ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷವು  ತನ್ನ 3ನೇ ಭರವಸೆಯನ್ನು ರಾಜ್ಯದ ಜನತೆಗೆ ನೀಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿಯನ್ನು ನೀಡುವುದಾಗಿ ಘೋಷಿಸಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಜಂಟಿ ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಟ್ವೀಟ್ ಸಹ ಮಾಡಿ ಮಾಹಿತಿ ನೀಡಿರುವ ಸಿದ್ದರಾಮಯ್ಯ, ‘ಇದು ಕಾಂಗ್ರೆಸ್ ಪಕ್ಷದ ಮೂರನೇ ಗ್ಯಾರೆಂಟಿ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೇರಿದ ಕೂಡಲೆ ರಾಜ್ಯದ ಬಡ ಕುಟುಂಬದ ಪ್ರತಿಯೊಬ್ಬ ವ್ಯಕ್ತಿಗೆ ಅನ್ನಭಾಗ್ಯ ಯೋಜನೆಯಡಿ ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ. ನಾವು ಈ ಹಿಂದೆಯೂ ನುಡಿದಂತೆ ನಡೆದಿದ್ದೇವೆ, ಮುಂದೆಯೂ ಕೊಟ್ಟ ಮಾತಿಗೆ ಬದ್ಧರಾಗಿರುತ್ತೇವೆ’ ಎಂದು ಹೇಳಿದ್ದಾರೆ.


ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಿದ್ದ ಆರೋಪಿಗೆ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದ ಸಿಎಂಎಂ ನ್ಯಾಯಾಲಯ


ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್, ‘ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್‌ನ 3ನೇ ಗ್ಯಾರಂಟಿಯಾದ "ಅನ್ನ ಭಾಗ್ಯ"ವನ್ನು ಅಧಿಕೃತವಾಗಿ ಘೋಷಿಸಲಾಯಿತು. ಪ್ರತಿ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಮಾಸಿಕ 10KG ಉಚಿತ ಅಕ್ಕಿ ನೀಡಲಿದ್ದೇವೆ. ಹೊಟ್ಟೆ ತುಂಬಿದ BJP ಸರ್ಕಾರಕ್ಕೆ ಹಸಿವಿನ ಸಂಕಟ ತಿಳಿದಿಲ್ಲ. ಕೆಲವೇ ದಿನಗಳಲ್ಲಿ ಬಡವರು, ಹಸಿದವರ ಪರವಾಗಿರುವ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ’ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.


ಕಾಂಗ್ರೆಸ್ ಘೋಷಿಸಿದೆ.


ಇದನ್ನೂ ಓದಿ: ಬೆಂಗಳೂರಿನ 28 ಕ್ಷೇತ್ರಗಳಲ್ಲಿ 20 ಕ್ಷೇತ್ರ ಗೆಲ್ಲಲು ಬಿಜೆಪಿ ಭರ್ಜರಿ ಪ್ಲ್ಯಾನ್‌


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.