Covid Corruption: ಬಿಜೆಪಿ ವಿರುದ್ಧ ಮತ್ತೊಂದು ತನಿಖಾಸ್ತ್ರ ಪ್ರಯೋಗಿಸಿದ ಕಾಂಗ್ರೆಸ್ ಸರ್ಕಾರ!

Covid Corruption: ಕೊರೊನಾ ಕಾಲದ ಅಕ್ರಮಗಳ ಬಗ್ಗೆ‌ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಹಲವು ಆರೋಪಗಳನ್ನು ಮಾಡಿತ್ತು. ಲೆಕ್ಕಪತ್ರಗಳ‌ ಸಮಿತಿ ಮಾಡಿದ್ದ ಆರೋಪಗಳ ತನಿಖೆ ನಡೆಸುವಂತೆ ಆಯೋಗಕ್ಕೆ ಸೂಚನೆ ನೀಡಿದೆ.

Written by - Puttaraj K Alur | Last Updated : Aug 27, 2023, 12:01 PM IST
  • ಬಿಜೆಪಿ ವಿರುದ್ಧ ಮತ್ತೊಂದು ತನಿಖಾಸ್ತ್ರ ಪ್ರಯೋಗಿಸಿದ ಕಾಂಗ್ರೆಸ್ ಸರ್ಕಾರ
  • ಕೋವಿಡ್ ಅಕ್ರಮಗಳ ತ‌ನಿಖೆಗೆ ವಿಚಾರಣಾ ಆಯೋಗ ರಚಿಸಿದ ಸರ್ಕಾರ
  • ನಿವೃತ್ತ ನ್ಯಾಯಾಧೀಶ ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ಆದೇಶ
Covid Corruption: ಬಿಜೆಪಿ ವಿರುದ್ಧ ಮತ್ತೊಂದು ತನಿಖಾಸ್ತ್ರ ಪ್ರಯೋಗಿಸಿದ ಕಾಂಗ್ರೆಸ್ ಸರ್ಕಾರ! title=
ಬಿಜೆಪಿ ವಿರುದ್ಧ ಮತ್ತೊಂದು ತನಿಖಾಸ್ತ್ರ!

ಬೆಂಗಳೂರು: ಬಿಜೆಪಿ ವಿರುದ್ಧ ಮತ್ತೊಂದು ತನಿಖಾಸ್ತ್ರ ಪ್ರಯೋಗಿಸಿರುವ ಕಾಂಗ್ರೆಸ್ ಸರ್ಕಾರವು, ಕೋವಿಡ್ ಅಕ್ರಮಗಳ ತ‌ನಿಖೆಗೆ ವಿಚಾರಣಾ ಆಯೋಗವನ್ನು ರಚಿಸಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕೋವಿಡ್ ಅಕ್ರಮಗಳ ತ‌ನಿಖೆಗೆ ನಿವೃತ್ತ ನ್ಯಾಯಾಧೀಶ ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ಸರ್ಕಾರ ರಚಿಸಿದೆ. 3 ತಿಂಗಳೊಳಗೆ ವರದಿ ಕೊಡಲು ಆಯೋಗಕ್ಕೆ ಒಳಾಡಳಿತ ಇಲಾಖೆ (ಕಾನೂನು ಮತ್ತು ಸುವ್ಯವಸ್ಥೆ) ಮಹತ್ವದ ಆದೇಶ ನೀಡಿದೆ.

ಇದನ್ನೂ ಓದಿ: ಚಂದ್ರನ ನೆಲದಲ್ಲಿ ಸಾಧನೆ ತೋರಿದವರಿಗೆ ನಮೋ ನಮಃ

ಕೊರೊನಾ ಕಾಲದ ಅಕ್ರಮಗಳ ಬಗ್ಗೆ‌ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಹಲವು ಆರೋಪಗಳನ್ನು ಮಾಡಿತ್ತು. ಲೆಕ್ಕಪತ್ರಗಳ‌ ಸಮಿತಿ ಮಾಡಿದ್ದ ಆರೋಪಗಳ ತನಿಖೆ ನಡೆಸುವಂತೆ ಆಯೋಗಕ್ಕೆ ಸೂಚನೆ ನೀಡಿದೆ.

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣದ ಜೊತೆಗೆ ಔಷಧ ಖರೀದಿ, ವೈದ್ಯಕೀಯ ಉಪಕರಣಗಳ ಖರೀದಿ, ಬೆಡ್ ಹಂಚಿಕೆ ಅಕ್ರಮ‌ ಆರೋಪಗಳ ಬಗ್ಗೆ ಸಮಿತಿಯು ತನಿಖೆ ನಡೆಸಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕಾಂಗ್ರೆಸ್ ಗೆ ಐದು ವರ್ಷ ಕೆಲಸ ಮಾಡಲು ಅವಕಾಶ ಕೊಟ್ಟಿದ್ದಾರೆ

 ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News