ಬೆಂಗಳೂರು : ದಲಿತ ಸಿಎಂ ವಿಚಾರವಾಗಿ ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್ ಮಾತನಾಡಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದರೆ ದಲಿತ ಸಮುದಾಯದವರು ಮುಖ್ಯಮಂತ್ರಿ ಆಗುವ ವಿಚಾರವಾಗಿ  ಮಾತನಾಡಿದ ಪರಮೇಶ್ವರ್ ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷಕ್ಕೆ ತನ್ನದೇ ಆದ ನಿಯಮಗಳು ಇವೆ. ಈ ನಿಟ್ಟಿನಲ್ಲಿ ಪಕ್ಷದ ಚೌಕಟ್ಟಿನ ಒಳಗೆ ನಾವು ಕೇಳುತ್ತೇವೆ. ಸಂದರ್ಭ ಬಂದಾಗ ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತರುತ್ತೇವೆ ಎಂಡು ಹೇಳಿದ್ದಾರೆ.  


COMMERCIAL BREAK
SCROLL TO CONTINUE READING

ಇಂದು ನಡೆದ ಕಾಂಗ್ರೆಸ್ ಮುಖಂಡರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‌ ಕಾಂಗ್ರೆಸ್ ಪಕ್ಷದ ನಿಯಮಗಳಿಗೆ ನಾವು ಬದ್ಧರಾಗಿದ್ದೇವೆ.‌ ಕಾಂಗ್ರೆಸ್ ದಲಿತ ಸಮುದಾಯಕ್ಕೆ ಎಲ್ಲಾ ರೀತಿಯ ಸಹಕಾರ ನೀಡಿದೆ. ಇವರೆಲ್ಲಾ ನಮ್ಮ ಜೊತೆ ಇದ್ದಾಗ ನಾವು ಅವರಿಗೆ ಸೂಕ್ತ ಪ್ರಾತಿನಿಧ್ಯ  ನೀಡಬೇಕು ಎಂದು ಅರ್ಥವಾಗಲ್ವಾ  ಎಂದು ಪರಮೇಶ್ವರ್ ಪ್ರಶ್ನಿಸಿದ್ದಾರೆ. 


ಇದನ್ನೂ ಓದಿ : Kannada flag burnt Case: ಪೊಲೀಸರ ಮೇಲಿನ ಸೇಡು-ಮಿಡೀಯಾ ಕವರೇಜ್ ಗಾಗಿ ಕನ್ನಡ ಬಾವುಟ ಸುಟ್ಟಿದ್ದ ಟೆಕ್ಕಿ..!


ಇನ್ನು ದಲಿತ ದೌರ್ಜನ್ಯದ ಬಗ್ಗೆ ಕಾಂಗ್ರೆಸ್ ಮೌನ ವಹಿಸಿರುವ ವಿಚಾರವಾಗಿ ಕೂಡಾ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ದಲಿತರ ಮೇಲೆ  ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಅದನ್ನು ನಿಯಂತ್ರಣ ಮಾಡುವಲ್ಲಿ‌ ಸರ್ಕಾರ ವಿಫಲವಾಗಿದೆ ಎಂದು ಪರಮೇಶ್ವರ್ ಆರೋಪಿಸಿದ್ದಾರೆ. ದಲಿತರ ರಕ್ಷಣೆಗಾಗಿ ಕಾನೂನುಗಳನ್ನು ತಂದಿರುವುದೇ ಕಾಂಗ್ರೆಸ್. ಆದರೆ ಅದನ್ನು ಅನುಷ್ಠಾನ ಮಾಡುವಂತೆ ಒತ್ತಾಯ ಮಾಡುತ್ತಿದ್ದೇವೆ ಎಂದು ಹೇಳಿದರು.  ಇನ್ನು ನಮ್ಮ ಹೇಳಿಕೆಗಳು ಕೇವಲ ಹೇಳಿಕೆಗೆ ಮಾತ್ರ ಸೀಮಿತವಾಗಿಲ್ಲ, ದೌರ್ಜನ್ಯ ನಡೆದ ಸ್ಥಳಗಳಿಗೆ ಭೇಟಿ ನೀಡಿದ್ದೇವೆ ಎಂದು ಹೇಳಿದ್ದಾರೆ.


ಇದನ್ನೂ ಓದಿ : Police Action on PFI Issue: ‘ಪಿಎಫ್ಐ ಮತ್ತು ಅದರ ಅಂಗ ಸಂಸ್ಥೆಗಳಿಗೆ ಸೇರಿದ್ರೆ ಎಚ್ಚರ’: ಪೊಲೀಸರಿಂದ ಬಂತು ವಾರ್ನಿಂಗ್


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.