವೈ ಹುಣಸೇನಹಳ್ಳಿ ಸಮೀಪ ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದ್ದು ಸಭೆಯಲ್ಲಿ ಮಾತಾನಡಿದ ಮಾಜಿ ಪ್ರಧಾನಿ ದೇವೇಗೌಡರು (Former Prime Minister Deve Gowda) ಕಾಂಗ್ರೆಸ್ ಸರ್ಕಾರದ ಪತನದ ಬಗ್ಗೆ ಭವಿಷ್ಯ ನುಡಿದಿದ್ದಾರೆ.
HD Devegowda: ನನ್ನ ರಾಜಕೀಯ ಅನುಭವದಿಂದ ಹೇಳುತ್ತಿದ್ದು 2024 ರ ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಸರ್ಕಾರ (Congress Government) ಕೆಲವೇ ದಿನಗಳಲ್ಲಿ ಪತನವಾಗಲಿದೆ ಎಂದು ಮಾಜಿ ಪ್ರಧಾನ ಮಂತ್ರಿ ದೇವೇಗೌಡರು ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಲ್ಲೇಶ್ ಬಾಬು (Kolar Lok Sabha Constituency Candidate Mallesh Babu) ಪರ ಮತಯಾಚನೆ ನಡೆಸುವ ವೇಳೆ ಭವಿಷ್ಯ ನುಡಿದಿದ್ದಾರೆ.
ಶಿಡ್ಲಘಟ್ಟ ಹಾಗೂ ಚಿಂತಾಮಣಿ ಕ್ಷೇತ್ರದ ಮಧ್ಯಭಾಗದಲ್ಲಿರುವ ವೈ ಹುಣಸೇನಹಳ್ಳಿ ಸಮೀಪ ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದ್ದು ಸಭೆಯಲ್ಲಿ ಮಾತಾನಡಿದ ಮಾಜಿ ಪ್ರಧಾನಿ ದೇವೇಗೌಡರು (Former Prime Minister Deve Gowda) ಕಾಂಗ್ರೆಸ್ ಸರ್ಕಾರದ ಪತನದ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಇದನ್ನೂ ಓದಿ- ಎಲ್ಲರೂ ಒಟ್ಟಾಗಿ ಮತ ಚಲಾಯಿಸಿ ಪ್ರಜಾಪ್ರಭುತ್ವವನ್ನು ಗೆಲ್ಲಿಸೋಣ: ತುಷಾರ್ ಗಿರಿ ನಾಥ್
ನನಗೆ ವಯಸ್ಸು 91 ರಾಜ್ಯದ ಲೋಕಸಭಾ ಅಭ್ಯರ್ಥಿಯಾಗಿ ನಿಂತಿರುವ 28 ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಅಭ್ಯರ್ಥಿ ಪರ ಪ್ರಚಾರ ಮಾಡಲು ನಿರ್ಧಾರ ಮಾಡಿದ್ದೇನೆ. ಎರಡು ಹಂತದ ಚುನಾವಣೆ ನಡೆಯಲಿದ್ದು ಮೊದಲು ಏಪ್ರಿಲ್ 26ರಂದು ಚುನಾವಣೆ ನಡೆಯಲಿದ್ದು ನಂತರ ಮೇ 7 ರಂದು ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಮತ ನೀಡಿ ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡುವಂತೆ ಮತಯಾಚನೆ ನಡೆಸಿದರು.
ಇದನ್ನೂ ಓದಿ- Voter ID ಕಳೆದುಹೋಗಿದೆಯೇ? ಈ ದಾಖಲೆಗಳನ್ನು ನೀಡಿ ಮತ ಚಲಾಯಿಸಬಹುದು!
ನಾನು ಸಾಮಾನ್ಯ ರೈತ ಮಗನಾಗಿ ಪಕ್ಷೇತರ ಅಭ್ಯರ್ಥಿಯಾಗಿ ಮೊದಲು ವಿಧಾನಸಭೆಗೆ ಪ್ರವೇಶ ಮಾಡಿದ್ದೆ. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಿಂತಾಮಣಿ ಶಾಸರಾಗಿದ್ದ ಕೃಷ್ಣರೆಡ್ಡಿ ಸೋತಿದ್ರು ಎನ್ನುವುದು ಸಾಕಷ್ಟು ನೋವಾಯಿತು. ಆದರೆ ಈ 2024 ರ ಲೋಕಸಭಾ ಚುನಾವಣೆ ಮುಗಿದ ಕೆಲವೇ ತಿಂಗಳಲ್ಲಿ ರಾಜ್ಯದಲ್ಲಿ ಇರುವ ಕಾಂಗ್ರೆಸ್ ಆಡಳಿತ ಇರುವುದಿಲ್ಲ. ನಾನು ಅನುಭವದಿಂದ ಈ ಬಗ್ಗೆ ಮಾತನಾಡುತ್ತೇನೆಂದು ಸ್ಪಷ್ಟಪಡಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.