ಬಿಜೆಪಿ ಸರ್ಕಾರದಿಂದಲೇ ಹಿಜಾಬ್ ವಿವಾದ ಪ್ರಾರಂಭವಾಗಿದೆ: ಎಂ.ಬಿ.ಪಾಟೀಲ್
ಅಂತರ್ಜಲ ವಿವಾದ ಸಂಬಂಧಿಸಿದಂತೆ ಮಹದಾಯಿ ಹಿತವನ್ನು ಕರ್ನಾಟಕ ಬಿಟ್ಟುಕೊಡಲು ಸಾಧ್ಯವಿಲ್ಲ. ಗೋವಾದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಾತುಕತೆ ಮೂಲಕ ಬಗೆಹರಿಸಿ ಕೊಳ್ಳುತ್ತೇವೆ ಅಂತಾ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದಿಂದಲೇ ಹಿಜಾಬ್ ವಿವಾದ ಪ್ರಾರಂಭವಾಗಿದೆ ಎಮದು ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ, ಕಾಂಗ್ರೆಸ್ ನಾಯಕ ಎಂ.ಬಿ. ಪಾಟೀಲ್(MB Patil) ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿರುವ ಅವರು, ‘ರಾಜಕೀಯ ಉದ್ದೇಶಕ್ಕೆ ಹಿಜಾಬ್ ವಿವಾದವನ್ನು ಬಳಸಲಾಗುತ್ತಿದೆ’ ಎಂದು ಆರೋಪಿಸಿದ್ದಾರೆ.
ಚುನಾವಣೆ(Karnataka Assembly Elections)ಇನ್ನು ಕೇವಲ 1 ವರ್ಷ ಮಾತ್ರ ಬಾಕಿ ಇದೆ. ಹೀಗಾಗಿ ತಮ್ಮ ತಪ್ಪು ಮುಚ್ಚಿಕೊಳ್ಳಲು ಬಿಜೆಪಿ ಹೀಗೆ ಮಾಡುತ್ತಿದೆ. ಸರ್ಕಾರ ತಪ್ಪು ಮಾಡಿದೆ. ಮಕ್ಕಳಲ್ಲಿ ವಿಷ ಬೀಜ ಬಿತ್ತು ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಸಮವಸ್ತ್ರ ಆದೇಶ ಹೊರಡಿಸುವ ಮೊದಲು ಏನು ನಿಯಮ ಇತ್ತೋ ಅದನ್ನೇ ಮುಂದುವರೆಸಬೇಕಿದೆ. ಬಿಜೆಪಿ(BJP)ಯಿಂದ ಇದು ಸ್ಪಾನ್ಸರ್ ಆಗಿರುವ ಪ್ರಕರಣವಾಗಿದೆ. ಇದು ಕಾಂಗ್ರೆಸ್ ಪ್ರಾಯೋಜಿತ(Karnataka Hijab Row) ಅಲ್ಲ, ಇದು ಬಿಜೆಪಿ ಪ್ರಾಯೋಜಿತವೆಂದು ಹೇಳಿದ್ದಾರೆ.
ಹಿಜಾಬ್ ಪ್ರಕರಣ(Karnataka Hijab Row) ಬಹಳ ಖೇದಕರ ವಿಚಾರ. ಧಾರ್ಮಿಕತೆಯನ್ನು ಬಿಂಬಿಸಿ ಮಕ್ಕಳಿಗೆ ದಾರಿ ತಪ್ಪಿಸುವ ಕೆಲಸ ಮಾಡಬಾರದು. ಶಾಲಾ ಕಾಲೇಜುಗಳಲ್ಲಿ ರಾಜಕೀಯ ಬೆರಸಬಾರದು. ಶಾಲಾ-ಕಾಲೇಜುಗಳಲ್ಲಿ ರಾಜಕೀಯ ಹಸ್ತಕ್ಷೇಪ, ವಿಷ ಬೀಜ ಬಿತ್ತಬಾರದು. ಇದೆಲ್ಲಾ ಆರಂಭವಾಗಿದ್ದೇ ಬಿಜೆಪಿಯಿಂದ. ನಾರಾಯಣ ಗುರುಗಳ ಸ್ತಬ್ಧಚಿತ್ರ ಪ್ರಕರಣದಿಂದ ಎದ್ದಿದ್ದ ಹೋರಾಟದ ಹಾದಿ ತಪ್ಪಿಸುವ ಪ್ರಯತ್ನಕ್ಕೆ ಮತ್ತೊಂದು ವಿವಾದವನ್ನು ಹುಟ್ಟುಹಾಕಲಾಗಿದೆ ಅಂತಾ ಪಾಟೀಲ್ ಹೇಳಿದ್ದಾರೆ.
ಇದನ್ನೂ ಓದಿ: ಹಿಜಾಬ್ ನಿಷೇಧದಿಂದ ಹೆಣ್ಣುಮಕ್ಕಳು ಶಿಕ್ಷಣ ಪಡೆಯಲು ಕಷ್ಟ ಪಡಬೇಕಾಗುತ್ತದೆ: ಮಾಜಿ ಸಿಎಂ ಕುಮಾರಸ್ವಾಮಿ
ಮಾತುಕತೆ ಮೂಲಕ ಬಗೆಹರಿಸಿಕೊಳ್ಳುತ್ತೇವೆ
ಗೋವಾದಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ. ಪ್ರತಿ ಕುಟುಂಬಕ್ಕೆ ವರ್ಷಕ್ಕೆ 72 ಸಾವಿರ ರೂ. ಕೊಡುವ ಯೋಜನೆಯನ್ನು ರಾಹುಲ್ ಗಾಂಧಿ(Rahul Gandhi) ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಗೋವಾದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡುವ ಹಿನ್ನಲೆ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ. ಅಂತರ್ಜಲ ವಿವಾದ ಸಂಬಂಧಿಸಿದಂತೆ ಮಹದಾಯಿ ಹಿತವನ್ನು ಕರ್ನಾಟಕ ಬಿಟ್ಟುಕೊಡಲು ಸಾಧ್ಯವಿಲ್ಲ. ಗೋವಾದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಾತುಕತೆ ಮೂಲಕ ಬಗೆಹರಿಸಿ ಕೊಳ್ಳುತ್ತೇವೆ ಅಂತಾ ಹೇಳಿದ್ದಾರೆ.
3.5 ಟಿಎಂಸಿ ನೀರು ನಮಗೆ ಹಂಚಿಕೆ ಮಾಡಲಾಗಿದೆ. ಸಾವಿರಾರು ಕನ್ನಡಗರು ಗೋವಾ(Goa)ದಲ್ಲಿ ನೆಲೆಸಿದ್ದಾರೆ.ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ(BS Yediyurappa)ನವರು ಮಹದಾಯಿ ಜಾರಿ ಮಾಡುತ್ತೇವೆ. ರಕ್ತದಲ್ಲಿ ಬರೆದುಕೊಡ್ತೇವೆ ಎಂದು ಹೇಳಿದ್ದರು. ಆದರೆ 2 ವರ್ಷ ಅಧಿಕಾರದಲ್ಲಿದ್ದರೂ ಯೋಜನೆ ಜಾರಿ ಮಾಡಲು ಸಾಧ್ಯವಾಗಲಿಲ್ಲ ಎಂದು ಟೀಕಿಸಿದರು. ಗೋದಾವರಿ, ಕೃಷ್ಣಾ, ಕಾವೇರಿ ನದಿ ಜೋಡಣೆ ಸೂಕ್ಷ್ಮ ವಿಚಾರವಾಗಿದ್ದು, ವ್ಯಾಪಕ ಅಧ್ಯಯನವಾಗಬೇಕು. ಸರ್ವ ಪಕ್ಷದ ಸಭೆ ಕರೆದು ತಂತ್ರಜ್ಞರ ಜೊತೆ ಚೆರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕು ಅಂತಾ ಪಾಟೀಲ್ ಹೇಳಿದ್ದಾರೆ.
ಇದನ್ನೂ ಓದಿ: Mallikarjun Kharge: ಮಲ್ಲಿಕಾರ್ಜುನ್ ಖರ್ಗೆಗೆ ದಾಸ್ಯದ ವೃದ್ಧ ನಾಯಕ ಎಂದ ಬಿಜೆಪಿ
ಸಿಎಂ ಇಬ್ರಾಹಿಂಗೆ ಸಾಕಷ್ಟು ಅವಕಾಶ ನೀಡಲಾಗಿದೆ
ಸಿಎಂ ಇಬ್ರಾಹಿಂ(CM Ibrahim) ಕಾಂಗ್ರೆಸ್ ತ್ಯಜಿಸುವ ವಿಚಾರವಾಗಿ ಮಾತನಾಡಿದ ಎಂ.ಬಿ.ಪಾಟೀಲ್, ಸಿಎಂ ಇಬ್ರಾಹಿಂ ಅವರಿಗೆ ಪಕ್ಷ ಸಾಕಷ್ಟು ಅವಕಾಶ ನೀಡಿದೆ. ರಾಜ್ಯ ಯುವ ಕಾಂಗ್ರೆಸ್‍ನ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಆಯ್ಕೆ ಮಾಡುವ ಬಗ್ಗೆ ಮೊದಲೇ ಚರ್ಚೆ ನಡೆದಿತ್ತು. ಹೀಗಾಗಿ ಅವರನ್ನೇ ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಮುಂಬರುವ ಚುನಾವಣೆಯಲ್ಲಿ 140 ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತೇವೆ. ಇಬ್ರಾಹಿಂ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಕ್ತ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.