ಕಾಂಗ್ರೆಸ್ ಈಗ ದೇಶದಲ್ಲಿ ಮುಳುಗುತ್ತಿರುವ ಹಡಗು- ಬಿ.ಎಸ್. ಯಡಿಯೂರಪ್ಪ

ದೇವನಹಳ್ಳಿಯ ಐವಿಸಿ ರಸ್ತೆಯಲ್ಲಿರುವ ಖಾಸಗಿ ಶಾಲೆಯಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವೂ 150ಕ್ಕೂ ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Written by - Yashaswini V | Last Updated : Apr 21, 2022, 02:44 PM IST
  • ಕಾಂಗ್ರೆಸ್ ಈಗ ದೇಶದಲ್ಲಿ ಮುಳುಗುತ್ತಿರುವ ಹಡಗು.
  • ದೇಶದಲ್ಲಿ ನಾಯಕತ್ವ ಇಲ್ಲದೆ ಮುಳುಗುತ್ತಿದೆ.
  • ಕರ್ನಾಟಕದಲ್ಲಿ ಸ್ವಲ್ಪ ಮಟ್ಟಿಗೆ ಉಸಿರಾಡುತ್ತಿದೆ.
ಕಾಂಗ್ರೆಸ್ ಈಗ ದೇಶದಲ್ಲಿ ಮುಳುಗುತ್ತಿರುವ ಹಡಗು-   ಬಿ.ಎಸ್. ಯಡಿಯೂರಪ್ಪ title=
BSY on congress

ಬೆಂಗಳೂರು:  ಕಾಂಗ್ರೆಸ್ ರಾಷ್ಟ್ರದಲ್ಲಿ ಮುಳುಗುತ್ತಿರುವ ಹಡಗು. ಕರ್ನಾಟಕದಲ್ಲಿ ಅಲ್ಪ ಸ್ವಲ್ಪ ಮಾತ್ರ ಉಳಿದಿರುವ ಕಾಂಗ್ರೆಸ್ ಪಕ್ಷ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಇಲ್ಲೂ ಠೇವಣಿ ಕಳೆದುಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

ದೇವನಹಳ್ಳಿಯ ಐವಿಸಿ ರಸ್ತೆಯಲ್ಲಿರುವ ಖಾಸಗಿ ಶಾಲೆಯಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವೂ 150ಕ್ಕೂ ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ- ವಾಣಿ ವಿಲಾಸ ಮಾದರಿಯಲ್ಲಿ ಕೆ.ಸಿ‌. ಜನರಲ್ ನಲ್ಲೂ ತಾಯಿ-ಶಿಶು ಆಸ್ಪತ್ರೆ - ಡಾ.ಸುಧಾಕರ್

ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಹಾಡಿ ಹೊಗಳಿದ ಬಿ.ಎಸ್. ಯಡಿಯೂರಪ್ಪ, ಇಡೀ ವಿಶ್ವವೇ ಮೆಚ್ಚುವಂತೆ ನರೇಂದ್ರ ಮೋದಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಮೋದಿಯವರ ಕೇಂದ್ರ ಸರಕಾರ ಈ ದೇಶಕ್ಕೆ ಕೃಷಿ ಭದ್ರತೆ, ಹಣಕಾಸು ಭದ್ರತೆ ಸೇರಿದಂತೆ ಹಲವು ಜನಪರ ಕೆಲಸಗಳನ್ನು ಮಾಡಿದೆ ಎಂದರು. 

ಮುಂಬರು ಚುನಾವಣೆಯಲ್ಲಿ ಕಾಂಗ್ರೆಸ್ ನೆಲಕಚ್ಚಲಿದೆ:
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪ್ರಸ್ತುತ ಪರಿಸ್ಥಿತಿಯ ಬಗ್ಗೆಯೂ ಪ್ರಸ್ತಾಪಿಸಿದ ಬಿ.ಎಸ್. ಯಡಿಯೂರಪ್ಪ, ಕಾಂಗ್ರೆಸ್ ಈಗ ದೇಶದಲ್ಲಿ ಮುಳುಗುತ್ತಿರುವ ಹಡಗು. ದೇಶದಲ್ಲಿ ನಾಯಕತ್ವ ಇಲ್ಲದೆ ಮುಳುಗುತ್ತಿದೆ. ಕರ್ನಾಟಕದಲ್ಲಿ ಸ್ವಲ್ಪ ಮಟ್ಟಿಗೆ ಉಸಿರಾಡುತ್ತಿದೆ. ಆದರೆ, ಮುಂದಿನ ಚುನಾವಣೆ ನಂತರ ಇದೂ ಸಹ ಕೊನೆಗೊಳ್ಳಲಿದೆ ಎಂದಿದ್ದಾರೆ. 

ಇದನ್ನೂ ಓದಿ- ಮಗಳ ಮದುವೆಯಲ್ಲಿ ಕೋವಿಡ್-19 ಬಗ್ಗೆ ಜಾಗೃತಿ ಮೂಡಿಸಿದ ಕುಟುಂಬ

ಮುಂದಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯದ ಕೆಲಸಗಳನ್ನು ರಾಜ್ಯದ  ಮನೆ  ಮನೆಗೆ ತಲುಪಿಸುವ ಕೆಲಸ ಮಾಡಲಿದ್ದೇವೆ. ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಚಿಂತನೆಯನ್ನು  ಮಾಡಲಿದ್ದೇವೆ. ನಾಳೆಗೆ ಎಲ್ಲಾ ಜಿಲ್ಲೆಯ ಕಾರ್ಯಕಾರಣಿ ಸಭೆ ಮುಗಿಯಲಿವೆ. ರೈತರ ಸಾಲವನ್ನು ನಮ್ಮ ಸರಕಾರ ಮಾಡಿದೆ. ರೈತರಿಗೆ ಕೇಂದ್ರ ಸರಕಾರ 6 ಸಾವಿರ ನೀಡಿದರೆ ರಾಜ್ಯ ಸರಕಾರ 4 ಸಾವಿರ  ನೀಡುತ್ತಿದ್ದೇವೆ ಎಂದು ದೇವನಹಳ್ಳಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

Trending News