ಬೆಂಗಳೂರು: 'ನೀರಿಗಾಗಿ ನಡಿಗೆ' (Walk for Water) ಮೇಕೆದಾಟು ಯೋಜನೆ ಶೀಘ್ರ ಕಾಮಗಾರಿ ಆರಂಭಕ್ಕೆ ಒತ್ತಾಯಿಸಿ ಕರ್ನಾಟಕ ಕಾಂಗ್ರೆಸ್ ಪಾದಯಾತ್ರೆ ಆರಂಭಿಸಿದೆ. ಇಂದು ಬೆಳಗ್ಗೆ ಸ್ವಾಮೀಜಿ, ಮೌಲ್ವಿ ಮತ್ತು ಪಾದ್ರಿಗಳು ಮೂರೂ ಧರ್ಮಗಳ ಧಾರ್ಮಿಕ ಮುಖಂಡರು ಗಿಡಗಳಿಗೆ ನೀರೆರೆಯುವ ಮೂಲಕ ಹಾಗೂ ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು.
ಮೇಕೆದಾಟು ಪಾದಯಾತ್ರೆಯಲ್ಲಿ ತೊಡಗಿಕೊಂಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜ್ವರ ಕಾಣಿಸಿಕೊಂಡಿದೆ. ಜ್ವರದಿಂದ ಬಳಲುತ್ತಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯಗೆ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಗೋವಿಂದ ಕಾರಜೋಳ, "ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡಿದ್ದು ನನಗೆ ಕಳವಳ ಆಗಿದೆ.ಸಿದ್ಧರಾಮಯ್ಯನವರೇ ದಯವಿಟ್ಟು ವಿಶ್ರಾಂತಿ ತೆಗೆದುಕೊಳ್ಳಿ.ತಮ್ಮ ಆರೋಗ್ಯ ರಕ್ಷಣೆ ಮಹತ್ವದ್ದು" ಎಂದು ಹೇಳಿದ್ದಾರೆ.
ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡಿದ್ದು ನನಗೆ ಕಳವಳ ಆಗಿದೆ.ಸಿದ್ಧರಾಮಯ್ಯನವರೇ ದಯವಿಟ್ಟು ವಿಶ್ರಾಂತಿ ತೆಗೆದುಕೊಳ್ಳಿ.ತಮ್ಮ ಆರೋಗ್ಯ ರಕ್ಷಣೆ ಮಹತ್ವದ್ದು.@siddaramaiah @BJP4Karnataka
— Govind M Karjol (@GovindKarjol) January 9, 2022
ಮೊದಲ ದಿನವೇ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಸುಸ್ತಾಗಿದ್ದರು. ಮೇಕೆದಾಟು (Congress Mekedatu Padayatre) ಸಂಗಮದಿಂದ ನಡೆದ ಸಿದ್ದರಾಮಯ್ಯ ಒಂದಷ್ಟು ದೂರ ನಡೆದ ಬಳಿಕ ಆಯಾಸಗೊಂಡು ಕಾರಿನಲ್ಲಿ ಹತ್ತಿದ್ದರು. ಇದೀಗ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಮೇಕೆದಾಟು (Mekedatu) ಸಂಗಮದಿಂದ ಪಾದಯಾತ್ರೆ ಆರಂಭವಾಗಿದೆ. ಇಂದಿನಿಂದ 11 ದಿನ ಕಾಂಗ್ರೆಸ್ ಪಾದಯಾತ್ರೆ ನಡೆಯಲಿದೆ. 165ಕ್ಕೂ ಹೆಚ್ಚು ಕಿಲೋ ಮೀಟರ್ ದೂರ ಹೆಜ್ಜೆ ಹಾಕಲು ಕೈ ಪಾಳಯ ಸಾಗುತ್ತಿದೆ. ದೊಡ್ಡಹಾಲಹಳ್ಳಿ, ಕನಕಪುರ, ಮಾಡಾಳು, ಗಾಣಾಳು, ಲಿಂಗಾರಜಿಪುರ, ರಾಮನಗರ, ಕೆಂಗೇರಿ, ಕೆ.ಆರ್.ಪುರಂ ಮೂಲಕ ಬಸವನಗುಡಿ ನ್ಯಾಷನಲ್ ಕಾಲೇಜಿನಲ್ಲಿ(Basavanagudi National College Ground) ಸಮಾಪ್ತಿಯಾಗಲಿದೆ.
ಇದನ್ನೂ ಓದಿ: ಕಾಂಗ್ರೆಸ್ ಪಾದಯಾತ್ರೆ: ಮೊದಲ ದಿನವೇ ಸುಸ್ತಾಗಿ ಕಾರು ಹತ್ತಿದ ವಿಪಕ್ಷ ನಾಯಕ ಸಿದ್ದರಾಮಯ್ಯ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.