ಚಾಮರಾಜನಗರ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಮೊದಲ ಗ್ಯಾರಂಟಿಯಾದ ಪ್ರತಿ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆಯಿಂದ ಸೆಸ್ಕ್ ಸಿಬ್ಬಂದಿ ಅಸಹಾಯಕರಾಗಿದ್ದು ಬಿಲ್ ಕಟ್ಟಿ ಎಂದು ಹೋದರೆ ಗ್ರಾಮಸ್ಥರು ತಪರಾಕಿ ಹಾಕಿ ಕಳುಹಿಸುತ್ತಿದ್ದಾರೆ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಹೊನ್ನೂರು ಗ್ರಾಮಕ್ಕೆ ವಿದ್ಯುತ್ ಬಿಲ್ ನೀಡಲು ತೆರಳಿದ್ದ ಸೆಸ್ಕ್ ಸಿಬ್ಬಂದಿಗೆ ರೈತ ಮುಖಂಡರು "ಕೈ ಗ್ಯಾರಂಟಿ " ಶಾಕ್ ಕೊಟ್ಟಿದ್ದು ಬಿಲ್ ನ್ನೇ ಪಡೆಯದೇ ವಾಪಾಸ್ ಕಳುಹಿಸಿದ್ದಾರೆ.
ಇದನ್ನೂ ಓದಿ- ಖರ್ಗೆ ನಿವಾಸದಲ್ಲಿ ಹೈವೋಲ್ಟ್ ಮೀಟಿಂಗ್
ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ಕೊಡುವವರೆಗೂ ನಾವು ಬಿಲ್ ಪಡೆಯುವುದಿಲ್ಲ, ಸಿಬ್ಬಂದಿಗಳು ಬಿಲ್ ಕೊಡುವುದಕ್ಕೂ ಬಿಡುವುದಿಲ್ಲ. ಕಾಂಗ್ರೆಸ್ ಭರವಸೆ ಬಗ್ಗೆ ನಂಬಿಕೆ ಇಟ್ಟು ಇಡೀ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಮೂವರು ಕಾಂಗ್ರೆಸ್ ಶಾಸಕರನ್ನು ಆರಿಸಿ ಕಳುಹಿಸಿದ್ದು ಐದು ಗ್ಯಾರಂಟಿಗಳಲ್ಲಿ ಉಚಿತ ವಿದ್ಯುತ್ ಗ್ಯಾರಂಟಿಯನ್ನು ತಕ್ಷಣ ಜಾರಿಗೆ ತರಬೇಕೆಂದು ರೈತ ಸಂಘದ ಮುಖಂಡ ಹೊನ್ನೂರು ಪ್ರಕಾಶ್ ಒತ್ತಾಯಿಸಿದ್ದಾರೆ.
ಇದನ್ನೂ ಓದಿ- ರಾಜಕಾರಣದಲ್ಲಿ ಸೋಲು ಗೆಲುವು ಸಾಮಾನ್ಯ – ಹಂಗಾಮಿ ಸಿಎಂ ಬೊಮ್ಮಾಯಿ
ಕಾಂಗ್ರೆಸ್ ಹೇಳಿದಂತೆ ನಡೆಯಬೇಕು ಯಾವುದೇ ಕಾರಣಕ್ಕೂ ವಚನಭ್ರಷ್ಟರಾಗಬಾರದು, ಯಾವುದೇ ಕಾರಣಕ್ಕೂ ವಿದ್ಯುತ್ ಬಿಲ್ಲನ್ನು ಜನರು ಯಾವುದೇ ಕಾರಣಕ್ಕೂ ಕಟ್ಟಬಾರದು ಎಂದು ಅವರು ಒತ್ತಾಯಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.