ಡಿಸಿಎಂ ಜಿ.ಪರಮೇಶ್ವರ್ ವಿದೇಶ ಪ್ರವಾಸಕ್ಕೆ ಬ್ರೇಕ್ ಹಾಕಿದ ಹೈಕಮ್ಯಾಂಡ್

ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಕಾಂಗ್ರೆಸ್ ಹೈಕಮ್ಯಾಂಡ್ ಸೂಚನೆ ಮೇರೆಗೆ ವಿದೇಶ ಪ್ರವಾಸ ರದ್ದುಗೊಳಿಸಿದ್ದಾರೆ ಎನ್ನಲಾಗಿದೆ.

Updated: Sep 10, 2018 , 05:20 PM IST
ಡಿಸಿಎಂ ಜಿ.ಪರಮೇಶ್ವರ್ ವಿದೇಶ ಪ್ರವಾಸಕ್ಕೆ ಬ್ರೇಕ್ ಹಾಕಿದ ಹೈಕಮ್ಯಾಂಡ್

ಬೆಂಗಳೂರು: ಇಂದು ವಿದೇಶ ಪ್ರವಾಸಕ್ಕೆ ತೆರಳಬೇಕಿದ್ದ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಕಾಂಗ್ರೆಸ್ ಹೈಕಮ್ಯಾಂಡ್ ಸೂಚನೆ ಮೇರೆಗೆ ಪ್ರವಾಸ ರದ್ದುಗೊಳಿಸಿದ್ದಾರೆ ಎನ್ನಲಾಗಿದೆ.

ಸ್ಯಾನ್‌ ಫ್ರಾನ್ಸಿಸ್ಕೋದಲ್ಲಿ ಮೂರು ದಿನ ನಡೆಯುವ ಜಾಗತಿಕ ಹವಾಮಾನ ಶೃಂಗ ಸಭೆಗಾಗಿ ಪಾಲ್ಗೊಳ್ಳಲು ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದು, ಬದಲಾಗುತ್ತಿರುವ ಮಾಲಿನ್ಯದ ಕುರಿತು ಕೆಲ ವಿಭಾಗದಲ್ಲಿ ವಿಚಾರ ಮಂಡನೆ ಮಾಡಲಿದ್ದೇನೆ ಎಂದು ಹೇಳಿದ್ದರು. 

ಆದರೆ, ತೈಲ ಬೆಲೆ ಏರಿಕೆ ಖಂಡಿಸಿ ಮುಷ್ಕರ, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ವಿದೇಶ ಪ್ರವಾಸ ರದ್ದುಗೊಳಿಸುವಂತೆ ಪರಮೇಶ್ವರ್ ಅವರಿಗೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ