ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆರೋಗ್ಯದಲ್ಲಿ ಚೇತರಿಕೆ
ಸೋಮರಾರ ರಾತ್ರಿಯಿಂದ ತನ್ವೀರ್ ಸೇಠ್ ಅವರಿಗೆ ಅಳವಡಿಸಲಾಗಿದ್ದ ವೆಂಟಿಲೇಟರ್ ತೆಗೆದು ಹಾಕಲಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.
ಮೈಸೂರು: ಹಲ್ಲೆಗೆ ಒಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಶಾಸಕ ತನ್ವೀರ್ ಸೇಠ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿರುವುದರಿಂದ ಅವರಿಗೆ ಅಳವಡಿಸಲಾಗಿದ್ದ ವೆಂಟಿಲೇಟರ್ ತೆಗೆದು ಹಾಕಲಾಗಿದೆ. ಸೇಠ್ ವೆಂಟಿಲೇಟರ್ ಸಹಾಯವಿಲ್ಲದೆ ಸ್ವತಂತ್ರವಾಗಿ ಉಸಿರಾಡುತ್ತಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಮಾಹಿತಿ ನೀಡಿದ್ದಾರೆ.
ಭಾನುವಾರ ರಾತ್ರಿ (ನವೆಂಬರ್ 17) ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಬನ್ನಿಮಂಟಪ ಆವರಣದಲ್ಲಿ ಆಯೋಜನೆಗೊಂಡಿದ್ದ ಸಂಬಂಧಿಕರೊಬ್ಬರ ಬೀಗರ ಔತಣಕೂಟದಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಯುವಕನೋರ್ವ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದನು.
ಉದ್ಯೋಗ ಕೊಡಿಸಲು ಸಹಾಯ ಮಾಡಲಿಲ್ಲ ಎಂಬ ಕಾರಣಕ್ಕೆ ಮೈಸೂರಿನ ನರಸಿಂಹರಾಜ ಠಾಣೆ ಪೊಲೀಸರು ಗೌಸಿಯಾನಗರದ ಮುಕ್ಬುಲ್ ಎಂಬುವರ ಪುತ್ರ ಫರಾನ್ ಪಾಷಾ ತನ್ವೀರ್ ಸೇಠ್ ಅವರನ್ನು ಹತ್ಯೆ ಮಾಡಲು ಯತ್ನಿಸಿದ ಎನ್ನಲಾಗಿದೆ.