ಬೆಂಗಳೂರು: ಇಂದು ವಿದೇಶ ಪ್ರವಾಸಕ್ಕೆ ತೆರಳಬೇಕಿದ್ದ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಕಾಂಗ್ರೆಸ್ ಹೈಕಮ್ಯಾಂಡ್ ಸೂಚನೆ ಮೇರೆಗೆ ಪ್ರವಾಸ ರದ್ದುಗೊಳಿಸಿದ್ದಾರೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಸ್ಯಾನ್‌ ಫ್ರಾನ್ಸಿಸ್ಕೋದಲ್ಲಿ ಮೂರು ದಿನ ನಡೆಯುವ ಜಾಗತಿಕ ಹವಾಮಾನ ಶೃಂಗ ಸಭೆಗಾಗಿ ಪಾಲ್ಗೊಳ್ಳಲು ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದು, ಬದಲಾಗುತ್ತಿರುವ ಮಾಲಿನ್ಯದ ಕುರಿತು ಕೆಲ ವಿಭಾಗದಲ್ಲಿ ವಿಚಾರ ಮಂಡನೆ ಮಾಡಲಿದ್ದೇನೆ ಎಂದು ಹೇಳಿದ್ದರು. 


ಆದರೆ, ತೈಲ ಬೆಲೆ ಏರಿಕೆ ಖಂಡಿಸಿ ಮುಷ್ಕರ, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ವಿದೇಶ ಪ್ರವಾಸ ರದ್ದುಗೊಳಿಸುವಂತೆ ಪರಮೇಶ್ವರ್ ಅವರಿಗೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ