“ಕೆಫೆ ಘಟನೆ ಮತ್ತೆ ಮರುಕಳಿಸಿದರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆ”: ವಿಜಯೇಂದ್ರ ಎಚ್ಚರಿಕೆ

Rameswaram Cafe Blast Case: ರಾಮೇಶ್ವರಂ ಕೆಫೆಯಲ್ಲಿ ನಡೆದ ಅಘಾತಕಾರಿ ಬಾಂಬ್ ಬ್ಲಾಸ್ಟ್ ಘಟನೆ ಮತ್ತೆ ತಲೆ ಎತ್ತುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ, ಇದರಿಂದ ರಾಜ್ಯದ ಜನತೆ ತೀವ್ರ ಆತಂಕಕ್ಕೆ ಒಳಗಾಗುವ ಪರಿಸ್ಥಿತಿ ನಿರ್ಮಾಣವಾಗಿದೆ, ಎಲ್ಲಿ? ಯಾವಾಗ ಏನಾಗುತ್ತದೋ? ಯಾವ ದುಷ್ಕೃತ್ಯ, ಏನು ಅವಘಡ ಸೃಷ್ಠಿಸುತ್ತದೋ? ಎಂಬ ದಿಗಿಲು ಜನರನ್ನು ಬಾಧಿಸುತ್ತಿದೆ ಎಂದು ಬಿ.ವೈ.ವಿಜಯೇಂದ್ರ ಆತಂಕ ವ್ಯಕ್ತಪಡಿಸಿದ್ದಾರೆ.

Written by - Puttaraj K Alur | Last Updated : May 25, 2024, 04:20 PM IST
  • ʼಕೆಫೆ ಘಟನೆ ಮತ್ತೆ ಮರುಕಳಿಸಿದರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆʼ
  • ಕರ್ನಾಟಕ ಕ್ರಿಮಿನಲ್ ಹಾಗೂ ಭಯೋತ್ಪಾದಕರಿಗೆ ಆಶ್ರಯ ತಾಣವಾಗಿದೆ
  • ಕರ್ನಾಟಕ ಭಯೋತ್ಪಾದಕರಿಗೆ ಆಶ್ರಯ ತಾಣವಾಗಿದೆ ಎಂದು ವಿಜಯೇಂದ್ರ ಆರೋಪ
“ಕೆಫೆ ಘಟನೆ ಮತ್ತೆ ಮರುಕಳಿಸಿದರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆ”: ವಿಜಯೇಂದ್ರ ಎಚ್ಚರಿಕೆ title=
ಸಿಎಂ ಸಿದ್ದರಾಮಯ್ಯರ ವಿರುದ್ಧ ವಿಜಯೇಂದ್ರ ಆಕ್ರೋಶ!

ಬೆಂಗಳೂರು: “ಕೆಫೆ ಘಟನೆ ಮತ್ತೆ ಮರುಕಳಿಸಿದರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆ” ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಕುಂದಲಹಳ್ಳಿ ಕೆಫೆಯೊಂದರಲ್ಲಿ ಬಾಂಬ್‌ ಸ್ಫೋಟಿಸಿದ ಪ್ರಕರಣ ಸಂಬಂಧ ಹುಬ್ಬಳ್ಳಿ ಮೂಲದ ಕಂಪ್ಯೂಟರ್‌ ಎಂಜಿನಿಯರ್‌ ಶೋಯೆಬ್‌ ಅಹ್ಮದ್‌ ಮಿರ್ಜಾ ಅಲಿಯಾಸ್‌ ಛೋಟು ಎಂಬಾತನನ್ನು ರಾಷ್ಟ್ರೀಯ ತನಿಖಾ ಆಯೋಗ(NIA) ಬಂಧಿಸಿದೆ. ಈ ವಿಚಾರವಾಗಿ ಟ್ವೀಟ್‌ ಮಾಡಿರುವ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

ಕರ್ನಾಟಕ ಕ್ರಿಮಿನಲ್ ಹಾಗೂ ಭಯೋತ್ಪಾದಕರಿಗೆ ಆಶ್ರಯ ತಾಣವಾಗಿರುವುದು ಹಾಗೂ ಕಾನೂನು ಸುವ್ಯವಸ್ಥೆ ಕುಸಿದಿರುವುದು, ರಾಜ್ಯದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಕೊಲೆ ಹಾಗೂ ದೌರ್ಜನ್ಯದ ಘಟನೆಗಳು ಒಂದೆಡೆ ಸಾಕ್ಷೀಕರಿಸಿದರೆ, ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ NIAಯಿಂದ ಬಂಧಿತರಾಗುತ್ತಿರುವ ಭಯೋತ್ಪಾದಕರ ಹಿನ್ನೆಲೆಯನ್ನು ಗಮನಿಸಿದರೆ 'ಕರ್ನಾಟಕ ಭಯೋತ್ಪಾದಕರಿಗೆ ಆಶ್ರಯ ತಾಣವಾಗಿದೆ' ಎಂಬ ಬಿಜೆಪಿಯ ಆರೋಪದಲ್ಲಿ ಹುರುಳಿದೆ ಎನ್ನುವುದನ್ನು ಬಿಂಬಿಸುತ್ತಿದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ವಿದೇಶಕ್ಕೆ ನಿಮ್ಮ ಮಗ ಸಾಯಲಿ ಅಂತಲೇ ಕಳಿಸಿದ್ಧಿರಾ? ಸಿಎಂ ಸಿದ್ದರಾಮಯ್ಯನವರಿಗೆ ಹೆಚ್.ಡಿ.ಕುಮಾರಸ್ವಾಮಿ ತೀಕ್ಷ್ಣ ಪ್ರಶ್ನೆ!!

ಬಂಧಿತರಾಗುತ್ತಿರುವವರೆಲ್ಲರೂ ಮುಸ್ಲಿ ಮೂಲಭೂತವಾದಿ ಹಿನ್ನಲೆಯ ಅಂತಾರಾಷ್ಟ್ರೀಯ ಭಯೋತ್ಪಾದನಾ ಚಟುವಟಿಕೆಯೊಂದಿಗೆ ನಂಟು ಬೆಳೆಸಿಕೊಂಡವರಾಗಿದ್ದಾರೆ, ಇವರ ಉಗ್ರ ಚಟುವಟಿಕೆಗೆ ದೊಡ್ಡ ಮೊತ್ತದ ಬಂಡವಾಳವೂ ಹರಿದು ಬಂದಿರುವುದೂ ಸ್ಪಷ್ಟವಾಗಿದೆ. ಬೃಹತ್ ಬೆಂಗಳೂರನ್ನು ಕೇಂದ್ರೀಕರಿಸಿಕೊಂಡು ರಾಜ್ಯದ ವಿವಿಧ ಸ್ಥಳಗಳಲ್ಲಿ ವಿಧ್ವಂಸಕ ಕೃತ್ಯ ಎಸಗಲು ಯೋಜನೆ ರೂಪಿಸಿದ್ದ ಸತ್ಯವೂ ಹೊರಬಂದಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ರಾಮೇಶ್ವರಂ ಕೆಫೆಯಲ್ಲಿ ನಡೆದ ಅಘಾತಕಾರಿ ಬಾಂಬ್ ಬ್ಲಾಸ್ಟ್ ಘಟನೆ ಮತ್ತೆ ತಲೆ ಎತ್ತುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ, ಇದರಿಂದ ರಾಜ್ಯದ ಜನತೆ ತೀವ್ರ ಆತಂಕಕ್ಕೆ ಒಳಗಾಗುವ ಪರಿಸ್ಥಿತಿ ನಿರ್ಮಾಣವಾಗಿದೆ, ಎಲ್ಲಿ? ಯಾವಾಗ ಏನಾಗುತ್ತದೋ? ಯಾವ ದುಷ್ಕೃತ್ಯ, ಏನು ಅವಘಡ ಸೃಷ್ಠಿಸುತ್ತದೋ? ಎಂಬ ದಿಗಿಲು ಜನರನ್ನು ಬಾಧಿಸುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೌಡಿಸಂ ಮಾಡುವವರನ್ನು ಸುಮ್ಮನೆ ಬಿಡುವುದಿಲ್ಲ: ಗೃಹ ಸಚಿವ ಪರಮೇಶ್ವರ

NIA ದಾಳಿಯ ಪರಿಣಾಮದಿಂದ ಬಿಲದೊಳಗೆ ಅಡಗಿರುವ ಉಗ್ರ ಶಕ್ತಿಗಳು ಹೊರಬರುತ್ತಿವೆ, ಆದರೆ ರಾಜ್ಯ ಸರ್ಕಾರ ಮಾತ್ರ ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳುವ ಹೆಜ್ಜೆಯನ್ನಿಡುವ ಲಕ್ಷಣಗಳು ಕಾಣುತ್ತಿಲ್ಲ. ಸದ್ಯ ಈ ಕ್ಷಣಕ್ಕಾದರೂ ನಿಷ್ಕ್ರೀಯಗೊಂಡಿರುವ ಗುಪ್ತಚರ ಇಲಾಖೆಗೆ ಚಿಕಿತ್ಸೆ ನೀಡಿ ಸಾಧ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕರ್ನಾಟಕದ ಸುರಕ್ಷತೆ ಹಾಗೂ ನಾಗರೀಕರ ಅಮೂಲ್ಯ ಜೀವಗಳನ್ನು ಕಾಪಾಡುವ ದೃಷ್ಟಿಯಿಂದ ತೆಗೆದುಕೊಳ್ಳಲಿ ಎಂದು ಒತ್ತಾಯಿಸುವೆ. ಉಗ್ರ ನಿಗ್ರಹಕ್ಕೆ ವಿಶೇಷ ತಂಡ ರಚಿಸಲಿ, ಜೊತೆಗೆ ಜನರಲ್ಲಿನ ಆತಂಕ ದೂರಾಗಿಸಲು ಅಭಯ ತುಂಬುವ ಹೆಜ್ಜೆಗಳನ್ನಿಡಲಿʼ ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News