`ಯತ್ನಾಳ್ ಅವರಿಗೆ ಉಚಿತ ಮಾನಸಿಕ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲು ಕಾಂಗ್ರೆಸ್ ಸರ್ಕಾರ ಸಿದ್ಧ`
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ಬಗ್ಗೆ ವೈಯಕ್ತಿಕ ನಿಂದನೆಯ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಅವರಿಗೆ ರಾಜ್ಯ ಕಾಂಗ್ರೆಸ್ ತಿರುಗೇಟು ನೀಡಿದೆ.ಯತ್ನಾಳ್ ಅವರನ್ನ ಸ್ವತಃ ಬಿಜೆಪಿಯೇ ಎತ್ತಿ ಮೂಲೆಗೆ ಎಸೆದಿದೆ.. ಬಸವನಗೌಡ ಅವರ ಬಾಯಿ ಬಚ್ಚಲು ಎಂದು ಬಿಎಸ್ ವೈ ಬಣದ ನಾಯಕರೇ ಹೇಳುತ್ತಿದ್ದಾರೆ. ಯತ್ನಾಳ್ ಅವರ ಮಾನಸಿಕ ಹಾಗೂ ಬಾಯಿ ಚಿಕಿತ್ಸೆಗೆ ಕಾಂಗ್ರೆಸ್ ಸರ್ಕಾರ ಉಚಿತ ಚಿಕಿತ್ಸೆ ವ್ಯವಸ್ಥೆ ಕಲ್ಪಿಸಲು ಸಿದ್ಧ.. ಇದು ಕಾಂಗ್ರೆಸ್ ನ ಗ್ಯಾರಂಟಿ ಎಂದು ಕೆಪಿಸಿಸಿ ಟ್ವೀಟ್ ಮಾಡಿದೆ.
ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ಬಗ್ಗೆ ವೈಯಕ್ತಿಕ ನಿಂದನೆಯ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಅವರಿಗೆ ರಾಜ್ಯ ಕಾಂಗ್ರೆಸ್ ತಿರುಗೇಟು ನೀಡಿದೆ.ಯತ್ನಾಳ್ ಅವರನ್ನ ಸ್ವತಃ ಬಿಜೆಪಿಯೇ ಎತ್ತಿ ಮೂಲೆಗೆ ಎಸೆದಿದೆ.. ಬಸವನಗೌಡ ಅವರ ಬಾಯಿ ಬಚ್ಚಲು ಎಂದು ಬಿಎಸ್ ವೈ ಬಣದ ನಾಯಕರೇ ಹೇಳುತ್ತಿದ್ದಾರೆ. ಯತ್ನಾಳ್ ಅವರ ಮಾನಸಿಕ ಹಾಗೂ ಬಾಯಿ ಚಿಕಿತ್ಸೆಗೆ ಕಾಂಗ್ರೆಸ್ ಸರ್ಕಾರ ಉಚಿತ ಚಿಕಿತ್ಸೆ ವ್ಯವಸ್ಥೆ ಕಲ್ಪಿಸಲು ಸಿದ್ಧ.. ಇದು ಕಾಂಗ್ರೆಸ್ ನ ಗ್ಯಾರಂಟಿ ಎಂದು ಕೆಪಿಸಿಸಿ ಟ್ವೀಟ್ ಮಾಡಿದೆ.
ಇದನ್ನೂ ಓದಿ: IPL 2024: 'ಐಸಾ ಮೌಕಾ ಫಿರ್ ಕಹಾ ಮಿಲೇಗಾ..' ಹಾಡು ಹೇಳಿ ಆವೇಶ್ ಖಾನ್ ಜೊತೆಗೆ Virat Kohli ತಮಾಷೆ
ಮುಸ್ಲಿಂಮರೆಲ್ಲರನ್ನು ಪಾಕಿಸ್ತಾನ ದೃಷ್ಟಿಯಿಂದ ನೋಡುವ ಯತ್ನಾಳ್ ಅವರು ಸ್ವತಃ ಮೌಲ್ವಿ ಕುಟುಂಬದೊಂದಿಗೆ ವ್ಯವಹಾರಿಕ ಸಂಬಂಧ ಇಟ್ಟುಕೊಂಡಿರಲಿಲ್ಲವೇ. ಹಾಗಾದರೆ ಯತ್ನಾಳ್ ಅವರಿಗೂ ಪಾಕಿಸ್ತಾನದ ಜೊತೆ ಸಂಬಂಧವಿದೆ ಎನ್ನೋಣವೇ ಎಂದು ಬಸವನಗೌಡ ಯತ್ನಾಳ್ ಅವರನ್ನ ಕಾಂಗ್ರೆಸ್ ಪ್ರಶ್ನಿಸಿದೆ.ಪಾಕಿಸ್ತಾನದ ಜಪ ಮಾಡುವುದನ್ನ ಬಿಟ್ಟು ಬಿಜೆಪಿಯಲ್ಲಿ ನಿಮ್ಮ ಅಸ್ಥಿತ್ವ ಏನು ಎಂಬುದನ್ನ ಚಿಂತಿಸಿ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
ಇದನ್ನೂ ಓದಿ: ಆ ಸಮಯದಲ್ಲಿ ನನಗೆ ʼಒಳಗೆ ಏನೂ ಹಾಕ್ಬೇಡ ಅಂದಿದ್ರುʼ..! ಶಾಕಿಂಗ್ ವಿಚಾರ ಬಿಗ್ಬಾಸ್ ಸ್ಪರ್ಧಿ
ಬಿಜೆಪಿಯಲ್ಲಿ ಬದಿಗೆ ಸರಿದು ಬೀದಿಗೆ ಬಿದ್ದಿರುವ ಯತ್ನಾಳ್ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮತಿಭ್ರಮಣೆಯಲ್ಲಿ ಕೀಳು ಅಭಿರುಚಿಯ ಹೇಳಿಕೆಗಳನ್ನ ನೀಡುವ ಮೂಲಕ ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡ್ತಿದ್ದಾರೆ. ಬಸವನಗೌಡ ಯತ್ನಾಳ್ ಅವರಿಗೆ ಒಳ್ಳೆಯ ಟ್ರೀಟ್ ಮೆಂಟ್ ನ ಅಗತ್ಯತೆ ಇದೆ ಎಂದು ಕಾಂಗ್ರೆಸ್ ಅಭಿಪ್ರಾಯ ವ್ಯಕ್ತಪಡಿಸಿದೆ.
ಈ ನಿಟ್ಟಿನಲ್ಲಿ ಯತ್ನಾಳ್ ಅವರಿಗೆ ಉಚಿತ ಮಾನಸಿಕ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲು ಕಾಂಗ್ರೆಸ್ ಸರ್ಕಾರ ಸಿದ್ಧವಿದೆ. ಯತ್ನಾಳ್ ಅವರ ಬಾಯಿ ಚಿಕಿತ್ಸೆ ಹಾಗೂ ಮಾನಸಿಕ ಚಿಕಿತ್ಸೆ ಉಚಿತವಾಗಿ ಕಲ್ಪಿಸಿಕೊಡಲಿದ್ದು, ಇದು ಕಾಂಗ್ರೆಸ್ ನ ಗ್ಯಾರಂಟಿ ಎಂದು ತಿರುಗೇಟು ನೀಡಿದೆ.ಇನ್ನು ಕುಟುಂಬದ ಬಗ್ಗೆ ವಯಕ್ತಿಕ ನಿಂದನೆ ಮಾಡಿರುವ ಯತ್ನಾಳ್ ಅವರ ಹೇಳಿಕೆ ಕೀಳು ಅಭಿರುಚಿಯದ್ದು.. ನಾನು ಮುಸ್ಲಿಂ ಕುಟುಂಬದಲ್ಲಿ ಜನಿಸಿದ ಮಾತ್ರಕ್ಕೆ ನನ್ನ ಭಾರತೀಯತೆಯನ್ನ ಯಾರು ಪ್ರಶ್ನೆ ಮಾಡಲಾಗದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬಸು ರಾವ್ ಟ್ವೀಟ್ ಮಾಡಿದ್ದಾರೆ. ಇಂಥಹವರ ವಿರುದ್ಧ ಬಿಜೆಪಿ ಕ್ರಮ ಕೈಗೊಳ್ಳಲಿದೆಯೇ ಎಂದು ಪ್ರಶ್ನಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ