Candidate Shortage in MP Elections: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಪಕ್ಷದ ವರಿಷ್ಠರು ನಿರ್ಷಯ ಮಾಡಿ ಪ್ರಕಟಣೆ ಮಾಡಿದ್ದಾರೆ. ಸದಾಕಾಲ ರಾಜಕೀಯವಾಗಿ ಆಶಿರ್ವಾದ ಮಾಡಿ ಯಡಿಯೂರಪ್ಪ ಅವರು ಹರಸಿದ್ದಾರೆ. ಅವರ ಆಶಿರ್ವಾದ ಪಡೆದಿದ್ದೇನೆ. ಪ್ರಚಾರಕ್ಕೂ ಕೂಡ ಬರುತ್ತೇನೆ ಅಂತ ಹೇಳಿದ್ದಾರೆ ಎಂದು ಹೇಳಿದರು. 


COMMERCIAL BREAK
SCROLL TO CONTINUE READING

ಈ ಬಾರಿ ಅಭ್ಯರ್ಥಿಗಳ ಆಯ್ಕೆ ವಿನೂತನ ರೀತಿಯಾಗಿದೆ. ಡಾ. ಮಂಜುನಾಥ್ ಅವರು ಲಕ್ಷಾಂತರ ಜನರಿಗೆ ಆರೋಗ್ಯ ಕಾಪಾಡಿದ್ದಾರೆ. ಒಳ್ಳೆಯ ಕೆಲಸ ಮಾಡಿದವರಿಗೆ ಪಕ್ಷ ಪುರಸ್ಕಾರ ನೀಡುತ್ತದೆ ಅನ್ನುವ ಸಂದೇಶ ನೀಡಿದೆ. ಮತ್ತೆ ಮಹಾರಾಜ ಯದುವೀರ ಒಡೆಯರ್ ಅವರಿಗೆ ಟಿಕೆಟ್ ನೀಡಿರುವುದು ದಕ್ಷಿಣ ಕರ್ನಾಟಕದಲ್ಲಿ ಒಳ್ಳೆಯ ಸಂದೇಶ ನೀಡಿದಂತಾಗಿದೆ. 


ಇದನ್ನೂ ಓದಿ-ಪ್ರತಿಷ್ಠಿತ ಗೀತಂ ವಿವಿಯಲ್ಲಿ ಸಾಲು ಸಾಲು ಸೂಸೈಡ್‌..!


ದಕ್ಷಿಣ ಭಾರತದಲ್ಲಿ ಅಭಿವೃದ್ಧಿ ಆಗಿದ್ದರೆ ಅದಕ್ಕೆ ಒಡೆಯರ್ ಅವರು ಕಾರಣ. ಅವರು ಹಿಂದುಳಿದ ವರ್ಗದವರ ಅಭಿವೃದ್ಧಿ ಮಾಡಿದ್ದಾರೆ. ಆ ಮನೆತನಕ್ಕೆ ಟಿಕೆಟ್ ನೀಡಿರುವುದು ದಕ್ಷಿಣ ಕರ್ನಾಟಕಕ್ಕೆ ಸಂತಸ ತಂದಿದೆ. ಹಳೆ ಬೇರು, ಹೊಸ ಚಿಗುರಿಗೂ ಅವಕಾಶ ನೀಡಿದೆ. ಈ ರೀತಿ ನಿರ್ಣಯ ಬಿಜೆಪಿಯಲ್ಲಿ ಮಾತ್ರ ಸಾಧ್ಯ ಎಂದರು. 


ಕಾಂಗ್ರೆಸ್ ನಲ್ಲಿ ಆ ಪರಿಸ್ಥಿತಿ ಇಲ್ಲ. ಸಚಿವರೂ ಸೋಲುವ ಭಯದಲ್ಲಿ ಇದ್ದಾರೆ. ಟಿಕೆಟ್ ಸಿಗದ ಸಂಸದರು ನಮ್ಮ ಸಂಪರ್ಕದಲ್ಲಿದ್ದಾರೆ ಅನ್ನುವುದು ಡಿಸಿಎಂ ಡಿಕೆಶಿವಕುಮಾರ್ ಅವರ ಚಾಳಿಯಾಗಿದೆ. ಅವರ ಪಕ್ಷದಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳು ಸಿಗುತ್ತಿಲ್ಲ ಎಂದರು.


ಇದನ್ನೂ ಓದಿ-ಶಿವಮೊಗ್ಗ ಟಿಕೆಟ್‌ ಮಗನಿಗೆ ಕೇಳಿದಾಗ ಸೊಸೆಗೆ ಕೊಡುತ್ತೇವೆ ಅಂದರು : ಈಶ್ವರಪ್ಪ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ