ಕಾಂಗ್ರೆಸ್ ಗೆ ಕಪ್ಪುಹಣ ಹೊರಗೆ ಬರುತ್ತದೆ ಎನ್ನುವ ಭಯವಿದೆ: ಸಿಎಂ ಬೊಮ್ಮಾಯಿ‌

ಚುನಾವಣಾ ಆಯೋಗ, ಐಟಿ ಅಧಿಕಾರಿಗಳು ಸ್ವತಂತ್ರವಾಗಿ ಕೆಲಸ ಮಾಡುತ್ತಿದ್ದು, ಯಾರು ಕಳ್ಳರಿದ್ದಾರೆ, ಅವರು ಸಿಗುತ್ತಾರೆ.ಕಾಂಗ್ರೆಸ್ ನವರು ಯಾಕೆ ಭಯ ಪಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.ಅವರು ಇಂದು ವಿಧಾನಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

Written by - Prashobh Devanahalli | Edited by - Manjunath N | Last Updated : Apr 5, 2023, 08:21 PM IST
  • ಚುನಾವಣಾ ಆಯೋಗ ಎಲ್ಲ ಪಕ್ಷದವರ ಮೇಲೆ ದಾಳಿ ಮಾಡಿ ವಸ್ತುಗಳನ್ನು ವಶಪಡಿಸಿಕೊಳ್ಳುತ್ತಿದೆ.
  • ನಿಷ್ಪಕ್ಷಪಾತವಾಗಿ ನಡೆಯುತ್ತಿರುವ ದಾಳಿಯನ್ನು ತಡೆಯಲು, ಅಧಿಕಾರಿಗಳ ಮೇಲೆ ಒತ್ತಡ ತರುವ ಕೆಲಸ ಮಾಡಲಾಗುತ್ತಿದೆ.
  • ಕುಂಬಳಕಾಯಿ ಕಳ್ಳ ಎಂದರೆ ಇವರು ಬೆನ್ನು ಮುಟ್ಟಿಕೊಳ್ಳುತ್ತಿದ್ದಾರೆ.
ಕಾಂಗ್ರೆಸ್ ಗೆ ಕಪ್ಪುಹಣ ಹೊರಗೆ ಬರುತ್ತದೆ ಎನ್ನುವ ಭಯವಿದೆ: ಸಿಎಂ ಬೊಮ್ಮಾಯಿ‌ title=

ಬೆಂಗಳೂರು: ಚುನಾವಣಾ ಆಯೋಗ, ಐಟಿ ಅಧಿಕಾರಿಗಳು ಸ್ವತಂತ್ರವಾಗಿ ಕೆಲಸ ಮಾಡುತ್ತಿದ್ದು, ಯಾರು ಕಳ್ಳರಿದ್ದಾರೆ, ಅವರು ಸಿಗುತ್ತಾರೆ.ಕಾಂಗ್ರೆಸ್ ನವರು ಯಾಕೆ ಭಯ ಪಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.ಅವರು ಇಂದು ವಿಧಾನಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಇದನ್ನೂ ಓದಿ: ಕೊರೊನಾ ಪ್ರಕರಣಗಳ ಹೆಚ್ಚಳ, ವಕೀಲರಿಗೆ ವರ್ಕ್ ಫ್ರಾಂ ಹೋಂ ಆಯ್ಕೆ ನೀಡಿದ ಸಿಜೆಐ

ಅವರು ಇಷ್ಟು ದಿನ ಅಕ್ರಮವಾಗಿ ಗಳಿಸಿರುವ ಕಪ್ಪು ಹಣ ಹೊರಗೆ ಬರುತ್ತದೆ ಎಂಬ ಭಯ ಇರುವ ಕಾರಣಕ್ಕೆ ಈ ರೀತಿಯ ತಂತ್ರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇದನ್ನೂ ಓದಿ: "ಕ್ರಿಮಿನಲ್ ಅಪರಾಧ ಇರುವ ರೌಡಿ ಶೀಟರ್ ಗಳನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ"

ಚುನಾವಣಾ ಆಯೋಗ ಎಲ್ಲ ಪಕ್ಷದವರ ಮೇಲೆ ದಾಳಿ ಮಾಡಿ ವಸ್ತುಗಳನ್ನು ವಶಪಡಿಸಿಕೊಳ್ಳುತ್ತಿದೆ.ನಿಷ್ಪಕ್ಷಪಾತವಾಗಿ ನಡೆಯುತ್ತಿರುವ ದಾಳಿಯನ್ನು ತಡೆಯಲು, ಅಧಿಕಾರಿಗಳ ಮೇಲೆ ಒತ್ತಡ ತರುವ ಕೆಲಸ ಮಾಡಲಾಗುತ್ತಿದೆ. ಕುಂಬಳಕಾಯಿ ಕಳ್ಳ ಎಂದರೆ ಇವರು ಬೆನ್ನು ಮುಟ್ಟಿಕೊಳ್ಳುತ್ತಿದ್ದಾರೆ.ಈಗಾಗಲೇ ಪ್ರತಿಯೊಂದು ಜಿಲ್ಲೆಗೂ ಐಟಿ ಅಧಿಕಾರಿಗಳು ಇದ್ದಾರೆ ಎಂದರು.

ಚುನಾವಣಾ ಆಯೋಗಕ್ಕೂ ಬಿಜೆಪಿ ಸೋಲುವುದಕ್ಕೂ ಸಂಬಂಧವಿಲ್ಲ. ಕಾಂಗ್ರೆಸ್ ಈ ಬಾರಿ ಸೋಲುವುದು ನಿಶ್ಚಿತ. ನಮಗೆ  ಗೆಲ್ಲುವ ಆತ್ಮವಿಶ್ವಾಸವಿದೆ ಎಂದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News