Yathindra Siddaramaiah : ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಫೀಕ್ಸ್!
ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಪುತ್ರ, ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಸುಳಿವು ಬಿಟ್ಟುಕೊಟ್ಟಿದ್ದಾರೆ, ಸಿದ್ದರಾಮಯ್ಯ ಅವರು ವರುಣದಿಂದ ಸ್ಪರ್ಧೆ ಮಾಡ್ತಾರೆ ಎಂದು ಸಾಕಷ್ಟು ಜನ ಕೇಳಿದ್ದಾರೆ ಎಂದು ಹೇಳಿದರು.
ಬೆಂಗಳೂರು : ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಪುತ್ರ, ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಸುಳಿವು ಬಿಟ್ಟುಕೊಟ್ಟಿದ್ದಾರೆ, ಸಿದ್ದರಾಮಯ್ಯ ಅವರು ವರುಣದಿಂದ ಸ್ಪರ್ಧೆ ಮಾಡ್ತಾರೆ ಎಂದು ಸಾಕಷ್ಟು ಜನ ಕೇಳಿದ್ದಾರೆ ಎಂದು ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಾ. ಯತೀಂದ್ರ, ನಾನು ಸಾಕಷ್ಟು ಬಾರಿ ಉತ್ತರ ಹೇಳಿದ್ದೇನೆ. ತಂದೆಯವರು ಎಲ್ಲಿ ನಿಲ್ಲಬೇಕು ಎಂದು ತೀರ್ಮಾನ ಮಾಡಿಲ್ಲ. ಎಲ್ಲಿ ನಿಲ್ಲಬೇಕು ಎಂದು ತೀರ್ಮಾನ ಮಾಡಿದ್ರೆ ನಾವು ಬದ್ದವಾಗಿದ್ದೇವೆ. ವರುಣದಲ್ಲಿದ್ದಾರೂ ನಿಲ್ಲಬಹುದು, ಬೇರೆ ಕಡೆಯಾದರು ನಿಲ್ಲಬಹುದು. ಬೇರೆ ಕಡೆಯಲ್ಲು ಅವರನ್ನ ಕರೆಯುತ್ತಿದ್ದಾರೆ, ವರುಣ ಕ್ಷೇತ್ರದಲ್ಲಿ ನಿಲ್ಲಬೇಕು ಎಂದು ಅಪ್ಪ ತೀರ್ಮಾನ ಮಾಡಿದ್ರೆ, ನಾನು ಪಕ್ಷದ ಶಾಸಕ ಹಾಗೂ ಆ ಕ್ಷೇತ್ರದ ಹಿಂದಿನ ಶಾಸಕನಾಗಿ ಅವರ ಪರ ಕೆಲಸ ಮಾಡಬೇಕಾಗುತ್ತದೆ, ಹೀಗಾಗಿ ಅಪ್ಪ ನಿಂತರೇ ನಾನು ಎಲ್ಲೂ ಸ್ಪರ್ಧೆ ಮಾಡಲ್ಲ ಎಂದರು.
ಇದನ್ನೂ ಓದಿ : “ನಮ್ಮಿಬ್ಬರನ್ನು ನೆನಪಿಸಿಕೊಳ್ಳದಿದ್ದರೆ ಬಿಜೆಪಿಯವರಿಗೆ ಸಮಾಧಾನ ಆಗುವುದಿಲ್ಲ”
ಕ್ಷೇತ್ರದಲ್ಲಿ ಕೆಲಸ ಮಾಡಬೇಕಾಗುತ್ತದೆ, ಅಪ್ಪನಿಗಾಗಿ ಪ್ರಚಾರ ಮಾಡ್ತೇನೆ. ತ್ಯಾಗ ಏನು ಅಲ್ಲ, ತಂದೆ ನಿಲ್ಲತಾರೆ ಎಂದ್ರೆ ಬೇರೆಯವರು ಬಿಟ್ಟು ಕೊಡ್ತಾರೆ. ನಾನು ಕೂಡ ಪಕ್ಷದ ಕಾರ್ಯಕರ್ತನಾಗಿ ಬಿಟ್ಟು ಕೊಡ್ತೇನೆ ಎಂದು ವಿವರಿಸಿದರು.
ನಂತರ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕ್ಷೇತ್ರ ಬಿಡಲು ರೆಡಿ ಎಂಬ ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರ ಅಭಿಪ್ರಾಯವನ್ನ ಅವರು ಹೇಳಿದ್ದಾರೆ, ಅದರ ಬಗ್ಗೆ ನಾನೇನು ಮಾತನಾಡಲ್ಲ ಎಂದು ನಗುತ್ತಾ ಮುನ್ನಡೆದರು.
ಇದನ್ನೂ ಓದಿ : “ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾದ ನಂತರ ಗಾಂಧಿ ಪರಿವಾರದ ಸಲಹೆ ಪಡೆಯುತ್ತೇನೆ”
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.