ವಾಲ್ಮೀಕಿ ಸಮುದಾಯಕ್ಕೆ ಈ ಬಾರಿ ಕೆಪಿಸಿಸಿ ಅಧ್ಯಕ್ಷ ಸ್ಥಾನ: ಪ್ರಬಲ ಒತ್ತಾಯ; ಸಚಿವರ ಪಟ್ಟು?!

ಇತ್ತೀಚೆಗೆ ವರಿಷ್ಠರನ್ನು ಭೇಟಿಯಾಗಿರುವ ಸಚಿವ ಕೆ.ಎನ್. ರಾಜಣ್ಣ, ಸಮುದಾಯದ ಮಹತ್ವವನ್ನು ನೆನಪಿಸಿ, ಈ ಬಾರಿಯಾದರೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸತೀಶ್ ಜಾರಕಿಹೊಳಿ ಅವರಿಗೆ ನೀಡಬೇಕೆಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

Written by - Prashobh Devanahalli | Edited by - Krishna N K | Last Updated : Nov 28, 2024, 01:54 PM IST
    • ವಾಲ್ಮೀಕಿ ಸಮುದಾಯದ ನಾಯಕರಿಗೆ ಈವರೆಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿಲ್ಲ
    • ಇದು ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚು ಚರ್ಚೆ ಆಗುತ್ತಿರುವ ವಿಚಾರ
    • ಈ ಬಾರಿ ವಾಲ್ಮೀಕಿ ಸಮುದಾಯಕ್ಕೆ ಈ ಸ್ಥಾನ ನೀಡಬೇಕು ಎಂಬ ಒತ್ತಾಯ ಪ್ರಬಲ
ವಾಲ್ಮೀಕಿ ಸಮುದಾಯಕ್ಕೆ ಈ ಬಾರಿ ಕೆಪಿಸಿಸಿ ಅಧ್ಯಕ್ಷ ಸ್ಥಾನ: ಪ್ರಬಲ ಒತ್ತಾಯ; ಸಚಿವರ ಪಟ್ಟು?! title=

ಬೆಂಗಳೂರು : ಕರ್ನಾಟಕದಲ್ಲಿ ವಾಲ್ಮೀಕಿ ಸಮುದಾಯದ ನಾಯಕರಿಗೆ ಈವರೆಗೂ ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ) ಅಧ್ಯಕ್ಷ ಸ್ಥಾನ ಸಿಕ್ಕಿಲ್ಲ ಎಂಬುದು ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚು ಚರ್ಚೆ ಆಗುತ್ತಿರುವ ವಿಚಾರ ವಿಚಾರ. ಈ ಹಿನ್ನೆಲೆಯಲ್ಲೇ ಈ ಬಾರಿ ವಾಲ್ಮೀಕಿ ಸಮುದಾಯಕ್ಕೆ ಈ ಸ್ಥಾನ ನೀಡಬೇಕು ಎಂಬ ಒತ್ತಾಯ ಪ್ರಬಲವಾಗಿದೆ.

ಸಚಿವರ ಬಿಗಿ ಪಟ್ಟು: ಡೆಲ್ಲಿ ಭೇಟಿ! : ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಕೆ.ಎನ್. ರಾಜಣ್ಣ, ವಾಲ್ಮೀಕಿ ಸಮುದಾಯದ ಪ್ರಭಾವಿ ಮುಖಂಡರಾಗಿದ್ದು, ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಈ ವಿಷಯವನ್ನು ಮಂಡನೆ ಮಾಡಿದ್ದಾರೆ. ಇತ್ತೀಚೆಗೆ ವರಿಷ್ಠರನ್ನು ಭೇಟಿಯಾಗಿರುವ ಸಚಿವ ಕೆ.ಎನ್. ರಾಜಣ್ಣ, ಸಮುದಾಯದ ಮಹತ್ವವನ್ನು ನೆನಪಿಸಿ, ಈ ಬಾರಿಯಾದರೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸತೀಶ್ ಜಾರಕಿಹೊಳಿ ಅವರಿಗೆ ನೀಡಬೇಕೆಂದು ಮನವಿ ಮಾಡಿದ್ದಾರೆ, ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ಧನುಷ್‌- ಐಶ್ವರ್ಯ ಅಭಿಮಾನಿಗಳಿಗೆ ಆಘಾತ..! ಜೋಡಿಗೆ ವಿಚ್ಚೇದನ ನೀಡಿ ತೀರ್ಪು ಘೋಷಿಸಿದ ಕೋರ್ಟ್‌  

ಅಹಿಂದ ಮತಗಳ ಕ್ರೋಡೀಕರಣ: ವಾಲ್ಮೀಕಿ ಸಮುದಾಯವನ್ನು ಅಹಿಂದ (ಅಲ್ಪಸಂಖ್ಯಾತ, ಹಿಂದುಳಿದ, ದಲಿತ) ಪ್ರಭಾವಿ ಸಮುದಾಯಗಳಲ್ಲಿ ಒಂದು ಎಂದು ಪರಿಗಣಿಸಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ಸಮುದಾಯದ ಪ್ರಮುಖ ಮುಖಂಡರಾಗಿದ್ದು, ಈ ಬಾರಿಯೂ ಅಹಿಂದ ಮತಗಳನ್ನು ಕಾಂಗ್ರೆಸ್ ತೆಕ್ಕೆಗೆ ಸೆಳೆಯುವ ದೃಷ್ಟಿಯಿಂದ ವಾಲ್ಮೀಕಿ ಸಮುದಾಯಕ್ಕೆ ಈ ಸ್ಥಾನ ನೀಡುವುದು ಉತ್ತಮ ತೀರ್ಮಾನವೆಂದು ಅಹಿಂದ ನಾಯಕರ ಅಭಿಪ್ರಾಯವಾಗಿದೆ.

ಮತದಾಳದ ಪ್ರಭಾವ: ವಾಲ್ಮೀಕಿ ಸಮುದಾಯ ರಾಜ್ಯದ 80 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ಈ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡುವುದರಿಂದ ಅಹಿಂದ ಮತಗಳ ಏಕೀಕರಣಕ್ಕೆ ನೆರವಾಗುತ್ತದೆ. ವಿಶೇಷವಾಗಿ, ಸಚಿವ ಸತೀಶ್ ಜಾರಕಿಹೊಳಿ ಅವರಂತಹ ನಾಯಕರು ಇತರ ಸಮುದಾಯಗಳನ್ನೂ ಸೆಳೆಯುವ ಸಾಮರ್ಥ್ಯ ಹೊಂದಿದ್ದಾರೆ,ಈ ಎಲ್ಲ ಕಾರಣಗಳಿಂದ, ಹೈಕಮಾಂಡ್ ಈ ಬಾರಿಯಾದರೂ ವಾಲ್ಮೀಕಿ ಸಮುದಾಯಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕೆಂಬ ಒತ್ತಾಯ ಪ್ರಬಲವಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News