ತಿಹಾರ್ ಜೈಲಿನಲ್ಲಿ ಡಿಕೆಶಿ ಭೇಟಿಯಾದ ಸೋನಿಯಾ ಗಾಂಧಿ
ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ತಿಹಾರ್ ಜೈಲಿನಲ್ಲಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಭೇಟಿಯಾದರು.
ಇಂದು ಬೇಲಿಗೆ ದೆಹಲಿ ತಿಹಾರ್ ಜೈಲಿಗೆ ಭೇಟಿ ನೀಡಿದ ಸೋನಿಯಾ ಗಾಂಧಿ ಸುಮಾರು 30 ನಿಮಿಷಗಳ ಕಾಲ ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿ ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ.
ಅಕ್ಟೋಬರ್ 21ರಂದೇ ಸೋನಿಯಾ ಗಾಂಧಿಯವರು ಡಿಕೆಶಿ ಭೇಟಿಯಾಗುತ್ತಾರೆ ಎನ್ನಲಾಗಿತ್ತು. ಆದರೆ ಕಡೆ ಕ್ಷಣದಲ್ಲಿ ಕಾರಣಾಂತರಗಳಿಂದ ಭೇಟಿ ಸಾಧ್ಯವಾಗಿರಲಿಲ್ಲ.
ಅಕ್ಟೋಬರ್ 18ರಂದು ಜಾಮೀನು ಅರ್ಜಿಗೆ ಸಂಬಂಧಿಸಿದ ಪ್ರಕರಣ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ ನ ನ್ಯಾಯಾಧೀಶ ಸುರೇಶ್ ಕುಮಾರ್ ಕೈಟಾ ನೇತೃತ್ವದ ಏಕಸದಸ್ಯ ಪೀಠವು ಇಂದು ಡಿಕೆಶಿ ತನ್ನ ತೀರ್ಪು ಪ್ರಕಟಿಸಲಿದೆ.