`ಅಕ್ಕಿಯ ವಿಚಾರದಲ್ಲಿ ಕಾಂಗ್ರೆಸ್ ಪಾರ್ಟಿಯು ಕೆಟ್ಟ ರಾಜಕಾರಣ ಮಾಡುವುದು ಬೇಡ`
ಅಕ್ಕಿ ಕೊಡುವ ವಿಚಾರದಲ್ಲಿ ಕಾಂಗ್ರೆಸ್ ಪಾರ್ಟಿಯು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು, ಬಿಜೆಪಿಯನ್ನು, ಪ್ರಧಾನಿ ನರೇಂದ್ರ ಮೋದಿಯವರನ್ನು ಎಳೆದು ತರಲು ಹರಸಾಹಸ ಮಾಡುತ್ತಿದೆ ಎಂದು ಬಿಜೆಪಿ ನಾಯಕ ಸಿಟಿ ರವಿ ಕಿಡಿ ಕಾರಿದ್ದಾರೆ.
ಬೆಂಗಳೂರು: ಅಕ್ಕಿ ಕೊಡುವ ವಿಚಾರದಲ್ಲಿ ಕಾಂಗ್ರೆಸ್ ಪಾರ್ಟಿಯು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು, ಬಿಜೆಪಿಯನ್ನು, ಪ್ರಧಾನಿ ನರೇಂದ್ರ ಮೋದಿಯವರನ್ನು ಎಳೆದು ತರಲು ಹರಸಾಹಸ ಮಾಡುತ್ತಿದೆ ಎಂದು ಬಿಜೆಪಿ ನಾಯಕ ಸಿಟಿ ರವಿ ಕಿಡಿ ಕಾರಿದ್ದಾರೆ.
ಒಂದು ರಾಜ್ಯದ ಮುಖ್ಯಮಂತ್ರಿ ಎರಡು ಲಕ್ಷ ಟನ್ ಅಕ್ಕಿ ಬೇಡಿಕೆಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳಿಗಾಗಲಿ, ಕೇಂದ್ರ ಆಹಾರ ನಾಗರಿಕ ಸರಬರಾಜು ಸಚಿವರಿಗಾಗಲಿ ಬೇಡಿಕೆ ಇಡಲೇ ಇಲ್ಲ. ಅವರೊಂದಿಗೆ ಮಾತನಾಡುವ ಕನಿಷ್ಠ ಸೌಜನ್ಯವನ್ನೂ ತೋರಿಸಲಿಲ್ಲ.
ರಾಜ್ಯ ಸರ್ಕಾರ 2 ಲಕ್ಷ ಟನ್ ಅಕ್ಕಿಗಾಗಿ FCI ವಿಭಾಗೀಯ ವ್ಯವಸ್ಥಾಪಕರಿಗೆೆ 9/6/23 ಪತ್ರ ಮುಖೇನ ವಿನಂತಿ ಮಾಡುತ್ತಾರೆ. 12/6/23ರಂದು ವಿಭಾಗೀಯ ವ್ಯವಸ್ಥಾಪಕ ಇದಕ್ಕೆ ಅನುಮತಿ ನೀಡುತ್ತಾರೆ.
ಆದರೆ ಈ ಅನುಮತಿ ನೀಡುವ ಮುನ್ನ ಅವರು ಕೇಂದ್ರ ಕಚೇರಿಯನ್ನು ಸಂಪರ್ಕಿಸದೆ ಪ್ರಾಯಶ: ಏಕಮುಖವಾಗಿ ತೀರ್ಮಾನ ಕೈಗೊಂಡ ಹಾಗೆ ಭಾಸವಾಗುತ್ತದೆ.
13/6/23 ರಂದು ಆಹಾರ ಮತ್ತು ನಾಗರಿಕ ಸರಬರಾಜು ಕಚೇರಿಯಿಂದ FCI ಕೇಂದ್ರ ಕಚೇರಿಗೆ OMSS ಕೋಟಾದಡಿ ಅಕ್ಕಿ ಮಾರಾಟವನ್ನು ನಿರ್ಬಂಧಿಸಿರುವ ಬಗ್ಗೆ ಆದೇಶ ಬರುತ್ತದೆ. ಈ ತೀರ್ಮಾನವನ್ನು 08/06/23 ರಂದು ನಡೆದ ಸಭೆಯಲ್ಲಿ ತೀರ್ಮಾನವಾಗಿತ್ತು.
ಈ ಪತ್ರವು ಕರ್ನಾಟಕ ಸರ್ಕಾರಕ್ಕೆ ಬರೆದ ಪತ್ರವಲ್ಲ ಬದಲಿಗೆ FCI ಮುಖ್ಯಸ್ಥರಿಗೆ ಬರೆದಿರುವ ಪತ್ರವಿದು. ನೆನಪಿಡಿ, ಈ ನಿರ್ಧಾರ ರಾಜ್ಯ ಸರ್ಕಾರ FCI ಗೆ ಪತ್ರ ಬರೆಯುವ ಒಂದು ದಿನ ಮುಂಚಿತವಾಗಿ ತೆಗೆದುಕೊಂಡ ತೀರ್ಮಾನ.
ಕೇಂದ್ರ ಸರಕಾರ ಮುಂಗಾರು ಮಳೆ , ಬೆಳೆಯನ್ನು ಆಧರಿಸಿ ಕೇಂದ್ರದಲ್ಲಿರುವ ದಾಸ್ತಾನನ್ನು ಪರಿಗಣಿಸಿ ಫುಡ್ ಸೆಕ್ಯೂರಿಟಿ ಆಕ್ಟ್ ಪ್ರಕಾರ ಉಚಿತವಾಗಿ ಅಕ್ಕಿ ಕೊಡಬೇಕಾಗಿರುವ ಸರಬರಾಜಿಗೆ ಯಾವುದೇ ಭಂಗವಾಗದಂತೆ ಕಾಲಕಾಲಕ್ಕೆ ಇಂತಹ ನಿರ್ಣಯ ತೆಗೆದುಕೊಳ್ಳುವುದು ಸರ್ವೇಸಾಮಾನ್ಯ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ