ಹೈಕಮಾಂಡ್‌ನಿಂದ ತುರ್ತು ಬುಲಾವ್: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ದಿಢೀರ್ ದೆಹಲಿಗೆ

ಸಿದ್ದು ದೆಹಲಿ ಭೇಟಿ‌ ಹಿಂದೆ ಹಲವು ಲೆಕ್ಕಾಚಾರಗಳಿವೆ. ಪ್ರಧಾನಿ ಮೋದಿ ಎದುರಿಸುವ ಸಮರ್ಥ ನಾಯಕನೆಂಬ ಹಿನ್ನೆಲೆ, ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಬಲವರ್ಧನೆ ಕುರಿತು ಸಿದ್ದರಾಮಯ್ಯರ ಸಲಹೆ ಪಡೆಯಲು ಸೋನಿಯಾ ಮುಂದಾಗಿದ್ದಾರೆ ಎನ್ನಲಾಗಿದೆ.

Written by - Zee Kannada News Desk | Last Updated : Oct 5, 2021, 11:10 AM IST
  • ಕಾಂಗ್ರೆಸ್ ಹೈಕಮಾಂಡ್ ನಿಂದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯಗೆ ತುರ್ತು ಬುಲಾವ್
  • ಇಂದು ಮಧ್ಯಾಹ್ನ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಯಾಗಲಿರುವ ಸಿದ್ದರಾಮಯ್ಯ
  • ಸಿದ್ದರಾಮಯ್ಯನವರ ದೆಹಲಿ ಭೇಟಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ
ಹೈಕಮಾಂಡ್‌ನಿಂದ ತುರ್ತು ಬುಲಾವ್: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ದಿಢೀರ್ ದೆಹಲಿಗೆ title=
ಸೋನಿಯಾ ಗಾಂಧಿ ಭೇಟಿಗೆ ದೆಹಲಿಗೆ ತೆರಳಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಕೇವಲ ಒಂದೂವರೆ ವರ್ಷ ಮಾತ್ರ ಬಾಕಿ ಇದೆ. ಈ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಮಣಿಸಿ ಮತ್ತೆ ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡುತ್ತಿದೆ. ದಕ್ಷಿಣ ಭಾರತದಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ದಕ್ಷಿಣ ಭಾರತದಲ್ಲಿ ಸಿದ್ದರಾಮಯ್ಯರನ್ನು ಹೊರತುಪಡಿಸಿದರೆ ಬೇರಾವ ಮಾಸ್ ಲೀಡರ್ ಇಲ್ಲ. ಈ ಹಿನ್ನೆಲೆ ಕಾಂಗ್ರೆಸ್ ರಾಷ್ಟ್ರೀಯ ರಾಜಕಾರಣದಲ್ಲಿಯೂ ಸಿದ್ದರಾಮಯ್ಯ(Siddaramaiah)ರನ್ನು ಮುನ್ನೆಲೆಗೆ ತರಬೇಕೆಂಬ ಮಾತುಗಳು ಕೇಳಿಬರುತ್ತಿವೆ.

ಈ ಮಧ್ಯೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಮಾಜಿ ಸಿಎಂ ಸಿದ್ದರಾಮಯ್ಯರನ್ನು ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ. ತುರ್ತು ದೆಹಲಿಗೆ ಬರುವಂತೆ ಸೋನಿಯಾ ಕರೆ ನೀಡಿರುವ ಹಿನ್ನೆಲೆ ಇಂದು ಬೆಳ್ಳಗೆ ಬೆಂಗಳೂರಿನಿಂದ ಸಿದ್ದರಾಮಯ್ಯ ದೆಹಲಿಗೆ ತೆರೆಳಿದ್ದಾರೆ. ಇಂದು ಮಧ್ಯಾಹ್ನ ಅವರು ಸೋನಿಯಾರನ್ನು ಭೇಟಿ ಮಾಡುವ ಸಾಧ್ಯತೆ ಇದ್ದು, ಮಹತ್ವದ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬಿಜೆಪಿ ಆಳ್ವಿಕೆಯಲ್ಲಿ ಕೊಲೆಗಾರರಿಗೆ ಸನ್ಮಾನ, ಸಂತೈಸುವವರಿಗೆ ಬಂಧನ: ಕಾಂಗ್ರೆಸ್ ಟೀಕೆ

ಸಿದ್ದರಾಮಯ್ಯ ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ‘ಕೈ’​ಪಕ್ಷವನ್ನು ಮತ್ತಷ್ಟು ಬಲಪಡಿಸುವುದಕ್ಕಾಗಿ ಹೈಕಮಾಂಡ್(Congress HighCommand) ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ರಾಷ್ಟ್ರೀಯ ಮಟ್ಟದಲ್ಲೂ ಪಕ್ಷವನ್ನು ಬಲವರ್ಧನೆ ಮಾಡುವ ನಿಟ್ಟಿನಲ್ಲಿ ಸೋನಿಯಾ ಗಾಂಧಿ ಶೀಘ್ರವೇ ಎಐಸಿಸಿ ಪುನಾರಚನೆಗೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಇದೇ ಮೊದಲ‌ಬಾರಿಗೆ ಇಬ್ಬರು ಇಲ್ಲವೇ ನಾಲ್ವರು ಕಾರ್ಯಾಧ್ಯಕ್ಷರ ನೇಮಕ ಮಾಡಲು ಕೂಡ ಚಿಂತನೆ ನಡೆಸಿದ್ದಾರೆಂದು ತಿಳಿದುಬಂದಿದೆ.      

ಸಿದ್ದು ದೆಹಲಿ ಭೇಟಿ‌ ಹಿಂದೆ ಹಲವು ಲೆಕ್ಕಾಚಾರಗಳಿವೆ. ಪ್ರಧಾನಿ ಮೋದಿ(Narendra Modi) ಎದುರಿಸುವ ಸಮರ್ಥ ನಾಯಕನೆಂಬ ಹಿನ್ನೆಲೆ, ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಬಲವರ್ಧನೆ ಕುರಿತು ಸಿದ್ದರಾಮಯ್ಯರ ಸಲಹೆ ಪಡೆಯಲು ಸೋನಿಯಾ ಮುಂದಾಗಿದ್ದಾರೆ ಎನ್ನಲಾಗಿದೆ. ಇದಲ್ಲದೆ ರಾಷ್ಟ್ರ ರಾಜಕಾರಣಕ್ಕೂ ಸಿದ್ದರಾಮಯ್ಯರನ್ನು ಕರೆಸಿಕೊಳ್ಳಲು ಸೋನಿಯಾ ಚಿಂತನೆ ನಡೆಸಿದ್ದಾರೆಯೇ? ಎಂಬ ಪ್ರಶ್ನೆಗಳು ಮೂಡಿವೆ.  

ಇದನ್ನೂ ಓದಿ: ನಿಮ್ಮ ಕುಟುಂಬದ ಆಸ್ತಿ ಎಷ್ಟು ಸಾವಿರ ಕೋಟಿ ಇದೆ: ಖರ್ಗೆಗೆ ಬಿಜೆಪಿ ಪ್ರಶ್ನೆ

ಸಿದ್ದರಾಮಯ್ಯ-ಸೋನಿಯಾ ಗಾಂಧಿ(Siddaramaiah & Sonia Gandhi) ಭೇಟಿ ವೇಳೆ ಕರ್ನಾಟಕದ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ಮುಖ್ಯವಾಗಿ ರಾಜ್ಯದಲ್ಲಿ ಆಡಳಿತ ವಿರೋಧ ಭಾವನೆ ವ್ಯಕ್ತವಾಗುತ್ತಿದೆಯೇ? ಎಂಬುದರ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ. ರಾಜ್ಯದ ಪದಾಧಿಕಾರಿಗಳು, ಉಪ ಚುನಾವಣೆಗಳ ಅಭ್ಯರ್ಥಿಗಳ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಒಟ್ಟಿನಲ್ಲಿ ಸಿದ್ದರಾಮಯ್ಯ ದಿಢೀರ್ ದೆಹಲಿಗೆ ಭೇಟಿ ನೀಡುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News