ಕಾಂಗ್ರೆಸ್ ನಾಯಕಿ ರೇಷ್ಮಾ ಪಡೇಕನೂರ ಹತ್ಯೆ
ಗುರುವಾರ ರಾತ್ರಿ ಮಹಾರಾಷ್ಟ್ರದ ಎಂಐಎಂ ಮುಖಂಡನೊಬ್ಬನೊಂದಿಗೆ ರೇಷ್ಮಾ ಕಾರಿನಲ್ಲಿ ತೆರಳಿದ್ದರು ಎನ್ನಲಾಗಿದ್ದು, ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ವಿಜಯಪುರ: ಕಾಂಗ್ರೆಸ್ ನಾಯಕಿ ರೇಷ್ಮಾ ಪಡೇಕನೂರ ಅವರ ಕೊಲೆಯಾಗಿದ್ದು, ಕೊಲ್ಹಾರ ಬಳಿಯ ಕೃಷ್ಣಾ ನದಿಯ ಸೇತುವೆ ಕೆಳಗೆ ರೇಷ್ಮಾ ಅವರ ಶವ ಪತ್ತೆಯಾಗಿದೆ. ಗುರುವಾರ ರಾತ್ರಿ ದುಷ್ಕರ್ಮಿಗಳು ಕೊಲೆ ಮಾಡಿ ಶವ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.
ಗುರುವಾರ ರಾತ್ರಿ ಮಹಾರಾಷ್ಟ್ರದ ಎಂಐಎಂ ಮುಖಂಡನೊಬ್ಬನೊಂದಿಗೆ ರೇಷ್ಮಾ ಕಾರಿನಲ್ಲಿ ತೆರಳಿದ್ದರು ಎನ್ನಲಾಗಿದ್ದು, ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
2018ರ ವಿಧಾನಸಭಾ ಚುನಾವಣೆಗೂ ಮೊದಲು ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ರೇಷ್ಮಾ ಪಾಡೇಕನೂರ ಅವರು, ಜಿಲ್ಲಾಧ್ಯೆಕ್ಷೆಯಾಗಿಯೂ ಕಾರ್ಯನಿರ್ವಹಿಸಿದ್ದರು. 2013ರ ಚುನಾವಣೆಯಲ್ಲಿ ದೇವರ ಹಿಪ್ಪರಗಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನುಭವಿಸಿದ್ದರು. ಬಳಿಕ 2018ರ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಿಂದ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ರೇಷ್ಮಾ ಸೇರಿದ್ದರು.