ಬೆಂಗಳೂರು: ಕಾಂಗ್ರೆಸ್ ನಾಯಕ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕೆ ಅಶ್ರಫ್ ಇತ್ತೀಚಿಗೆ ವಿಧಾನಸೌಧಕ್ಕೆ ಭೇಟಿ ನೀಡಿ ವಿಧಾನಸಭೆಯ ಸ್ಪೀಕರ್ ಪೀಠದ ಪಕ್ಕದಲ್ಲಿ ನಿಂತು ಫೋಟೋ ಶೂಟ್ ಮಾಡಿಸಿರುವುದು ದೊಡ್ಡ ಚರ್ಚೆಗೆ ಗ್ರಾಸವಾಗಿದ್ದು, ಈ ನಡೆಗೆ ಭಾರೀ ಆಕ್ಷೇಪ ವ್ಯಕ್ತವಾಗುತ್ತಿದೆ.


COMMERCIAL BREAK
SCROLL TO CONTINUE READING

ವಿಧಾನಸಭೆ ಸ್ಫೀಕರ್ ಪೀಠಕ್ಕೆ (Speaker Peetha) ಸಂಸದೀಯ ಪದ್ದತಿಯಲ್ಲಿ ಭಾರೀ ಮಹತ್ವವಿದೆ. ಆದರೆ ಸ್ಪೀಕರ್‌ ಪೀಠದ ಮುಂದೆ ನಿಂತು ಮಂಗಳೂರಿನ ಕಾಂಗ್ರೆಸ್ ನಾಯಕರು ಫೋಟೋ ಶೂಟ್ *(Congress Leader Photoshoot) ನಡೆಸಿದ್ದು, ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.  ಇದು ವಿಧಾನಸಭೆಯ ನಿಯಮಾವಳಿಗಳ  ಉಲ್ಲಂಘನೆಯಲ್ಲವೇ? ಹಾಗೂ ಸ್ಪೀಕರ್ ಪೀಠದ ಗೌರವದ ನಿಟ್ಟಿನಲ್ಲಿ ಇದು ಸರಿಯಾದ ಕ್ರಮವೇ ಎಂಬ ಆಕ್ಷೇಪಗಳು ವ್ಯಕ್ತವಾಗುತ್ತಿವೆ. 


ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಸಮುದಾಯದ ಮುಖಂಡರೂ ಹಾಗೂ ಕಾಂಗ್ರೆಸ್ ನಾಯಕ ಕೆ ಅಶ್ರಫ್ (K Ashraf) ಎಂಬುವವರು ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ (Former Mayor Of Mangalore Municipal Corporation) ಆಗಿದ್ದರು. ಸದ್ಯ ದಕ್ಷಿಣ ಕನ್ನಡ  ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷರೂ ಆಗಿದ್ದಾರೆ. ಇತ್ತೀಚೆಗೆ ವಿಧಾನಸೌಧಕ್ಕೆ ಭೇಟಿ ನೀಡಿದ್ದ ಅವರು, ಸ್ಪೀಕರ್ ಯು.ಟಿ ಖಾದರ್ ಹಾಗೂ ನಗರಾಭಿವೃದ್ದಿ ಸಚಿವ ಬೈರತಿ ಸುರೇಶ್ ಅವರ ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರು ನಡೆಸಿದ ಸಭೆಯಲ್ಲೂ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಅವರೊಂದಿಗೆ ಫೋಟೋ ತೆಗೆಸಿಕೊಂಡು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. 


ಇದನ್ನೂ ಓದಿ- ಅಕ್ಕಿ ಕಳ್ಳತನ ಪ್ರಕರಣ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಅರೆಸ್ಟ್..!


ವಿಧಾನಸಭೆಯ ಸಭಾಂಗಣಕ್ಕೆ ಸಾರ್ವಜನಿಕರಿಗೂ ಎಂಟ್ರಿ ಇರುವುದಿಲ್ಲ. ಸ್ಪೀಕರ್ ಅನುಮತಿಯ ಮೇರೆಗೆ ಅಧಿವೇಶನ ಇಲ್ಲದ ವೇಳೆ ಭೇಟಿ ಕೊಡಲು ಅವಕಾಶ ಇದೆ. ಇನ್ನು ಸದನ ನಡೆಯುವ ಸಂದರ್ಭದಲ್ಲಿ ಮಾತ್ರ ಸ್ಪೀಕರ್ ಪೀಠದ ಮೇಲೆ ಆಸೀನರಾಗಿರುತ್ತಾರೆ. ಆದರೆ ಈ ಫೋಟೋದಲ್ಲಿ ಸ್ಪೀಕರ್‌ ಯು.ಟಿ ಖಾದರ್ ಅವರು ಪೀಠದಲ್ಲಿ ಕುಳಿತುಕೊಂಡಿದ್ದು, ಪಕ್ಕದಲ್ಲೇ ಕೆ. ಅಶ್ರಫ್‌ ಹಾಗೂ ನವೀನ್ ಡಿಸೋಜಾ ಕಾಣಿಸಿಕೊಂಡಿದ್ದಾರೆ. ಇವರೆಲ್ಲಾ  ಸ್ಪೀಕರ್ ಖಾದರ್ ಅವರಿಗೂ ಆಪ್ತರು ಎಂದು ಹೇಳಲಾಗುತ್ತಿದೆ. 


ಕೆ. ಅಶ್ರಫ್ ಅವರು ತಮ್ಮ ವಾಟ್ಸಪ್‌ ಸ್ಟೇಟಸ್‌ನಲ್ಲೂ ಸ್ಪೀಕರ್‌ ಜೊತೆಗೆ ಇರುವ ಕೆಲವೊಂದು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜಿಲ್ಲೆಯ ವಿಚಾರಕ್ಕೆ ಸಂಬಂಧಿಸಿದಂತೆ ಇತರ ಮುಖಂಡರ ಜೊತೆಗೆ ನಡೆದ ಸಭೆಯಲ್ಲಿ ಅಶ್ರಫ್ ಹಾಗೂ ನವೀನ್ ಕೂಡಾ ಇದ್ದರು. 


ಇದನ್ನೂ ಓದಿ- ಸಿದ್ದರಾಮಯ್ಯನವರ ಸರಕಾರ ಹಗರಣಗಳ ಸರಮಾಲೆಯಲ್ಲಿ ಸಿಲುಕಿ ಹಾಕಿಕೊಂಡಿದೆ : ವಿಜಯೇಂದ್ರ 


ಸ್ಪೀಕರ್ ಸ್ಥಾನಕ್ಕೆ ಹಾಗೂ ಪೀಠಕ್ಕೆ ಸಂಸದೀಯ ಪದ್ದತಿಯಲ್ಲಿ ಅತ್ಯಂತ ಗೌರವ ಇದೆ. ಸ್ಪೀಕರ್ ಪೀಠಕ್ಕೆ ಯಾರೂ ತಪ್ಪಾಗಿ ನಡೆದುಕೊಳ್ಳಬಾರದು. ಸದನ ನಡೆಯುವಾಗಲೂ ಶಾಸಕರು ಸ್ಪೀಕರ್ ಪೀಠಕ್ಕೆ ಅತ್ಯಂತ ಗೌರವಯುತವಾಗಿ ನಡೆದುಕೊಳ್ಳುತ್ತಾರೆ. ಹೀಗಿರುವಾಗ ಇಂತಹ ಫೋಟೋ ಶೂಟ್ ತಪ್ಪು ಸಂದೇಶ ನೀಡುತ್ತದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಇದಕ್ಕೆ ಸ್ಪೀಕರ್ ಖಾದರ್ ಅವರೇ ಉತ್ತರಿಸಬೇಕಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.