ಬೆಂಗಳೂರು : ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಗೆ ಪಕ್ಷದ ಪ್ರಮುಖರು ಗೈರು ಹಾಜರಾಗಿದ್ದಾರೆ.
ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar), ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್, ಯುಟಿ ಖಾದರ್ ಸೇರಿದಂತೆ ಕಾಂಗ್ರೆಸ್ ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದಾರು.
ಇದನ್ನೂ ಓದಿ : Cyber Security Policy: ಸರಕಾರದಿಂದ ಸದ್ಯದಲ್ಲೇ ಸೈಬರ್ ಭದ್ರತಾ ನೀತಿ ಜಾರಿ: ಅಶ್ವತ್ಥನಾರಾಯಣ
ಸಭೆ ಪ್ರಾರಂಭವಾಗುತ್ತಿದ್ದಂತೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah), ಮೊನ್ನೆ ನಡೆದ ಆಲ್ ಪಾರ್ಟಿ ಮಿಟಿಂಗ್ ಬಗ್ಗೆ ಸಭೆಗೆ ಮಾಹಿತಿ ನೀಡಿ. ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಿದರು. ಸರ್ಕಾರದವರು ಹೇಳುವುದು ಒಂದು ಮಾಡುವುದು ಒಂದು. ಹಾಗಾಗಿ ಈ ವಿಷಯಗಳ ಮುಂದಿಟ್ಟು ಸರ್ಕಾರ ವಿರುದ್ಧ ಅಟ್ಯಾಕ್ ಮಾಡಬೇಕು ಎಂದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ,ಈಶ್ವರ ಖಂಡ್ರೆ,ಜಮೀರ್ ಅಹಮದ್ ಖಾನ್, ಡಾ.ಜಿ.ಪರಮೇಶ್ವರ್(G Parameshwara), ರಮೇಶ್ ಕುಮಾರ್, ಆರ್.ವಿ.ದೇಶಪಾಂಡೆ ಸೇರಿದಂತೆ ಹಲವಾರು ನಾಯಕರು ಸಭೆಗೆ ಗೈರು ಹಾಜರಾಗಿದ್ದಾರೆ.
ಇದನ್ನೂ ಓದಿ : HD Kumaraswamy : ಕಸದ ಲಾರಿಗೆ ಬಾಲಕಿ ಬಲಿ : ಬಿಬಿಎಂಪಿ ವಿರುದ್ಧ ಕಿಡಿಕಾರಿದ ಹೆಚ್'ಡಿಕೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.