ಬೆಂಗಳೂರು: ಪಕ್ಷಾಂತರ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಶೆಡ್ಯೂಲ್ 10ರ ಪ್ರಕಾರ  ಕಾಂಗ್ರೆಸ್​ನ ಮೂವರು​ ಶಾಸಕರನ್ನು ಸ್ಪೀಕರ್​ ಕೆ.ಆರ್. ರಮೇಶ್​ ಕುಮಾರ್ ಗುರುವಾರ ಅನರ್ಹಗೊಳಿಸಿದ್ದಾರೆ. 


COMMERCIAL BREAK
SCROLL TO CONTINUE READING

ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ರಾ ಕುಮಟಳ್ಳಿ, ರಾಣಿಬೆನ್ನೂರು ಶಾಸಕ ಆರ್.ಶಂಕರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ತೀರ್ಪು ಘೋಷಿಸಿರುವ ಸ್ಪೀಕರ್, ಈ ಮೂವರೂ ಶಾಸಕರನ್ನು 2023ರವರೆಗೆ ಅಂದರೆ, 3 ವರ್ಷ 10 ತಿಂಗಳ ಕಾಲ ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಗುರುವಾರ ತೀರ್ಪು ನೀಡಿದ್ದಾರೆ. ಅಲ್ಲದೆ ಈ ವಿಧಾನಸಭೆಯ ಅವಧಿ ಮುಗಿಯುವವರೆಗೆ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಹೇಳಿದ್ದಾರೆ. 


ಸ್ಪೀಕರ್​ ರಮೇಶ್ ಕುಮಾರ್ ಅವರ ಈ ಆದೇಶವನ್ನು ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ನಾಯಕರು ಸ್ವಾಗತಿಸಿದ್ದಾರೆ. 


ಕೆಸರಲ್ಲಿ ಕಮಲ ಕೀಳಲು ಹೋಗಿ ತ್ರಿಶಂಕು ಪರಿಸ್ಥಿತಿಗೊಳಗಾದ ಅತೃಪ್ತ ಶಾಸಕರು. ಬಿಜೆಪಿಯ ಅನೈತಿಕ ಆಪರೇಷನ್ ಕಮಲಕ್ಕೆ ಒಳಗಾಗಿ ಪಕ್ಷ, ಜನಾದೇಶ, ಪ್ರಜಾಪ್ರಭುತ್ವಕ್ಕೆ ದ್ರೋಹ ಬಗೆದವರಿಗೆ ಸರಿಯಾದ ಶಿಕ್ಷೆಯಾಗಿದೆ ಎಂದು ರಾಜ್ಯ ಕಾಂಗ್ರೆಸ್​ ಟ್ವೀಟ್ ಮಾಡಿದೆ.



ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ನಮ್ಮ‌ ಪಕ್ಷದ ಮೂವರು ಶಾಸಕರನ್ನು ಅನರ್ಹಗೊಳಿಸಿದ ಮಾನ್ಯ ಸಭಾಧ್ಯಕ್ಷರ ನಿರ್ಣಯವನ್ನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವದ ರಕ್ಷಣೆಗಾಗಿ ಇಂಥ ಕಠಿಣ ನಿರ್ಣಯಗಳು ಅತ್ಯಗತ್ಯ. ಸ್ವಾರ್ಥ ಸಾಧನೆಗಾಗಿ ಜನಾದೇಶವನ್ನು ಉಲ್ಲಂಘಿಸುವವರಿಗೆ ಈ ಐತಿಹಾಸಿಕ ನಿರ್ಣಯ ಎಚ್ಚರಿಕೆಯ ಗಂಟೆಯಾಗಲಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.



ಅಧಿಕಾರದಾಸೆಗೆ ಪಕ್ಷ ತೊರೆದು ಹೋಗಿ ತಮ್ಮನ್ನಾರಿಸಿದ ಜನರನ್ನು ಇಡೀ ದೇಶದ ಜನರ ಎದುರಿಗೆ ನಗೆಪಾಟಲಿಗೀಡಾಗುವಂತೆ ಮಾಡಿದ ರಮೇಶ್ ಜಾರಕಿಹೊಳಿ,‌ ಶಂಕರ್ ಹಾಗೂ ಮಹೇಶ್ ಕುಮಟಳ್ಳಿ ಅವರನ್ನು ಅಮಾನತು ಮಾಡಿರುವ ಸಭಾಧ್ಯಕ್ಷರ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಬಂಡಾಯ ಶಾಸಕರ ನಡವಳಿಕೆಯಿಂದಾಗಿ ರಾಜಕಾರಣದ ಬಗ್ಗೆ ಜನರಲ್ಲಿ ಹೇಸಿಗೆ ಹುಟ್ಟಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಡಾ. ಜಿ. ಪರಮೇಶ್ವರ ಟ್ವೀಟ್ ನಲ್ಲಿ ಬರೆದಿದ್ದಾರೆ.



ಪ್ರಸ್ತುತ ಕರ್ನಾಟಕ ವಿಧಾನಸಭೆಯ ಸಂಪೂರ್ಣ ಅವಧಿಗೆ ಸ್ಪೀಕರ್ # ರಮೇಶ್ ಕುಮಾರ್ 3 ಶಾಸಕರು, ಆರ್ ಶಂಕರ್, ರಮೇಶ್ ಜಾರ್ಕಿಹೋಲಿ ಮತ್ತು ಮಹೇಶ್ ಕುಮತಳ್ಳಿ ಅವರನ್ನು ಅನರ್ಹಗೊಳಿಸಿದ್ದಾರೆ. ತೀರ್ಪನ್ನು ಪೂರ್ಣ ಹೃದಯದಿಂದ ಸ್ವಾಗತಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.