ಬೆಳಗಾವಿ : ಬಿಜೆಪಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಇದರಿಂದ ಸಂತೋಷ ಪಾಟೀಲ ಸಾವಾಗಿದೆ. ಇವತ್ತು ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕುಟುಂಬದ ಜತೆಗೆ ನಿಂತಿದೆ, ಇದು ರಾಜಕೀಯಕಿಯವಲ್ಲ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ನಗರದ ಡಿಸಿ ಕಚೇರಿ ಮುಂಭಾಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಸಾವಿನ ಮನೆಯಲ್ಲಿ ರಾಜಕಾರಣ ಮಾಡುವ ಅನಿವಾರ್ಯ ನಮ್ಮ ಪಕ್ಷಕ್ಕೆ ಬಂದಿಲ್ಲ ನಂದು ಹೇಳಿದ್ದಾರೆ.


ಇದನ್ನೂ ಓದಿ : KS Eshwarappa: ಸಚಿವ ಈಶ್ವರಪ್ಪರನ್ನು ವಜಾಗೊಳಿಸಿ, ಬಂಧಿಸುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ಮನವಿ


ಸಂತೋಷ ಪಾಟೀಲ 40% ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು, ನನಗೆ ಬಂದಿರೋ ಮಾಹಿತಿ ಪ್ರಕಾರ. ಕೆಎಸ್ ಈಶ್ವರಪ್ಪನವರ ಮಗ ಮತ್ತೊ ಪ್ರಭಾವಿ ಶಾಸಕರು ಸಂತೋಷನಿಗೆ ಧಮ್ಕಿ ಕೊಟ್ಟಿದ್ದಾರೆ. ಮೆಸೇಜ್ ಕೂಡ ನನಗೆ ಬಂದಿದೆ. ನಮ್ಮ ಪಕ್ಷದ ಹಿರಿಯ ನಾಯಕರು ಬಂದು ಆ ಪ್ರಭಾವಿ ಶಾಸಕನ ಹೆಸರನ್ನ ಬಹಿರಂಗ ಮಾಡ್ತಾರೆ. 


ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅರುಣ್ ಸಿಂಗ್ ಅವರಿಗೆ ಸಾವಿನ ಮನೆಯಲ್ಲಿ ರಾಜಕಾರಣ ಮಾಡುವ ಅನಿವಾರ್ಯವಿದೆ. ಭ್ರಷ್ಟಾಚಾರ, ಬೆಲೆ ಏರಿಕೆ ಮುಖವಾಡ ಡೈವರ್ಟ್ ಮಾಡಲು. ಶಿವಮೊಗ್ಗದಲ್ಲಿ 144 ಸೆಕ್ಸನ್ ಇದ್ರೂ ‌ಈಶ್ವರಪ್ಪ ಮೆರವಣಿಗೆಯಲ್ಲಿ ಭಾಗಿಯಾಗಿ ರಾಜಕೀಯ ಬಣ ಕೊಟ್ಟಿದ್ದಾರೆ ಎಂದ ಎಂದು ಹೇಳಿದರು.
ಇದನ್ನೂ ಓದಿ : 40% ಕಮಿಷನ್ ನಲ್ಲಿ ಸಿಎಂ ಬೊಮ್ಮಾಯಿ ಪಾಲುದಾರರಾ?- ಬಿ ಕೆ ಹರಿಪ್ರಸಾದ್ ವಾಗ್ದಾಳಿ


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.