ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ 3ನೇ ಭರವಸೆಯನ್ನು ರಾಜ್ಯದ ಜನತೆಗೆ ನೀಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿಯನ್ನು ನೀಡುವುದಾಗಿ ಘೋಷಿಸಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಜಂಟಿ ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಸಹ ಮಾಡಿ ಮಾಹಿತಿ ನೀಡಿರುವ ಸಿದ್ದರಾಮಯ್ಯ, ‘ಇದು ಕಾಂಗ್ರೆಸ್ ಪಕ್ಷದ ಮೂರನೇ ಗ್ಯಾರೆಂಟಿ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೇರಿದ ಕೂಡಲೆ ರಾಜ್ಯದ ಬಡ ಕುಟುಂಬದ ಪ್ರತಿಯೊಬ್ಬ ವ್ಯಕ್ತಿಗೆ ಅನ್ನಭಾಗ್ಯ ಯೋಜನೆಯಡಿ ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ. ನಾವು ಈ ಹಿಂದೆಯೂ ನುಡಿದಂತೆ ನಡೆದಿದ್ದೇವೆ, ಮುಂದೆಯೂ ಕೊಟ್ಟ ಮಾತಿಗೆ ಬದ್ಧರಾಗಿರುತ್ತೇವೆ’ ಎಂದು ಹೇಳಿದ್ದಾರೆ.
ಇದು ಕಾಂಗ್ರೆಸ್ ಪಕ್ಷದ ಮೂರನೇ ಗ್ಯಾರೆಂಟಿ.
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೇರಿದ ಕೂಡಲೆ ರಾಜ್ಯದ ಬಡಕುಟುಂಬದ ಪ್ರತೀ ವ್ಯಕ್ತಿಗೆ ಅನ್ನಭಾಗ್ಯ ಯೋಜನೆಯಡಿ ತಲಾ 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ.
ನಾವು ಈ ಹಿಂದೆಯೂ ನುಡಿದಂತೆ ನಡೆದಿದ್ದೇವೆ,
ಮುಂದೆಯೂ ಕೊಟ್ಟ ಮಾತಿಗೆ ಬದ್ಧರಾಗಿರುತ್ತೇವೆ. pic.twitter.com/Y5daktj5QT— Siddaramaiah (@siddaramaiah) February 24, 2023
ಇದನ್ನೂ ಓದಿ: ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಿದ್ದ ಆರೋಪಿಗೆ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದ ಸಿಎಂಎಂ ನ್ಯಾಯಾಲಯ
ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್, ‘ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್‌ನ 3ನೇ ಗ್ಯಾರಂಟಿಯಾದ "ಅನ್ನ ಭಾಗ್ಯ"ವನ್ನು ಅಧಿಕೃತವಾಗಿ ಘೋಷಿಸಲಾಯಿತು. ಪ್ರತಿ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಮಾಸಿಕ 10KG ಉಚಿತ ಅಕ್ಕಿ ನೀಡಲಿದ್ದೇವೆ. ಹೊಟ್ಟೆ ತುಂಬಿದ BJP ಸರ್ಕಾರಕ್ಕೆ ಹಸಿವಿನ ಸಂಕಟ ತಿಳಿದಿಲ್ಲ. ಕೆಲವೇ ದಿನಗಳಲ್ಲಿ ಬಡವರು, ಹಸಿದವರ ಪರವಾಗಿರುವ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ’ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
KPCC ಕಚೇರಿಯಲ್ಲಿ ಇಂದು ಕಾಂಗ್ರೆಸ್‌ನ 3ನೇ ಗ್ಯಾರಂಟಿಯಾದ "ಅನ್ನ ಭಾಗ್ಯ"ವನ್ನು ಅಧಿಕೃತವಾಗಿ ಘೋಷಿಸಲಾಯಿತು. ಪ್ರತಿ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಮಾಸಿಕ 10KG ಉಚಿತ ಅಕ್ಕಿ ನೀಡಲಿದ್ದೇವೆ. ಹೊಟ್ಟೆ ತುಂಬಿದ BJP ಸರ್ಕಾರಕ್ಕೆ ಹಸಿವಿನ ಸಂಕಟ ತಿಳಿದಿಲ್ಲ. ಕೆಲವೇ ದಿನಗಳಲ್ಲಿ ಬಡವರು, ಹಸಿದವರ ಪರವಾಗಿರುವ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. pic.twitter.com/Ufga1kVdrW
— DK Shivakumar (@DKShivakumar) February 24, 2023
ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕಾಂಗ್ರೆಸ್ ಈಗಾಗಲೇ 2 ಭರವಸೆಗಳನ್ನು ಘೋಷಣೆ ಮಾಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ಒದಗಿಸುವ ಯೋಜನೆ ಜಾರಿಗೆ ತರುತ್ತೇವೆ ಎಂದು ಘೋಷಿಸಲಾಗಿತ್ತು. ಅಲ್ಲದೇ ಪ್ರಿಯಾಂಕಾ ಗಾಂಧಿಯವರು ಮಹಿಳೆಯರಿಗೆ ತಿಂಗಳಿಗೆ 2000 ರೂ. ಘೋಷಣೆ ಮಾಡಿದ್ದರು. ಇದೀಗ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು ಎಂದು ಕಾಂಗ್ರೆಸ್ ಘೋಷಿಸಿದೆ.
ಇದನ್ನೂ ಓದಿ: ಬೆಂಗಳೂರಿನ 28 ಕ್ಷೇತ್ರಗಳಲ್ಲಿ 20 ಕ್ಷೇತ್ರ ಗೆಲ್ಲಲು ಬಿಜೆಪಿ ಭರ್ಜರಿ ಪ್ಲ್ಯಾನ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.