ಬೆಂಗಳೂರು: ಕಾಂಗ್ರೆಸ್ ಅಂತಿಮವಾಗಿ ಕರ್ನಾಟಕದಲ್ಲಿ ಕೆಪಿಸಿಸಿ ಅಧ್ಯಕ್ಷರನ್ನು ನೇಮಕ ಮಾಡಿದೆ. ಹಲವು ತಿಂಗಳಿಂದ ನೆನಗುದಿಗೆ ಬಿದ್ದಿದ್ದ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಡಿ.ಕೆ.ಶಿವಕುಮಾರ್ ರನ್ನು ಸಾರಥಿಯನ್ನಾಗಿ ಕಾಂಗ್ರೆಸ್ ನೇಮಕ ಮಾಡಿದೆ.


COMMERCIAL BREAK
SCROLL TO CONTINUE READING

ಕಳೆದ ವರ್ಷ ಡಿಸೆಂಬರ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕಳಪೆ ಪ್ರದರ್ಶನ ನೀಡಿದ ಬೆನ್ನಲ್ಲೇ ದಿನೇಶ್ ಗುಂಡುರಾವ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆಗಿನಿಂದ ಕೆಪಿಸಿಸಿ ಹುದ್ದೆ ಖಾಲಿ ಉಳಿದಿತ್ತು. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬಿಜೆಪಿಗೆ ಸೇರ್ಪಡೆಯಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರ ನೇಮಕ ಬಂದಿದೆ.ಶಿವಕುಮಾರ್ ಅವರು ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದಾರೆ, ಮನಿ ಲಾಂಡರಿಂಗ್ ಆರೋಪದ ಮೇಲೆ ಜೈಲಿನಲ್ಲಿದ್ದರು, ನಂತರ 25 ಲಕ್ಷ ರೂ ಬಾಂಡ್ ಮೇಲೆ ಅವರು ಜಾಮೀನು ಪಡೆದು ಹೊರಬಂದಿದ್ದರು.



ಡಿ.ಕೆ.ಶಿವಕುಮಾರ್ ಅವರ ನೇಮಕ ಬಹಿರಂಗವಾದ ನಂತರ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ಪಕ್ಷವನ್ನು ಬಲಪಡಿಸುತ್ತಾರೆ" ಎಂದು ಹೇಳಿದ್ದಾರೆ.ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಕ್ಕಾಗಿ ಡಿ.ಕೆ.ಶಿವಕುಮಾರ್ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಹೊಸ ಅಧ್ಯಕ್ಷರನ್ನು ನೇಮಕ ಮಾಡಿದ್ದಕ್ಕಾಗಿ ನಾನು ಸೋನಿಯಾ ಗಾಂಧಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಅವರು ಪಕ್ಷವನ್ನು ಮತ್ತು ಕಾರ್ಯಕರ್ತರು ಅವರನ್ನು ಬಲಪಡಿಸುತ್ತಾರೆ ಎಂಬ ವಿಶ್ವಾಸವಿದೆ "ಎಂದು ಅವರು ಹೇಳಿದರು.


ದೆಹಲಿಯಲ್ಲಿನ ಪಕ್ಷದ ನಾಯಕತ್ವದ ಅಧಿಸೂಚನೆಗಳ ಪ್ರಕಾರ, ಉಪಚುನಾವಣೆಯ ನಂತರ ರಾಜೀನಾಮೆ ನೀಡಿದ ಸಿದ್ಧರಾಮಯ್ಯ ಅವರು ವಿಧಾನಸಭೆಯ ನಾಯಕರಾಗಿ ಮತ್ತು ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ ಮುಂದುವರಿಯುತ್ತಾರೆ ಎನ್ನಲಾಗಿದೆ.