ಬೆಂಗಳೂರು: ಈ ಹಿಂದೆ ಸದನದಲ್ಲಿ ಕೂತು ಬಿಜೆಪಿಯ ಮೂವರು ಶಾಸಕರು ಬ್ಲೂ ಫಿಲಂ ವೀಕ್ಷಣೆ ಮಾಡಿ ಇಡೀ ದೇಶಾದ್ಯಂತ ಕರ್ನಾಟಕದ ಮಾನ ಮರ್ಯಾದೆಯನ್ನ ತೆಗೆದಿದ್ದರು. ಇದು ರಾಜ್ಯದ ಪಾಲಿಗೆ ಕಪ್ಪು ಚುಕ್ಕೆಯಾಗೇ ಉಳಿಕೊಂಡಿದೆ. ಇದೀಗ ಮತ್ತೊಬ್ಬ ಜನಪ್ರತಿನಿಧಿ ಕಲಾಪದಲ್ಲಿ ಕುಳಿತು ಅಶ್ಲೀಲ ವಿಡಿಯೋ ನೋಡುವ ಮೂಲಕ ಸದನದ ಮಾನ ಹರಾಜು ಹಾಕಿದ ಘಟನೆ ಶುಕ್ರವಾರ ಸಂಭವಿಸಿದೆ.


COMMERCIAL BREAK
SCROLL TO CONTINUE READING

ಇಂದು ವಿಧಾನಪರಿಷತ್​ ಕಲಾಪ ನಡೆಯುತ್ತಿತ್ತು. ಕಾಂಗ್ರೆಸ್​ ಎಂಎಲ್​ಸಿ ಪ್ರಕಾಶ್ ರಾಥೋಡ್(Prakash Rathod) ಅವರು ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಿದ್ದ ದೃಶ್ಯ ಮಾಧ್ಯಮಗಳ ಕ್ಯಾಮರಾದಲ್ಲಿ ಸೆರೆಯಾಗಿದೆ. ಇಡೀ ರಾಜ್ಯವನ್ನು ಪ್ರತಿನಿಧಿಸುವ ಶಾಸಕರುಗಳು ಕೂರುವ ಪ್ರಜಾ ದೇಗುಲದಲ್ಲಿ ಇಂತಹ ಅಸಹ್ಯ ವರ್ತನೆ ತೋರಿದ ಎಂಎಲ್​ಸಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ನೈತಿಕತೆಯ ಪ್ರಶ್ನೆಗೆ ಸ್ವತಃ ಆ ಎಂಎಲ್​ಸಿ ಜತೆಗೆ ಕಾಂಗ್ರೆಸ್​ ಪಕ್ಷದ ಮುಖಂಡರೂ ಸ್ಪಷ್ಟನೆ ನೀಡಬೇಕು ಎಂಬ ಆಗ್ರಹ ಕೇಳಿಬಂದಿದೆ. 


BIG NEWS: ದ್ವಿತೀಯ PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಫುಲ್ ಡಿಟೈಲ್!


ಈ ಘಟನೆ ಕುರಿತು ಮಾತನಾಡಿದ ಮಾತನಾಡಿದ ಪ್ರಕಾಶ್ ರಾಠೋಡ್, ನಾನು ಶೇ.100ಕ್ಕೆ 101ರಷ್ಟು ಹೇಳುವೆ, ಅಶ್ಲೀಲ ವಿಡಿಯೋ ನೋಡಿಲ್ಲ. ನೂರಾರು ಗ್ರೂಪ್​ಗಳಲ್ಲಿ ಇದ್ದೇನೆ. ಸಾವಿರಾರು ವಿಡಿಯೋ ಇವೆ. ಸ್ಟೋರೇಜ್ ಫುಲ್ ಆಗಿತ್ತು. ಅದನ್ನ ಡಿಲೀಟ್ ಮಾಡ್ತಿದ್ದೆ. ಅದು ಅಶ್ಲೀಲ ವಿಡಿಯೋನಾ? ಅನ್ನೋದೂ ನನಗೆ ಗೊತ್ತಿಲ್ಲ.. ಎಂದರು.


Nikhil Kumaraswamy: ಜೆಡಿಎಸ್ ಮುಂದಿನ ಚುನಾವಣಾ ಪ್ಲ್ಯಾನ್ ಬಿಚ್ಚಿಟ್ಟ ನಿಖಿಲ್ ಕುಮಾರಸ್ವಾಮಿ..!


ನಾನು ಕೇಳಿದ ಪ್ರಶ್ನೆಗೆ ಉತ್ತರ ಕೊಡಬೇಕಿತ್ತು. ಕ್ಲಾರಿಫಿಕೇಷನ್ ಮೇಲೆ ಉತ್ತರ ಕೊಡುವಾಗ ಮಾಹಿತಿ ನೋಡುತ್ತಿದ್ದೆ. ಆಗ ಮೊಬೈಲ್ ಓಪನ್ ಆಗಿದೆ. ನನ್ನ ಮೊಬೈಲ್​ ಸ್ಟೋರೇಜ್​ ಫುಲ್​ ಆಗಿತ್ತು. ಹಾಗಾಗಿ ನಾನು ಯಾವುದನ್ನೂ ನೋಡದೆ ಬಂದಿರುವ ಮೆಸೇಜ್​ ಮತ್ತು ವಿಡಿಯೋ ಡಿಲೀಟ್ ಮಾಡ್ತಿದ್ದೆ. ನನಗೆ ಯಾರೂ ಅಶ್ಲೀಲ ವಿಡಿಯೋ ಕಳಿಸಿರಲಿಲ್ಲ ಎಂದು ಸ್ಪಷ್ಟನೆ ನೀಡಿದರು.


Budget 2021: ಬಜೆಟ್ ಮಂಡನೆಗೆ ಸಿಎಂ ಬಿಎಸ್ ವೈ ತಯಾರಿ: ಪೂರ್ವಭಾವಿ ಸಭೆಗೆ ಡೇಟ್ಸ್ ಫಿಕ್ಸ್!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy


ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.