Mekkedadu 2.O : `ಇದೇ 27ರಿಂದ ಮತ್ತೆ ಮೇಕೆದಾಟು ಪಾದಯಾತ್ರೆ ಪುನಾರಂಭ`
ಈ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಹೀಗಾಗಿ ನಾವು ತಯಾರಿ ಮಾಡಿಕೊಳ್ಳುತ್ತಿದ್ದು ಬೆಳಗ್ಗೆ ಎದ್ದು ನಡೆಯುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ
ಬೆಂಗಳೂರು : ಇದೇ 27ರಿಂದ ಮತ್ತೆ ಮೇಕೆದಾಟು ಪಾದಯಾತ್ರೆ ಆರಂಭಿಸುತ್ತಿದ್ದು, ಈ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಹೀಗಾಗಿ ನಾವು ತಯಾರಿ ಮಾಡಿಕೊಳ್ಳುತ್ತಿದ್ದು ಬೆಳಗ್ಗೆ ಎದ್ದು ನಡೆಯುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ
ಈ ಕುರಿತು ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಮಾಹಿತಿ ನೀಡಿದ ಡಿಕೆ ಶಿವಕುಮಾರ್(DK Shivakumar), ರಾಜ್ಯ ಹಾಗೂ ರಾಷ್ಟ್ರದ ಹಿತಕ್ಕಾಗಿ ನಾವು ಹೋರಾಟ ಮಾಡುತ್ತಿದ್ದು, ಬೆಂಗಳೂರು ಜನರ ಕುಡಿಯುವ ನೀರಿಗೆ, ರೈತರ ಹಿತಕ್ಕೆ ಮೇಕೆದಾಟು ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದರು.
DK Shivakumar : 'ನಾವು ಬಚ್ಚಲು ಬಾಯಿ ಈಶ್ವರಪ್ಪನ ರಾಜೀನಾಮೆ ಕೇಳುತ್ತಿಲ್ಲ'
ಬಿಜೆಪಿ(BJP)ಯವರಿಗೆ ರಾಜ್ಯದ ನೀರಾವರಿ ವಿಚಾರವಾಗಿ ಆಸಕ್ತಿ ಇಲ್ಲ. ಅವರಲ್ಲಿ ಡಬಲ್ ಇಂಜಿನ್ ಸರ್ಕಾರವಿದ್ದರೂ ಅವರು ಯಾವಾಗ ಬೇಕಾದರೂ ಕೆಲಸ ಆರಂಭಿಸಬಹುದು. ಈ ಯೋಜನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳೇ ಹೇಳಿದ್ದು, ಕೇವಲ ಹೇಳಿದರೆ ಸಾಲದು. ಅಧಿಸೂಚನೆ ಹೊರಡಿಸಿ, ಜಾಗ ವಶಪಡಿಸಿಕೊಳ್ಳಬೇಕು, ಭೂಮಿ ಪೂಜೆ ಮಾಡಬೇಕು ಎಂದು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.