ರೌಡಿ ಶೀಟರ್ ಗಳ ಸೇರ್ಪಡೆ ವಿಚಾರ : ಬಿಜೆಪಿಗೆ ಕುಸ್ತಿ ಮಾಡಲು ಜನ ಬೇಕಾಗಿದೆ : ಡಿಕೆಶಿ
ಗಡಿ ವಿವಾದ ಈಗಾಗಲೇ ಇತ್ಯರ್ಥ ಆಗಿರುವ ವಿಚಾರ. ನಮ್ಮ ಗಡಿಯೊಳಗಿನ ಪ್ರದೇಶ ನಮ್ಮದು, ಅವರ ಗಡಿಯೊಳಗಿನ ಪ್ರದೇಶ ಅವರದ್ದು. ಇಲ್ಲಿರುವವರೆಲ್ಲರೂ ನಮ್ಮವರೇ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು : ಚುನಾವಣೆ ಸಮಯದಲ್ಲಿ ರಾಜ್ಯದ ಶಾಂತಿ ಕದಡುವ ಪ್ರಯತ್ನ ನಡೆಯುತ್ತಿದೆ. ಮಹಾರಾಷ್ಟ್ರದ ಯಾವುದೇ ಪಕ್ಷದವರಾಗಿರಲಿ ಗಡಿ ವಿವಾದದ ಹೆಸರಲ್ಲಿ ಶಾಂತಿ ಕದಡುವುದು, ಇದರಲ್ಲಿ ಭಾಗಿಯಾಗುವುದು ಸರಿಯಲ್ಲ ಎಂದು ಕೆಪಿಸಿಸ್ ಅಧ್ಯಕ್ಷ ಡಿಕೆ ಶಿವಕುಮಾರ ಹೇಳಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಮೇಲಿರುವ ಕಳಂಕವನ್ನು ಮರೆಮಾಚಿಕೊಳ್ಳುವ ಸಲುವಾಗಿ ಗಡಿ ವಿವಾದವನ್ನು ದೊಡ್ಡದಾಗಿ ಬಿಂಬಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಗಡಿ ವಿವಾದ ಈಗಾಗಲೇ ಇತ್ಯರ್ಥ ಆಗಿರುವ ವಿಚಾರ. ನಮ್ಮ ಗಡಿಯೊಳಗಿನ ಪ್ರದೇಶ ನಮ್ಮದು, ಅವರ ಗಡಿಯೊಳಗಿನ ಪ್ರದೇಶ ಅವರದ್ದು. ಇಲ್ಲಿರುವವರೆಲ್ಲರೂ ನಮ್ಮವರೇ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ನಾವು ಸುವರ್ಣಸೌಧ ಕಟ್ಟಿದ್ದು, ಯಾವುದೇ ಕಾರಣಕ್ಕೂ ಶಾಂತಿಭಂಗ ಆಗಬಾರದು ಎಂದು. ಇದೀಗ ಯಾರೂ ಶಾಂತಿ ಭಂಗವಾಗುವಂಥಹ ಕೆಲಸ ಮಾಡಬಾರದು ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ : Siddaramiah Biopic: ತೆರೆ ಮೇಲೆ ಸಿದ್ದರಾಮಯ್ಯ ಬಯೋಪಿಕ್: ಸಿದ್ದು ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ತಮಿಳಿನ ಈ ನಟ!
ಇನ್ನು ಬಿಜೆಪಿಗೆ ಸಾಲು, ಸಾಲು ರೌಡಿ ಶೀಟರ್ ಗಳ ಸೇರ್ಪಡೆ ವಿಚಾರವಾಗಿ ಮಾತನಾಡಿದ ಡಿಕೆಶಿ ಅವರಿಗೆ ಕುಸ್ತಿ ಮಾಡಲು ಜನ ಬೇಕಾಗಿದೆ. ಹೀಗಾಗಿ ಸೇರಿಸಿಕೊಳ್ಳುತ್ತಿದ್ದಾರೆ, ಸೇರಿಸಿಕೊಳ್ಳಲಿ ಬಿಡಿ ' ಎಂದು ಲೇವಡಿ ಮಾಡಿದ್ದಾರೆ.
ಚುನಾವಣೆಗಾಗಿ ಬಿಜೆಪಿ ಸಿದ್ಧಾಂತ ಮರೆಯುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಬಿಜೆಪಿಗೆ ಯಾವಾಗ ಯಾವ ಸಿದ್ಧಾಂತ ಇತ್ತು? ಅವರು ಸಿದ್ಧಾಂತದ ಬಗ್ಗೆ ಮಾತನಾಡಿಲ್ಲ, ಮಾತನಾಡುವುದೂ ಇಲ್ಲ. ಅವರು ಭಾವನೆ ಮೇಲೆ ರಾಜಕಾರಣ ಮಾಡುತ್ತಾರೆ. ಆದರೆ ಭಾವನೆಗೂ, ಬದುಕಿಗೂ ವ್ಯತ್ಯಾಸವಿದೆ. ಬದುಕಿನ ಮೇಲೆ ರಾಜಕಾರಣ ಮಾಡಿಲ್ಲ. ಜನರ ಹೊಟ್ಟೆ ತುಂಬಿಸಿ, ಅವರಿಗೆ ಉದ್ಯೋಗ ಕೊಟ್ಟು, ಬದುಕು ಕಟ್ಟಿಕೊಳ್ಳುವ ಅವಕಾಶ ನೀಡಬೇಕು ಎಂಬುದು ಅವರಲ್ಲಿ ಇಲ್ಲ. ಅವರಿಗೇನಿದ್ದರೂ ಭಾವನೆಗಳ ವಿಚಾರದ ಮೇಲಷ್ಟೇ ಆಸಕ್ತಿ' ಎಂ ಡು ಹೇಳಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ: ಸಿಎಂ ಬೊಮ್ಮಾಯಿ ತಿರುಗೇಟು
ಸೈಲೆಂಟ್ ಸುನಿಲ್ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎನ್ನುವ ವಿಚಾರ ಈಗಾಗಲೇ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ರಾಜಕೀಯ ನಾಯಕರು ಈಗಾಗಲೇ ತಮ್ಮ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ ಮುಖ್ಯಮಂತ್ರಿ ಬಸವರಾಜ ಬೋಪ್ಮ್ಮಾಯಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಯಾವುದೇ ಕಾರಣಕ್ಕೂ ರೌಡಿ ಶೀಟರ್ ಗಳಿಗೆ ಬಿಜೆಪಿಯಲ್ಲಿ ಜಾಗವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.