ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಮತ್ತೊಮ್ಮೆ ಹರಿಹಾಯ್ದಿದ್ದಾರೆ.


COMMERCIAL BREAK
SCROLL TO CONTINUE READING

ಮಂಡ್ಯ ಗ್ಯಾರಂಟಿ ಸಮಾವೇಶದಲ್ಲಿ 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್‌ ಪಕ್ಷವೇ ಕಾರಣ ಎಂದು ಸತ್ಯ ಒಪ್ಪಿಕೊಂಡ ಸಿದ್ದರಾಮಯ್ಯ ಅವರ ಸತ್ಯಸಂಧತೆಗೆ ಮಾಜಿ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ.


ಮಂಡ್ಯ ಜಿಲ್ಲೆಯ ಗ್ಯಾರಂಟಿಗಳ 2ನೇ ಸಮಾವೇಶದಲ್ಲಿ ಅಲವತ್ತುಕೊಂಡ ಸಿಎಂ ಸಿದ್ನದರಾಮಯ್ಯನವರೇ.. ಕೊನೆಗೂ ಸತ್ಯ ನುಡಿದಿದ್ದೀರಿ! ಸುಳ್ಳುರಾಮಯ್ಯ ಬಿರುದಾಂಕಿತರಾದ ನೀವು, ಕೊನೆಗೂ ಸತ್ಯ ಕಕ್ಕಿದ್ದೀರಿ! ಸುಳ್ಳುರಾಮಯ್ಯ ನೆಂಬ ಕುಖ್ಯಾತಿಯಿಂದ ಹೊರಬರಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೀರಿ. ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರೆ.


ಸತ್ಯ ಗಂಟಲಲ್ಲಿ ಸಿಕ್ಕಿಕೊಂಡ ಬಿಸಿತುಪ್ಪದಂತೆ.. ಕಕ್ಕಲೇಬೇಕು. 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಆಯ್ಕೆಯಾದ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸೇ ಕಾರಣ ಎಂದು ಸ್ವತಃ ನೀವೇ ಒಪ್ಪಿಕೊಂಡಿದ್ದೀರಿ. ನಿಮ್ಮದೇ ಮಾತುಗಳಲ್ಲಿ ಹೇಳುವುದಾದರೆ.. ಸುಮಲತಾ ಬಿಜೆಪಿಯಿಂದ ಗೆದ್ದಿದ್ದಲ್ಲ.. ಕಾಂಗ್ರೆಸ್‌ ವೋಟುಗಳಿಂದಲೇ ಗೆದ್ದಿದ್ದು ಆಯಮ್ಮ..!! ಇದಲ್ಲವೇ ನಂಬಿಕೆದ್ರೋಹ..? ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ನಿಮ್ಮ ಗೋಮುಖವ್ಯಾಘ್ರತನ ಅರಿಯಲು ಇಷ್ಟು ಸಾಕು. ಅಂದು ಕಾಂಗ್ರೆಸ್ ಮೈತ್ರಿ ಪಕ್ಷ, ನಿಖಿಲ್‌ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿ. ಅವರ ಜತೆಯಲ್ಲೇ ಪ್ರಚಾರದ ಸೋಗಿನಾಟವಾಡಿ, ಮಾಧ್ಯಮಗಳ ಮುಂದೆ ಗೆಲ್ಲಿಸುತ್ತೇವೆಂದು ಪೋಸು ಕೊಡುತ್ತಲೇ ನಿಖಿಲ್ ಸುತ್ತ ಶಕುನಿವ್ಯೂಹ ವನ್ನೇ ರಚಿಸಿದ ಕಲಿಯುಗ ಶಕುನಿ ನೀವಲ್ಲದೆ ಮತ್ತ್ಯಾರು ಸಿದ್ದರಾಮಯ್ಯನವರೇ? ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನೆ ಮಾಡಿದ್ದಾರೆ.


ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗದೇ? ಬೂದಿ ಮುಚ್ಚಿದ ಕೆಂಡ ತಣ್ಣಗಿರಲು ಸಾಧ್ಯವೇ?  ಕುದಿಯುವ ಕುಲುಮೆಯಂತಿರುವ ನಿಮ್ಮ ಉದರಹುರಿ ಗೆ ತಂಪೆನ್ನುವುದುಂಟೆ? 5 ವರ್ಷಗಳ ನಂತರವಾದರೂ ಸತ್ಯ ಕಕ್ಕಿದ್ದೀರಿ ಹಾಗೂ ನಂಬಿದವನ ಮನೆ ನಾಶವಾಗಲಿ ಎನ್ನುವ ನಿಮ್ಮಹೇಯತನ ಬಯಲಾಗಿದೆ. ಸತ್ಯಮೇಯ ಜಯತೆ. ಇದಿಷ್ಟೇ ನನ್ನ ಕಳಕಳಿ ಮತ್ತು ನಂಬಿಕೆ ಎಂದು ಸಿದ್ದರಾಮಯ್ಯ ಅವರಿಗೆ ಕುಮಾರಸ್ವಾಮಿ ಅವರು ಟಾಂಗ್‌ ನೀಡಿದ್ದಾರೆ.


ಸಕ್ಕರೆ ಕಾರ್ಖಾನೆ ಬಗ್ಗೆ ಹೇಳಿದ್ದೀರಿ. ಬಜೆಟ್‌ʼನಲ್ಲಿ ‌ಘೋಷಣೆ ಮಾಡಿದ್ದೀರಿ, ಸರಿ.. ದುಡ್ಡು ಎಲ್ಲಿಟ್ಟಿದ್ದೀರಿ. ನಾನು 2019ರ ಬಜೆಟ್‌ ನಲ್ಲಿಯೇ ಈ ಕಾರ್ಖಾನೆಗೆ 100 ಕೋಟಿ ತೆಗೆದಿರಿಸಿದ್ದೆ. ಎಲ್ಲಿ ಹೋಯಿತು ಆ ದುಡ್ಡು? ಇದರ ಬಗ್ಗೆ ಗ್ಯಾರಂಟಿ ಸಮಾವೇಶದಲ್ಲಿ ಚಕಾರ ಎತ್ತಿಲಿಲ್ಲವೇಕೆ ಸಿದ್ದರಾಮಯ್ಯನವರೇ? ಇಂಥ ಆತ್ಮವಂಚನೆ ಏತಕ್ಕೆ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.


ತನ್ನ ತಲೆಗೇ ಹರಳೆಣ್ಣೆ ಇಲ್ಲ, ಪಕ್ಕದವನಿಗೆ ಸಂಪಂಗೆಣ್ಣೆ ಕೊಟ್ಟನಂತೆ ನಿಮ್ಮಂಥವನೊಬ್ಬ! ನಿಮ್ಮ ವೈಖರಿ ಹಾಗಿದೆ. ಕನ್ನಡಿಗರು ಬರದ ಬೆಂಕಿಯಲ್ಲಿ ಬೇಯುತ್ತಿದ್ದರೆ ನಿಮ್ಮ ಸರಕಾರ ಕದ್ದೂಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ! ಒಂದು ಕೈಲಿ ಅಗ್ಗದ ಗ್ಯಾರಂಟಿ ಕೊಟ್ಟು ಹತ್ತು ಕೈಗಳಲ್ಲಿ ಬದುಕಿನ ಗ್ಯಾರಂಟಿ ಕಿತ್ತುಕೊಳ್ಳುತ್ತಿದ್ದೀರಿ? ಇದು ನ್ಯಾಯವೇ? ಎಂದು ಮಾಜಿ ಮುಖ್ಯಮಂತ್ರಿಗಳು ತೀಕ್ಷ್ಣವಾಗಿ ಕೇಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.