ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರಳು ಹಿಚುಕಲು ಹೊರಟಿರುವುದು ಖಂಡನೀಯ: ಸಿದ್ದರಾಮಯ್ಯ
‘ಗೋಡ್ಸೆಯನ್ನು ದೇವರಾಗಿ ಕಾಣುವ ಪ್ರಧಾನಿ ಮೋದಿ ಗುಜರಾತ್‍ನಲ್ಲಿ ಕೋಮುಗಳ ಸಂಘರ್ಷದ ವಿರುದ್ಧ ಮಾತನಾಡಬೇಕು. ಶಾಂತಿ ಮತ್ತು ಸೌಹಾರ್ದತೆಗೆ ಕರೆ ನೀಡಬೇಕು’ ಎಂದು ಜಿಗ್ನೇಶ್ ಮೆವಾನಿ ಟ್ವೀಟ್ ಮಾಡಿದ್ದರು.
ಬೆಂಗಳೂರು: ಪ್ರಧಾನಿ ಮೋದಿ ಬಗ್ಗೆ ಟ್ವೀಟ್ ಮಾಡಿದ್ದ ವಡಗಾಮ್ ಕ್ಷೇತ್ರದ ಶಾಸಕ ಮತ್ತು ದಲಿತ ನಾಯಕ ಜಿಗ್ನೇಶ್ ಮೆವಾನಿ ಅವರನ್ನು ಬಂಧಿಸಿರುವುದಕ್ಕೆ ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಸುಳ್ಳು ಆರೋಪದ ಮೇಲೆ ಗುಜರಾತ್ ಶಾಸಕ ಮತ್ತು ದಲಿತ ಹೋರಾಟಗಾರ ಜಿಗ್ನೇಶ್ ಮೆವಾನಿ ಅವರ ಬಂಧನದ ಮೂಲಕ ಬಿಜೆಪಿ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರಳು ಹಿಚುಕಲು ಹೊರಟಿರುವುದು ಅತ್ಯಂತ ಖಂಡನೀಯ. ರಾಜಕೀಯ ವಿರೋಧಿಗಳನ್ನು ಸೈದ್ಧಾಂತಿಕವಾಗಿ ಎದುರಿಸಲಾಗದೆ ಈ ರೀತಿ ಬಾಯಿಮುಚ್ಚಿಸುವುದು ಸರ್ವಾಧಿಕಾರಿ ಧೋರಣೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಲಬಾರ್ ಗೋಲ್ಡ್ ಕಂಪನಿ ವಿರುದ್ಧ ಹಿಂದೂ ಸಂಘಟನೆ ಆಕ್ರೋಶ: ಚಿನ್ನ ಖರೀದಿಸದಂತೆ ಎಚ್ಚರಿಕೆ
ಪ್ರಧಾನಿ ಮೋದಿಯವರು ಗುಜರಾತ್‍ನಲ್ಲಿ ಕೋಮುಗಳ ಸಂಘರ್ಷದ ವಿರುದ್ಧ ಮಾತನಾಡಬೇಕು. ಶಾಂತಿ ಮತ್ತು ಸೌಹಾರ್ದತೆಗೆ ಕರೆ ನೀಡಬೇಕು’ ಎಂದು ಜಿಗ್ನೇಶ್ ಮೆವಾನಿ ಟ್ವೀಟ್ ಮಾಡಿದ್ದರು. ಪ್ರಧಾನಿ ವಿರುದ್ಧ ಆಕ್ಷೇಪಾರ್ಯ ಟ್ವೀಟ್ ಮಾಡಿದ ಆರೋಪದಡಿ ಜಿಗ್ನೇಶ್‍ರನ್ನು ಅಸ್ಸಾಂನ ಪೊಲೀಸರು ಏ.19ರಂದು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗೊಂಡಿದ್ದ ಅವರನ್ನು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮತ್ತೆ ಬಂಧಿಸಲಾಗಿದೆ.
ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಅವರೇ ಪಿಎಸ್ಐ ನೇಮಕಾತಿ ಹಗರಣದ ಆರೋಪಿ: ಬಿಜೆಪಿ ಆರೋಪ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.