ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಭೇಟಿಯಲ್ಲಿ ಕುತೂಹಲ ಏನಿಲ್ಲ. ಬೆಂಗಳೂರಿಗೆ ಬಂದಾಗ ಭೇಟಿಯಾಗ್ತೇನೆ. ಅವರು ಹಿರಿಯರು,ನಮ್ಮ ಸಮಾಜದ ಮುಖಂಡರು. ಇವತ್ತು ಗುರುಪೂರ್ಣಿಮೆ ಬೇರೆ. ಹಿರಿಯರ ಆಶೀರ್ವಾದ ಪಡೆಯೋಣ ಎಂದು ಬಂದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಬೇರೆ ರೀತಿ ಏನೂ ಇಲ್ಲ. ಇದೊಂದು ಸೌಹಾರ್ಧಯುತ ಭೇಟಿ. ಅವರ ಮಾರ್ಗದರ್ಶನ ಪಡೆದಿದ್ದೇನೆ. ಅವರ ಜೊತೆ ರಾಜಕಾರಣದ ಚರ್ಚೆ ಮಾಡಿಲ್ಲ. ಅವರಿಗೆ ಗೌರವ ಕೊಡ್ತಾನೇ ಬಂದಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ವಿರುದ್ದ ಸಿಎಂಗೆ ದೂರು :ವರ್ಗಾವಣೆಗೆ ಮನವಿ
ಪಂಚಮಸಾಲಿ ಸಮುದಾಯಕ್ಕೆ 2-ಎ ಮೀಸಲು ವಿಚಾರವಾಗಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ 2-ಎ ಮೀಸಲಾತಿ ಕೊಡಬೇಕು ಎಂಬ ಆಸಕ್ತಿ ಇತ್ತು ಯಡಿಯೂರಪ್ಪ ಅವರಿಗೆ ಇತ್ತು. ಕೆಲವು ಕಾರಣಾಂತರಗಳಿಂದ ಕೊಡಲು ಆಗಲಿಲ್ಲ. ನಮಗೆ ಸಿಗುವ ಭರವಸೆ ಇದೆ. ಬೊಮ್ಮಾಯಿ ಸಾಹೇಬ್ರು ಮೇಲೆ ಭರವಸೆ ಇದೆ. ಎಲ್ಲಾ ಅಡೆತಡೆ ನಿವಾರಣೆ ಮಾಡಿ ಕೊಡ್ತಾರೆ. 2-ಎ ಮೀಸಲಾತಿಯನ್ನ ಕೊಡ್ತಾರೆಂಬ ಭರವಸೆ ಇದೆ. ಬೇರೆ ಸಮುದಾಯಕ್ಕೆ ತೊಂದರೆಯಾಗದಂತೆ ನೀಡಬೇಕು ಎಂದರು.
ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಉತ್ಸವಕ್ಕೆ ಬೆಂಬಲಿಗರ ಒತ್ತಾಯ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅದರ ಬಗ್ಗೆ ನನಗೆ ಗೊತ್ತಿಲ್ಲ. ಸಿದ್ದರಾಮಯ್ಯ ಉತ್ಸವ ಮಾಡ್ತಾರೆ. ಆ ಕಮಿಟಿಯಲ್ಲಿ ನಾನು ಇದ್ದೇನೆ. ಇವತ್ತು ಸಭೆ ಇದೆ, ಭಾಗವಹಿಸುತ್ತೇನೆ. 75 ವರ್ಷ ರಾಜಕಾರಣದಲ್ಲಿ ಸೇವೆ ಸಲ್ಲಿಸಿದ್ದಾರೆ. ಮನುಷ್ಯನ ಜೀವನದಲ್ಲಿ ಅದೊಂದು ಸಾರ್ಥಕತೆ. ಅವರು ಉತ್ಸವ ಮಾಡಿ ಎಂದು ಹೇಳಿಲ್ಲ. ನಾವೆಲ್ಲ ಸೇರಿ ಮಾಡ್ತಿದ್ದೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : Today Vegetable Price: ಇಂದು ತರಕಾರಿ ಹಾಗೂ ಹಣ್ಣಿನ ಬೆಲೆ ಹೀಗಿದೆ ನೋಡಿ..
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ