ಸುಳ್ಳು ಸಾಧನೆಗಳ ಖಾಲಿತಟ್ಟೆ ಬಡಿದು ಮೋದಿ ದೇಶದ ಜನರನ್ನು ಮರುಳು ಮಾಡುತ್ತಿದ್ದಾರೆ: ಸಿದ್ದರಾಮಯ್ಯ

'ಘೋಷಿತ ಗುರಿಯಂತೆ ದೇಶದ 103 ಕೋಟಿ ವಯಸ್ಕರಿಗೆ ಡಿಸೆಂಬರ್ 31ರೊಳಗೆ 2 ಡೋಸ್ ನೀಡಲು 206 ಕೋಟಿ ಲಸಿಕೆ ಬೇಕಾಗಿದೆ'

Written by - Zee Kannada News Desk | Last Updated : Oct 22, 2021, 11:00 AM IST
  • ದೇಶದ 139 ಕೋಟಿ ಜನರಲ್ಲಿ 29 ಕೋಟಿ ಜನರಿಗೆ ಮಾತ್ರ ಎರಡು ಡೋಸ್ ಕೊರೊನಾ ಲಸಿಕೆ ನೀಡಲಾಗಿದೆ
  • ಅತ್ಯವಸರದಿಂದ 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದ
  • 68 ಕೋಟಿ ಜನರಿಗೆ ಇನ್ನು ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲವೆಂದು ಮೋದಿ ಕುಟುಕಿದ ಸಿದ್ದರಾಮಯ್ಯ
ಸುಳ್ಳು ಸಾಧನೆಗಳ ಖಾಲಿತಟ್ಟೆ ಬಡಿದು ಮೋದಿ ದೇಶದ ಜನರನ್ನು ಮರುಳು ಮಾಡುತ್ತಿದ್ದಾರೆ: ಸಿದ್ದರಾಮಯ್ಯ  title=
ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಗುಡುಗು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ(Narendra Modi) ಸುಳ್ಳು ಸಾಧನೆಗಳ ಖಾಲಿ ತಟ್ಟೆ ಬಡಿಯುತ್ತಾ ದೇಶದ ಜನರನ್ನು ಮರುಳು ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು ಕೇಂದ್ರ ಸರ್ಕಾರದ ಲಸಿಕಾ ಸಾಧನೆಯ ಬಗ್ಗೆ ವ್ಯಂಗ್ಯವಾಡಿದ್ದಾರೆ.

‘ಸುಳ್ಳು ಸಾಧನೆಗಳ ಖಾಲಿ ತಟ್ಟೆ ಬಡಿಯುತ್ತಾ ದೇಶದ ಜನರನ್ನು ಮರುಳು ಮಾಡುತ್ತಾ ಬಂದ ಪ್ರಧಾನಿ ಮೋದಿ ಅವರೇ? ಮೊದಲು ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಎರಡು ಡೋಸ್ ಲಸಿಕೆ ನೀಡಲು ಗಂಭೀರವಾಗಿ ಸರ್ಕಾರವನ್ನು ತೊಡಗಿಸಿಕೊಳ್ಳಿ. ಸಾಧನೆಯ ಸಂಭ್ರಮಾಚರಣೆ ಆಮೇಲೆ ಮಾಡೋಣ’ ಎಂದು ಸಿದ್ದರಾಮಯ್ಯ(Siddaramaiah) ಟೀಕಿಸಿದ್ದಾರೆ.

ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣ: ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್

‘ದೇಶದ 139 ಕೋಟಿ ಜನರಲ್ಲಿ 29 ಕೋಟಿ ಜನರಿಗೆ ಮಾತ್ರ ಎರಡು ಡೋಸ್ ಕೊರೊನಾ ಲಸಿಕೆ(COVID-19 Vaccine) ನೀಡಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಅತ್ಯವಸರದಿಂದ 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದವಾಗಿದೆ’ ಎಂದು ವ್ಯಂಗ್ಯವಾಡಿದ್ದಾರೆ.

‘ದೇಶದಲ್ಲಿ ಇಲ್ಲಿಯವರೆಗೆ 29 ಕೋಟಿ ಜನರಿಗೆ ಎರಡು ಡೋಸ್ ಮತ್ತು 42 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಮಾತ್ರ ನೀಡಲಾಗಿದೆ. 139 ಕೋಟಿ ಜನರಲ್ಲಿ 68 ಕೋಟಿ ಜನರಿಗೆ ಇನ್ನು ಒಂದು ಡೋಸ್ ಲಸಿಕೆ(COVID-19 Vaccine) ಕೂಡಾ ನೀಡಿಲ್ಲ. ಯಾವ ಸಾಧನೆಗೆ ಸಂಭ್ರಮಾಚರಣೆ?’ ಎಂದು ಸಿದ್ದರಾಮಯ್ಯ ಪ್ರಧಾನಿ ಮೋದಿಯವರನ್ನು ಪ್ರಶ್ನಿಸಿದ್ದಾರೆ.  

ಇದನ್ನೂ ಓದಿ: School Children : ಈಗ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಸುರಕ್ಷಿತ : ಪೋಷಕರಿಗೆ ಮಕ್ಕಳ ತಜ್ಞರಿಂದ ಸಲಹೆ 

‘ಘೋಷಿತ ಗುರಿಯಂತೆ ದೇಶದ 103 ಕೋಟಿ ವಯಸ್ಕರಿಗೆ ಡಿಸೆಂಬರ್ 31ರೊಳಗೆ 2 ಡೋಸ್ ನೀಡಲು 206 ಕೋಟಿ ಲಸಿಕೆ ಬೇಕಾಗಿದೆ. ಕೊಟ್ಟಿರುವುದು 100 ಕೋಟಿ ಮಾತ್ರ. ಗುರಿ ತಲುಪಲು ಪ್ರತಿದಿನ 1.51 ಕೋಟಿ ಲಸಿಕೆ ನೀಡಬೇಕಾಗಿದೆ ಇದಕ್ಕಾಗಿ ಬೇಕಾಗಿರುವುದು ಸಿದ್ಧತೆ, ಖಾಲಿ ತಟ್ಟೆಯ ಪ್ರಚಾರ ಅಲ್ಲ. ಅಮೆರಿಕ ಶೇ.56ರಷ್ಟು, ಚೀನಾ ಶೇ.70ರಷ್ಟು ಜನಸಂಖ್ಯೆಗೆ ಎರಡು ಡೋಸ್ ಕೊರೊನಾ ಲಸಿಕೆ ನೀಡಿ ಬೂಸ್ಟರ್ ಲಸಿಕೆ ನೀಡುವ ಸಿದ್ಧತೆಯಲ್ಲಿದೆ. ಭಾರತದಲ್ಲಿ ಕೇವಲ ಶೇ.21ರಷ್ಟು ಜನಸಂಖ್ಯೆಗೆ ಮಾತ್ರ ಎರಡು ಡೋಸ್ ಲಸಿಕೆ ನೀಡಲಾಗಿದೆ. ಯಾವ ಸಾಧನೆಗೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ?’ ಎಂದು ಸಿದ್ದರಾಮಯ್ಯ ಕುಟುಕಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News