ಬೆಂಗಳೂರು: ಕೊಡಗು ಪ್ರವಾಸದ ವೇಳೆ ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತನೆಂಬ ಬಿಜೆಪಿ ಆರೋಪಕ್ಕೆ ಅವರು ತಿರುಗೇಟು ನೀಡಿದ್ದಾರೆ.


COMMERCIAL BREAK
SCROLL TO CONTINUE READING

40% ಸರ್ಕಾರದ ಸಚಿವರನ್ನು ಸಿನೆಮಾ ಥಿಯೇಟರ್‌ನಲ್ಲಿ ಹುಡುಕಿದ್ರೆ ಸಿಗ್ತಾರೆ!: ಕಾಂಗ್ರೆಸ್


‘ಆಪರೇಷನ್ ಕಮಲ’ ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ ‘ಆಪರೇಷನ್ ಕಮಲ ಕೂಡ ಬಿಜೆಪಿ ನಡೆಸುತ್ತದೆ ಎಂದು‌ ಮಡಿಕೇರಿಯಲ್ಲಿ ಸಾಬೀತಾಗಿದೆ. ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ?’ ಎಂದು ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


'ನಾಯಕರನ್ನು ಸೃಷ್ಟಿಸುವವನು ನಿಜವಾದ ನಾಯಕನೇ ಹೊರತು, ಹಿಂಬಾಲಕರನ್ನು ಸೃಷ್ಟಿಸುವವರಲ್ಲ'


‘ನಮ್ಮ ಕಾರ್ಯಕರ್ತರು ಬೀದಿಗೆ ಬಂದರೆ ನಿಮಗೆ ಓಡಾಡಲೂ ಸಾಧ್ಯವಿಲ್ಲ ಎಂದು ಬೆದರಿಸುತ್ತಿರುವ ಕಾಂಗ್ರೆಸ್ ನಾಯಕರೇ, ಹಿಂದೂಗಳನ್ನು ವಿರೋಧಿಸುತ್ತಿರುವ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ಬೀದಿಗೆ ಇಳಿದಿದ್ದಾರೆ. ಹಿಂದೂ ವಿರೋಧಿ ಚಿಂತನೆ ನಿಲ್ಲಿಸಿ, ಬೀದಿಯಲ್ಲಿ ಓಡಾಡಲು ಕಷ್ಟವಾಗಬಹುದು!’ ಎಂದು ಬಿಜೆಪಿ ತಿರುಗೇಟು ನೀಡಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.