ಹುಬ್ಬಳ್ಳಿ : ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಎಸ್ ಆರ್ ಮೋರೆ ಗುರುವಾರ ಮುಂಜಾನೆ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.


COMMERCIAL BREAK
SCROLL TO CONTINUE READING

ಮೋರ್ ಪ್ರಬಲ ಮರಾಠ ನಾಯಕ ಮತ್ತು ನಾಲ್ಕು ಬಾರಿ ಶಾಸಕರಾಗಿದ್ದರು. 


ಎಸ್ ಆರ್ ಮೋರೆ(SR More) ಅವರುಬಂಗಾರಪ್ಪ ಮತ್ತು ಧರ್ಮ ಸಿಂಗ್ ಸರ್ಕಾರದಲ್ಲಿ ಸಹಕಾರ ಸಚಿವ ಮತ್ತು ಪೌರಾಡಳಿತ ಸಚಿವರಾಗಿದ್ದರು. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅವಧಿಯಲ್ಲಿ ಮೋರೆ ಅವರು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಜನಪ್ರಿಯ ನಾಯಕರಾಗಿದ್ದರು.


ಇದನ್ನೂ ಓದಿ : Basavaraj Bommai : ರಾಜ್ಯದಲ್ಲಿ ಕೋವಿಡ್-19 ಹೊಸ ಮಾರ್ಗಸೂಚಿ : ಸುಳಿವು ನೀಡಿದ ಸಿಎಂ ಬೊಮ್ಮಾಯಿ


ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಂತಾಪ


ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ(Pralhad Joshi) ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ, ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಮಾಜಿ ಶಾಸಕರು, ರಾಜ್ಯದ ಮಾಜಿ ಸಚಿವರು ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ಶ್ರೀ ಎಸ್. ಆರ್. ಮೋರೆ ಅವರು ನಿಧನರಾಗಿದ್ದು  ತುಂಬಾ  ವಿಷಾದನೀಯ ಸಂಗತಿ. ದೇವರು ಅವರ ಆತ್ಮಕ್ಕೆ ಶಾಂತಿಯನ್ನು  ಕರುಣಿಸಲಿ ಮತ್ತು ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.