ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ವ ಸಿದ್ದತೆ ಇಲ್ಲದ ಗ್ಯಾರೆಂಟಿ ಹೆಸರಿನಲ್ಲಿ ರಾಜ್ಯವನ್ನು ದಿವಾಳಿ ಮಾಡಿದ್ದು, ಆರ್ಥಿಕ ವಿಚಾರದಲ್ಲಿ ಹತಾಶರಾಗಿ ತೀರ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹತ್ತು ವರ್ಷದ ಎನ್ ಡಿ ಎ ಆಡಳಿತದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ವಿಪತ್ತು ನಿರ್ವಹಣಾ ಮಾನದಂಡ ಬದಲಾಗಿದೆ. ಕೇಂದ್ರದಿಂದ ರಾಜ್ಯಕ್ಕೆ ಬರುವ ತೆರಿಗೆ ಪಾಲಿನ‌ ಹಣ ಹೆಚ್ಚಿಗೆ ಬಂದಿದೆ. ಇದೆಲ್ಲವನ್ನೂ ರಾಜ್ಯ ಸರ್ಕಾರ ಮರೆಮಾಚಿದೆ. ತನ್ನ ತಪ್ಪು ಮುಚ್ಚಿಕೊಳ್ಳಲು  ತೀರ ತಳಮಟ್ಟಕ್ಕೆ ಹೋಗಿ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ.ಹಣಕಾಸು ವಿಚಾರದಲ್ಲಿ ಹತಾಶರಾಗಿ ಕಾಂಗ್ರೆಸ್  ನಾಯಕರಿ ತೀರ ಕೆಳಮಟ್ಟದ ಭಾಷೆ ಬಳಸುತ್ತಿದ್ದಾರೆ ಎಂದು ಹೇಳಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಿಂದ ಕೇಂದ್ರಕ್ಕೆ ನಾಲ್ಕು ಲಕ್ಷ‌ಕೋಟಿ ತೆರಿಗೆ ಕೊಡುತ್ತೇವೆ ಎನ್ನುತ್ತಾರೆ.ಆದರೆ, ಕೇಂದ್ರದ ನೇರ ತೆರಿಗೆ, ರಾಜ್ಯಕ್ಕೆ ನೀಡುವ ತೆರಿಗೆ ಪಾಲಿಮ ಹಂಚಿಕೆ ಪಾಲಿನಲ್ಲಿ ಬರುವುದಿಲ್ಲ. ಅದು ಪ್ರಥಮ ಪ್ರಧಾನಿ ಜವಾಹರಲಾಲ ನೆಹರೂ ಅವರ ಕಾಲದಿಂದ ಇದೆ. ಈ ಪದ್ದತಿ ಜಿಎಸ್ಟಿಗೆ ಮಾತ್ರ ಅನ್ವಯವಾಗತ್ತದೆ ಎಂದರು.


ಕಾಂಗ್ರೆಸ್ ‌ನವರು ಕೇವಲ ಆರೋಪ ಮಾಡುವ ಬದಲು ಯುಪಿಎ ಅವಧಿ ಹಾಗೂ ಎನ್ ಡಿಎ ಅವಧಿಯಲ್ಲಿ ರಾಜ್ಯಕ್ಕೆ ಎಷ್ಟು ಅನುದಾನ ಹಾಗೂ ತೆರಿಗೆ ಪಾಲಿನ‌ಹಣ ಬಂದಿದೆ ಎಂದು ಹೋಲಿಕೆ ಮಾಡಿ ನೋಡಲಿ. 2004-2014 ರ ಯುಪಿಎ ಅವಧಿಯಲ್ಲಿ 81,795 ಕೋಟಿ ರೂ. ತೆರಿಗೆ ಪಾಲಿನ ಹಣ ಬಂದಿದೆ. 2014-2024 ರ ಎನ್ ಡಿಎ ಅವಧಿಯಲ್ಲಿ 2,82,791 ಕೋಟಿ ರೂ. ರಾಜ್ಯಕ್ಕೆ ಬಂದಿದೆ.ಯುಪಿಎ ಸರ್ಕಾರದ ಅವಧಿಯಲ್ಲಿ 4 ಪೈಸೆ ರಾಜ್ಯಕ್ಕೆ ಬರುತ್ತಿತ್ತು ಈಗ 13 ರೂ. ಸಿಗುತ್ತಿದೆ ಎಂದು ಬೊಬ್ಬೆ ಹೊಡಿತ್ತಿದ್ದಾರೆ 2004-2014 ರ ಯುಪಿಎ ಅವಧಿಯಲ್ಲಿ ಕೇಂದ್ರದ ಅನುದಾನ 60,799 ಕೋಟಿ ಬಂದಿದೆ. 2014-24 ರ ವರೆಗಿನ ಪ್ರಧಾನ ನರೇಂದ್ರ ಮೋದಿ ಅವಧಿಯಲ್ಲಿ 2,33,93 ಕೋಟಿ ರೂ.‌ ಅನುದಾನ ಬಂದಿದೆ. 


ಇದನ್ನೂ ಓದಿ: ಟ್ರು ಲವ್, ಜಸ್ಟೀಸ್ ಫಾರ್ ದಿ ಲವ್ ಎಂಬ ಪೋಸ್ಟ್ ಮಾಡಿದ್ರು


ರಾಜ್ಯಕ್ಕೆ ಕೇಂದ್ರ ಅಭಿವೃದ್ದಿ ಕಾರ್ಯ ಕೈಗೊಳ್ಳಲು ಕರ್ನಾಟಕಕ್ಕೆ‌  6012 ಕೋಟಿ ರೂ.‌ ಬಡ್ಡಿ ರಹಿತ ಸಾಲ‌ ನೀಡಿದ್ದು, 50 ವರ್ಷಗಳ ಬಳಿಕ ಸಾಲ ಮರಳಿಸಲು ಅವಕಾಶ ಕಲ್ಪಿಸಲಾಗಿದೆ.ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಎಲ್ಲ ರಾಜ್ಯ ಸರ್ಕಾರಗಳಿಗೆ ಶೇ 27% ತೆರಿಗೆ ಪಾಲು ಬರುತ್ತಿತ್ತು. ಅದನ್ನು ಯುಪಿಎ ಅವಧಿಯಲ್ಲಿ ಶೇ 37% ಹೆಚ್ಚಿಸಬೇಕೆಂದು ಎಲ್ಲ ರಾಜ್ಯಗಳು ಒತ್ತಾಯ ಮಾಡಿದ್ದವು.ಕಾಂಗ್ರೆಸ್ ಸರ್ಕಾರ ಹೆಚ್ಚಳ ಮಾಡಲಿಲ್ಲ. ನರೇಂದ್ರ ಮೋದಿ ಸರ್ಕಾರ ಬಂದ ಮೇಲೆ ಅದನ್ನು ಶೇ 40% ಕ್ಕೆ ಏರಿಸಿದ್ದಾರೆ ಎಂದು ಹೇಳಿದರು.


ಪೂರ್ವ ಸಿದ್ದತೆ ಇಲ್ಲದ ಗ್ಯಾರೆಂಟಿಗಾಗಿ ದಿವಾಳಿ


ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿ ಆಗಿದೆ ಹಣಕಾಸು ವೆಚ್ಚದ ಮೇಲೆ‌ ಹಿಡಿತ ಇಲ್ಲ ಗ್ಯಾರಂಟಿ ಯೋಜನೆಗಳಿಗೆ 54 ಸಾವಿರ ಕೋಟಿ ವೆಚ್ಚ ಆಗತ್ತದೆ. ಅದಕ್ಕೆ ಬೇಕಾದ ಸಿದ್ದತೆ ಮಾಡಿಕೊಂಡಿಲ್ಲ. ಜನರ ತೆರಿಗೆ ಹಣವನ್ನು ಗ್ಯಾರೆಂಟಿ ಗಳಿಗೆ ವೆಚ್ಚ ಮಾಡುತ್ತಿದ್ದಾರೆ. ಇದರಿಂದ ಆರ್ಥಿಕ ಸಂಕಷ್ಟ ಉಂಟಾಗಿದೆ. ಅದನ್ನು ಮರೆ ಮಾಚಲು ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.ರಾಜ್ಯದಲ್ಲಿ ಇಷ್ಟು ದೊಡ್ಡ ಪ್ರಮಾಣದ ಬರ ಬಂದಿದೆ.ಇದುವರೆಗೂ ರಾಜ್ಯ ಸರ್ಕಾರದಿಂದ ಬರ ಪರಿಹಾರ ಕೊಟ್ಟಿಲ್ಲ ಕೇಂದ್ರದ ಅನುದಾನದಲ್ಲೇ ರೈತರಿಗೆ 2 ಸಾವಿರ ರೂ. ಪರಿಹಾರ ಹಾಕಿದ್ದಾರೆ.ಅದನ್ನೂ ಕೆಲವರಿಗೆ ಕೊಟ್ಟಿದ್ದಾರೆ.ಇನ್ನೂ ಕೆಲವರಿಗೆ ಕೊಟ್ಟಿಲ್ಲ.ರಾಜ್ಯ ಸರ್ಕಾರ ತನ್ನ ಕರ್ತವ್ಯ ಮಾಡಲಿ ಕೇಂದ್ರದ ಕಡೆ ನೋಡುವುದಲ್ಲ. ಜನ ಸಂಕಷ್ಟದಲ್ಲಿದ್ದಾಗ ಸರ್ಕಾರ ಹೇಗೆ ನಡೆದುಕೊಳ್ಳುತ್ತದೆ ಎನ್ನುವುದು ಮುಖ್ಯ ರಾಜ್ಯ ಸರ್ಕಾರ ಇದರಲ್ಲಿ ವಿಫಲವಾಗಿದೆ ಎಂದು ಹೇಳಿದರು.


ರಾಜ್ಯ ಸರ್ಕಾರ ಜನರಿಗೆ ಚೊಂಬು ಕೊಟ್ಟಿದೆ


ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆ ಜೊತೆಗೆ ರಾಜ್ಯ ಸರ್ಕಾರವೂ ರೈತರಿಗೆ 4 ಸಾವಿರ ರೂ. ನೀಡುತ್ತಿತ್ತು.ರಾಜ್ಯ ಸರ್ಕಾರ ಅದನ್ನು  ಕಡಿತ ಮಾಡಿ, ರೈತರಿಗೆ ಚಂಬು ಕೊಟ್ಟಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ರೈತ ವಿದ್ಯಾನಿಧಿ ಯೋಜನೆ ಅಡಿಯಲ್ಲಿ 13 ಲಕ್ಷ ವಿದ್ಯಾರ್ಥಿಗಳಿ ಸ್ಕಾಲರ್ ಶಿಪ್  ಕೊಡಲಾಗಿತ್ತು, ಅದನ್ನು ನಿಲ್ಲಿಸಿದ್ದಾರೆ. ದಲಿತ ಸಮುದಾಯಕ್ಕೆ ಮೀಸಲಿಟ್ಟಿದ್ದ ಎಸ್ಸಿಪಿ ಟಿಎಸ್ಪಿಯ 11380 ಕೋಟಿ ಎಸ್ಸಿಎಸ್ಟಿ ಅನುದಾನವನ್ನ ಗ್ಯಾರಂಟಿಗೆ ಬಳಕೆ ಮಾಡಿಕೊಂಡಿದ್ದಾರೆ. ಇದೆಲ್ಲ ಮಾಡಿ ರಾಜ್ಯದ ಜನತೆಗೆ ಚೊಂಬು ಕೊಟ್ಟಿದ್ದು ರಾಜ್ಯ ಸರ್ಕಾರ ಎಂದು ಆರೋಪಿಸಿದರು.


ಮೋದಿಯವರದು ಅಕ್ಷಯಪಾತ್ರೆ 


ಪ್ರಧಾನಿ ನರೇಂದ್ರ ಮೋದಿಯವರು ಜನರಿಗೆ ಶಾಸ್ವತ ಯೋಜನೆಗಳನ್ನು ಕೊಟ್ಟಿದ್ದಾರೆ.ಈ ಮೂಲಕ ಮೋದಿಯವರು ಚೊಂಬನ್ನು ಅಕ್ಷಯ ಪಾತ್ರೆ ಮಾಡಿದ್ದಾರೆ. 6 ಲಕ್ಷ ಬೀದಬದಿ ವ್ಯಾಪಾರಸ್ಥರಿಗೆ ಅನುದಾನ ನೀಡಿದ್ದಾರೆ. 9 ಲಕ್ಷ ಮನೆಗಳಿಗೆ ಉಜ್ವಲ ಗ್ಯಾಸ್ ಸಂಪರ್ಕ ಕಲ್ಪಿಸಿದ್ದಾರೆ. ಪ್ರದಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 4 ಲಕ್ಷ ಮನೆ,12 ಲಕ್ಷ ಶೌಚಾಲಯ, ಕೊವಿಡ್ ಸಂದರ್ಭದಲ್ಲಿ ಹತ್ತು ಕೆಜಿ ಉಚಿತ ಅಕ್ಕಿ ಕೊಟ್ಟಿದ್ದು ನರೇಂದ್ರ  ಮೋದಿ, ಚೊಂಬನ್ನು ಅಕ್ಷಯ ಪಾತ್ರೆ ಮಾಡಿದ್ದು ನರೇಂದ್ರ ಮೋದಿ. ಕಾಂಗ್ರೆಸ್ ಒಂದು ಕಾಳು ಅಕ್ಕಿ ಕೊಟ್ಟಿಲ್ಲ, ಇದನ್ನು ಕಾಂಗ್ರೆಸ್ ಚೊಂಬಿಗೆ ಸೇರಿಸಿಕೊಳ್ಳಲಿ ಎಂದರು.


ಇದನ್ನೂ ಓದಿ: ಮುಸ್ಲಿಂ ಮತಾಂಧವಾದಿಗಳಿಗೆ ಈ ಸರ್ಕಾರದಲ್ಲಿ ಬಹಳ ಗೌರವವಿದೆ : ಆರ್‌ ಅಶೋಕ್‌


ಕಾಂಗ್ರೆಸ್ ನವರಿಗೆ ಮೋದಿ ಶನಿನೇ


ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಆಡಿರುವ ಮಾತಿಗೆ ತಿರುಗೇಟು ನೀಡಿದ ಬಸವರಾಜ ಬೊಮ್ಮಾಯಿ, ರಮೇಶ್ ಕುಮಾರ್ ಅವರು ಎಷ್ಟು ಸತ್ಯವಂತರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಮೋದಿಯವರು ರಮೇಶ್ ಕುಮಾರ್ ಮತ್ತು ಕಾಂಗ್ರೆಸ್ ಗೆ ಶನಿಯಾಗಿದ್ದಾರೆ. ಯಾರು ಭಷ್ಟಾಚಾರ ಮಾಡುತ್ತಾರೆ, ಯಾರು ದೇಶವಿರೊಧಿ ಚಟುವಟಿಕೆ ಮಾಡುತ್ತಾರೆ.ಯಾರು ಜನವಿರೋಧಿ ಕೆಲಸ ಮಾಡುತ್ತಾರೆ ಅವರಿಗೆ  ಮೋದಿಯವರು ಶನಿಯಾಗಿ ಕಾಡುತ್ತಾರೆ. ದೇಶಭಕ್ತರಿಗೆ, ಯುವಕರಿಗೆ, ಹೆಣ್ಣುಮಕ್ಕಳಿಗೆ ಅವರು ವರವನ್ನು ಕೊಡುತ್ತಾರೆ. ರಮೇಶ್ ಕುಮಾರ್ ಅವರಿಗೆ ಅದರ ಒಳ ಮರ್ಮ ಗೊತ್ತಿದೆ ಎಂದು ತಿರುಗೇಟು ನೀಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.