ಬೆಂಗಳೂರು: ಕೋವಿಡ್ ಸೋಂಕಿನ ವಿರುದ್ಧ ಹೋರಾಡಲು ನೀಡಲಾಗುತ್ತಿರುವ ಲಸಿಕೆ ಖರೀದಿಗೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಕಾಂಗ್ರೆಸ್ ಸಹಾಯ ಹಸ್ತ ಚಾಚಿದೆ.
ಈ ವಿಷಯವನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ, ವಿರೋಧ ಪಕ್ಷದ ನಾಯಕರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಪ್ರಕಟಿಸಿದ್ದಾರೆ.
ಇದನ್ನೂ ಓದಿ : Tauktae Cyclone : ತೌಕ್ತೆ ಚಂಡಮಾರುತದಿಂದ ರಾಜ್ಯದ ಹಲವಡೆ ಭಾರೀ ಮಳೆ..!
ನಗರದ ಕಾಂಗ್ರೆಸ್ ಕಚೇರಿಯಲ್ಲಿಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪ್ರತಿ ಶಾಸಕರು 1 ಕೋಟಿ ರೂ. ನೀಡುವ ಮೂಲಕ 100 ಕೋಟಿ ರೂಪಾಯಿ ಸಂಗ್ರಹ ಮಾಡಿ ಸರ್ಕಾರಕ್ಕೆ ನೀಡುತ್ತೇವೆ ಎಂದು ಹೇಳಿದರು.
The 100 CR #Vaccination plan !
This is the Congress way !
Kudos to @INCKarnataka , @siddaramaiah , @DKShivakumar & Congress MLA/MLC’s to offer ₹100 CR from ‘Development Fund’ for free vaccination to 18-44 years in Karnataka.
Will BJP-Yediyurappa Govt now wake up from slumber? https://t.co/MuVsbWXXsa
— Randeep Singh Surjewala (@rssurjewala) May 14, 2021
ಇದನ್ನೂ ಓದಿ : S Suresh Kumar : SSLC ಪರೀಕ್ಷೆ ಮುಂದೂಡಿಕೆ : ಸಚಿವ ಸುರೇಶ್ ಕುಮಾರ್
ಕಾಂಗ್ರೆಸ್(Congress) ಪ್ರತಿ ಶಾಸಕರು, ಸಂಸದರಿಗೆ ಪ್ರತಿವರ್ಷ ನೀಡಲಾಗುವ ಪ್ರದೇಶಾಭಿವೃದ್ಧಿ ನಿಧಿಯಡಿ ತಲಾ 1 ಕೋಟಿ ರೂಪಾಯಿಯನ್ನು ನೀಡಲಾಗುತ್ತದೆ. ಶಾಸಕರು, ವಿಧಾನಪರಿಷತ್ ಸದಸ್ಯರಿಗೆ ಪ್ರದೇಶಾಭಿವೃದ್ಧಿ ನಿಧಿಯಡಿ ತಲಾ 2 ಕೋಟಿ ರೂ., ಲೋಕಸಭಾ ಮತ್ತು ರಾಜ್ಯಸಭಾ ಸಂಸದರಿಗೆ ತಲಾ 5 ಕೋಟಿ ರೂಪಾಯಿ ಸಿಗುತ್ತದೆ, ಅದರಡಿ ರಾಜ್ಯದಲ್ಲಿರುವ 95 ಮಂದಿ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಕೊರೋನಾ ಲಸಿಕೆಗೆ ಹಣ ನೀಡಲಿದ್ದಾರೆ. ಅದನ್ನು ಸರ್ಕಾರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಇದನ್ನೂ ಓದಿ : ರಾಜ್ಯ ಸರ್ಕಾರ ಕೂಡಲೇ ಬಡವರಿಗೆ ಆಹಾರ ಮತ್ತು ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಲಿ-ಸಿದ್ಧರಾಮಯ್ಯ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.